Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೊಸ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಹಳೆ...

ಹೊಸ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಹಳೆ ಪರಿಕರಗಳ ಅಳವಡಿಕೆ: ಕರವೇಯಿಂದ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ19 Oct 2026 8:17 PM IST
share
ಹೊಸ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಹಳೆ ಪರಿಕರಗಳ ಅಳವಡಿಕೆ: ಕರವೇಯಿಂದ ಪ್ರತಿಭಟನೆಯ ಎಚ್ಚರಿಕೆ

ಉಡುಪಿ, ಅ.19: ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಹಳೆಯ ಪರಿಕರ ಹಾಗೂ ಉಪಕರಣಗಳನ್ನು ಅಳವಡಿಸಿರುವುದನ್ನು ತೀವ್ರವಾಗಿ ವಿರೋಧಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ), ಕೂಡಲೇ ಇದನ್ನು ನಿಲ್ಲಿಸಿ ಹೊಸ ಪರಿಕರ ಹಾಗೂ ಉಪಕರಣಗಳನ್ನು ಅಳವಡಿಸದಿದ್ದ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಸೋಮವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರಾವೇ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ, ಈಗಾಗಲೇ ನಿರ್ಮಾಣಗೊಂಡಿರುವ ನೂತನ ಕಟ್ಟಡದಲ್ಲಿ ಸಂಪೂರ್ಣ ಹೊಸ ಸೌಲಭ್ಯಗಳೊಂದಿಗೆ ಆಸ್ಪತ್ರೆ ಕಾರ್ಯಾ ರಂಭಿಸಬೇಕು ಎಂದು ಸಂಘಟನೆ ಬಲವಾಗಿ ಆಗ್ರಹಿಸುತ್ತದೆ ಎಂದು ಹೇಳಿದರು.

ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಬಳಸಿರುವ ಹಾಳಾದ, ತುಕ್ಕುಹಿಡಿದ ಮಂಚ, ಹಾಸಿಗೆ ಸೇರಿದಂತೆ ಅಗತ್ಯ ಪರಿಕರ, ಉಪಕರಣಗಳನ್ನು ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ವರ್ಗಾಯಿಸಿರುವುದನ್ನು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಇದನ್ನು ಕೂಡಲೇ ಬದಲಿಸದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಕರವೇ ಉಡುಪಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ, ಆಸ್ಪತ್ರೆಯ ಕಾರ್ಯಾರಂಭ ಕ್ಕಾಗಿ ಇತ್ತೀಚೆಗೆ ಸಂಘಟನೆ ಇತ್ತೀಚೆಗೆ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ನವೆಂಬರ್ 5ರೊಳಗೆ ನೂತನ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸುವುದಾಗಿ ಜಿಲ್ಲಾಡಳಿತ ಭರವಸೆ ನೀಡಿತ್ತು ಎಂದು ತಿಳಿಸಿದರು.

ಆದರೆ, ಈಗ ತರಾತುರಿಯಲ್ಲಿ ಹಳೆಯ ಆಸ್ಪತ್ರೆಯಲ್ಲಿದ್ದ ಮಂಚಗಳು ಸೇರಿದಂತೆ ಇತರ ಉಪಕರಣಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತಿದೆ. ಇದು ತಮ್ಮ ಬೇಡಿಕೆಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ ಅವರು, ಗುಜರಿ ಸಾಮಾನುಗಳನ್ನು ಹೊಸ ಕಟ್ಟಡಕ್ಕೆ ತಂದು ಹಾಕಿದರೆ ಅದನ್ನು ಹೇಗೆ ನಿಲ್ಲಿಸಬೇಕೆಂದು ನಮಗೆ ಗೊತ್ತಿದೆ. ಕಟ್ಟಡ ನಿರ್ಮಾಣಗೊಂಡ ಒಂದು ವರ್ಷ ಆದರೂ ಇನ್ನು ಅದನ್ನು ಉದ್ಘಾಟಿಸಲು ಮೀನಮೇಷ ಎಣಿಸಲಾಗುತ್ತಿದೆ. ನಮ್ಮ ಬೇಡಿಕೆ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದರೆ ಮತ್ತೆ ತೀವ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

250 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ 2021ರ ಆಗಸ್ಟ್ 12ರಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದರು. 115 ಕೋಟಿ ರೂ. ಅಂದಾಜು ವೆಚ್ಚದ ಯೋಜನೆಗೆ 2020ರ ನವೆಂಬರ್‌ನಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಹೈದರಾಬಾದ್ ಮೂಲದ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಲಾಗಿದ್ದು, 2021ರ ಸೆಪ್ಟೆಂಬರ್ 8ರಂದು ಕಾರ್ಯಾದೇಶ ಹೊರಡಿಸಲಾಗಿತ್ತು. 2025ರಲ್ಲಿ ಕಟ್ಟಡ ನಿರ್ಮಾಣ ಮುಗಿದಿದ್ದು, ಆರ್ಥಿಕ ನೆರವಿನ ಗೊಂದಲದ ಕಾರಣದಿಂದ ಅದರ ಉದ್ಘಾಟನೆಯನ್ನು ಮುಂದಕ್ಕೆ ಹಾಕಲಾಗುತ್ತಿದೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ, ಜಿಲ್ಲಾಧ್ಯಕ್ಷ ಸುಧೀರ್ ಪೂಜಾರಿ, ಮಹಿಳಾ ಅಧ್ಯಕ್ಷೆ ದೇವಕಿ ಬಾರಕೂರು, ಪ್ರಧಾನ ಕಾರ್ಯದರ್ಶಿ ಸುಮಾ ಆಚಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X