Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ...

ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂಧಿಸಿ: ಉಪ್ಪೂರಿನಲ್ಲಿ ಪ್ರಜಾಸೇವಾ ಆಂದೋಲನದ ಸಭೆ

ವಾರ್ತಾಭಾರತಿವಾರ್ತಾಭಾರತಿ17 Oct 2026 7:23 PM IST
share
ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂಧಿಸಿ: ಉಪ್ಪೂರಿನಲ್ಲಿ ಪ್ರಜಾಸೇವಾ ಆಂದೋಲನದ ಸಭೆ

ಉಡುಪಿ: ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕ ರಿಂದ ಸಲ್ಲಿಕೆಯಾಗುವ ಕುಂದುಕೊರತೆಯ ಅರ್ಜಿ ಹಾಗೂ ಅವರ ಸಮಸ್ಯೆ ಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರಗಳನ್ನು ಕೈಗೊಂಡಲ್ಲಿ ಮಾತ್ರ ಸರಕಾರದ ಇಂತಹ ಕಾರ್ಯಕ್ರಮಗಳು ಯಶಸ್ಸು ಸಾಧಿಸುತ್ತವೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದ್ದಾರೆ.

ಶನಿವಾರ ಉಪ್ಪೂರು ಗ್ರಾಮದ ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್‌ನ ಸೌಹಾರ್ದ ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಬ್ರಹ್ಮಾವರ ಇವರ ಸಹಯೋಗದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರದ ನೂತನ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಯ ಮೂಲಕ ಜನರ ಬಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಅವರ ಸಮಸ್ಯೆಗಳಿಗೆ ಅವರಿರುವಲ್ಲಿಯೇ ಪರಿಹಾರ ನೀಡುವ ಕಾರ್ಯ ಕ್ರಮ ಇದಾಗಿದ್ದು, ಆಡಳಿತ ಯಂತ್ರಗಳಿಗೆ ಚುರುಕು ನೀಡಿ, ಜನರ ಸಮಸ್ಯೆಗಳಿಗೆ ತುರ್ತು ಸ್ಪಂದಿಸಿ, ಅವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪ್ರತೀ ಶನಿವಾರಗಳಂದು ಪ್ರಜಾಸೇವಾ ಆಂದೋಲನ ಸಭೆಗಳನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದರು.

ಉಡುಪಿ ಜಿಲ್ಲೆಯ ಜನರು ಸಮಸ್ಯೆಗಳು ಬಂದಾಗ ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬಳಿಗೆ ತೆರಳಿ ತಮ್ಮ ಕೆಲಸಗಳನ್ನು ಮಾಡಿಸಿಕೊಂಡು ಬರುತ್ತಿದ್ದಾರೆ. ಜಿಲ್ಲೆಯು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಇರಲು ಇದೂ ಒಂದು ಕಾರಣ ಎಂದ ಅವರು, ಪ್ರಸ್ತುತ ವಿವಿಧ ಇಲಾಖೆಗಳಲ್ಲಿರುವ ಸಿಬ್ಬಂದಿಗಳ ಕೊರತೆ ನೀಗಿಸು ಅವುಗಳನ್ನು ಭರ್ತಿ ಮಾಡುವ ಮೂಲಕ ಜನರ ಸೇವೆಗೆಅನುಕೂಲ ಮಾಡಿಕೊಡಬೇಕು ಎಂದರು.

ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಮಾತನಾಡಿ, ಪ್ರಜಾಸೇವೆ ಎನ್ನುವುದು ಜನರ ಸೇವೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಇರುವ ಉತ್ತಮ ಅವಕಾಶವಾಗಿದೆ. ಸಾರ್ವಜನಿಕರ ಎಲ್ಲಾ ರೀತಿಯ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ಸಿಗುವ ಈ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ನಾಗರಿಕರ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಅವರ ಮನೆ ಬಾಗಿಲಿಗೆ ತಲುಪಿಸಲು ಹಾಗೂ ಅವರ ಅಹವಾಲುಗಳಿಗೆ ಗುಣಾತ್ಮಕ ಸ್ಪಂದನೆ ನೀಡುವ ಉದ್ದೇಶ ದಿಂದ ರಾಜ್ಯ ಸರಕಾರ ಸೆಪ್ಟಂಬರ್ 5ರಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರತೀ ಶನಿವಾರ ರಾಜ್ಯದಾ ದ್ಯಂತ ನಡೆಸುತ್ತಿದ್ದು, ತಿಂಗಳ ಒಂದನೇ ಮತ್ತು ಮೂರನೇ ಶನಿವಾರದಂದು ಜಿಲ್ಲಾ ಹಂತದ ಪ್ರಜಾಸೇವಾ ಸಭೆ ಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಎರಡು ಮತ್ತು ನಾಲ್ಕನೇ ಶನಿವಾರದಂದು ತಾಲೂಕು ಮಟ್ಟದ ಸಭೆಯನ್ನು ಹೋಬಳಿ ಮಟ್ಟದಲ್ಲಿ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಶೇ.25 ರ ಅನುದಾನದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 43 ಅಹವಾಲುಗಳು ಸಲ್ಲಿಕೆಯಾದವು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್, ಉಪ್ಪೂರು ಗ್ರಾಮ ಪಂಚಾಯತ್‌ನ ಆಡಳಿತಾಧಿಕಾರಿ ಸುಧೀರ್ ಕುಮಾರ್ ಕೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಸಿದ್ದೇಶ್ ಸ್ವಾಗತಿಸಿ, ಬ್ರಹ್ಮಾವರ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X