ಅಲ್ಪಸಂಖ್ಯಾತರ ಕುಂದುಕೊರತೆ ಸಭೆ: ಅಹವಾಲು ಸಲ್ಲಿಕೆಗೆ ಅವಕಾಶ

ಉಡುಪಿ, ಅ.21: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹ್ಮದ್ ಉಡುಪಿ ಜಿಲ್ಲೆಯಲ್ಲಿ ಅಕ್ಟೋಬರ್ 28ರಂದು ಪ್ರವಾಸ ಕೈಗೊಳ್ಳಲಿದ್ದು, ಅಂದು ಅಪರಾಹ್ನ 3 ರಿಂದ 4 ಗಂಟೆಯವರೆಗೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ)ಯನ್ನು ನಡೆಸಲಿದ್ದಾರೆ.
ಈ ಸಭೆಯಲ್ಲಿ ಸಾರ್ವಜನಿಕರಿಗೆ ಅಹವಾಲುಗಳನ್ನು ಸಲ್ಲಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.




