Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ...

ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು: ಸುಲೋಚನಾ ಪಚ್ಚಿನಡ್ಕ

ವಾರ್ತಾಭಾರತಿವಾರ್ತಾಭಾರತಿ17 Oct 2026 6:27 PM IST
share
ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು: ಸುಲೋಚನಾ ಪಚ್ಚಿನಡ್ಕ

ಉಡುಪಿ, ಅ.17: ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು ಮನುಷ್ಯನಲ್ಲಿ ಪ್ರಶ್ನಿಸುವ, ವಿಶ್ಲೇಷಿಸುವ ಮತ್ತು ಹೋಲಿಕೆ ಮಾಡಿ ನೋಡುವ ಮನೋ ಭಾವವನ್ನು ಬೆಳೆಸುತ್ತದೆ ಎಂದು ಕಾರ್ಕಳದ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಹಾಗೂ ಲೇಖಕಿ ಸುಲೋಚನಾ ಪಚ್ಚಿನಡ್ಕ ಹೇಳಿದ್ದಾರೆ.

ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಟ್ಟಿದುದನ್ನು ಪುನರ್ಚಿಂತನೆಯ ಮೂಲಕ ಹೊಸದಾಗಿ ಕಟ್ಟುವ ಕಲೆ ಸಾಹಿತ್ಯಕ್ಕಿದೆ. ಪುಸ್ತಕಗಳು ಏಕಾಗ್ರತೆಯನ್ನು ಬೆಳೆಸುವ ಉತ್ತಮ ಸಂಗಾತಿಗಳು. ಮೊಬೈಲ್ ಬಳಕೆಯ ತ್ವರಿತ ಆಕರ್ಷಣೆಯ ನಡುವೆ, ಪುಸ್ತಕಗಳನ್ನು ದೀರ್ಘಕಾಲದ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಓದುವ ಹವ್ಯಾಸ ಸಂವೇದನೆ, ಆಲಿಸುವ ಸಾಮರ್ಥ್ಯ ಮತ್ತು ಸೌಜನ್ಯಯುತ ಸಂವಹನವನ್ನು ವೃದ್ಧಿಸಲು ಸಹಾಯ ಮಾಡುತ್ತದೆ. ಸಾಹಿತ್ಯದ ವಿದ್ಯಾರ್ಥಿಗಳು ಬದುಕಿನ ಸವಾಲುಗಳನ್ನು ಎದುರಿಸುವ ಶಕ್ತಿ ಬೆಳೆಸಿಕೊಂಡು, ತಮ್ಮ ಪ್ರಯತ್ನದಿಂದ ಬದುಕನ್ನು ಮುನ್ನಡೆಸಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನ ಮಾತನಾಡಿ, ಸಾಹಿತ್ಯವು ಮನುಷ್ಯನನ್ನು ಪ್ರಕೃತಿ ಯೊಂದಿಗೆ ಅನುಸಂಧಾನಗೊಳಿಸಿ, ಮನಸ್ಸುಗಳನ್ನು ಅರಳಿಸುವ ಸೃಜನಶೀಲ ಶಕ್ತಿಯಾಗಿದೆ ಎಂದು ತಿಳಿಸಿದರು.

ಸಾಹಿತ್ಯವು ಓದುಗರನ್ನು ಚಿಂತನೆಗೆ ಹಚ್ಚುವ, ಸಂವೇದನೆಗಳನ್ನು ಅರಳಿಸುವ ಮತ್ತು ಮನುಷ್ಯರನ್ನು ಒಗ್ಗೂಡಿಸುವ ಶಕ್ತಿಯನ್ನು ಹೊಂದಿದೆ. ಸಾಹಿತ್ಯದ ಆಳ ಮತ್ತು ಅಗಲವನ್ನು ಅರಿಯುವ ಅಧ್ಯಯನಶೀಲತೆ, ಜೀವಪರ ಚಿಂತನೆ ಹಾಗೂ ಸೃಜನಶೀಲ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಸಾಹಿತ್ಯ ಸಂಘದ ಸಂಚಾಲಕಿ ರಮ್ಯಾ ಕೆ.ಐತಾಳ್ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಬಿ. ಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಚರ ಅತಿಥಿಗಳನ್ನು ಪರಿಚಯಿಸಿದರು. ನಿಖಿತ ಸ್ವಾಗತಿಸಿದರು. ನಾಗರತ್ನ ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕಿ ರೇಖಾ ಎಸ್.ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X