Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಪ್ರತಿ ಊರು ಜಂತರ್‌ಮಂತರ್...ಪ್ರತಿ...

‘ಪ್ರತಿ ಊರು ಜಂತರ್‌ಮಂತರ್...ಪ್ರತಿ ಗಲ್ಲಿಯೂ ಜಂತರ್‌ಮಂತರ್ ...’

ಎಸ್‌ಐಆರ್ ರದ್ಧತಿಗೆ ಆಗ್ರಹಿಸಿ ಅ.23ರಂದು ಸಹಬಾಳ್ವೆ ನೇತೃತ್ವದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Oct 2026 9:29 PM IST
share
‘ಪ್ರತಿ ಊರು ಜಂತರ್‌ಮಂತರ್...ಪ್ರತಿ ಗಲ್ಲಿಯೂ ಜಂತರ್‌ಮಂತರ್ ...’

ಉಡುಪಿ: ಸಂವಿಧಾನಿಕ ಪ್ರಜಾಪ್ರಭುತ್ವದ ರಕ್ಷಣೆಗಾಗಿ, ಕೇಂದ್ರ ಚುನಾವಣಾ ಆಯೋಗದ ಅಕ್ರಮ ಎಸ್‌ಐಆರ್‌ನ್ನು ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯೋಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಯನ್ನು ಆಗ್ರಹಿಸಿ ಅ.23ರ ಶುಕ್ರವಾರ ದೇಶಾದ್ಯಂತ ನಡೆಯುವ ಪ್ರತಿಭಟನೆಯಂತೆ ಉಡುಪಿಯಲ್ಲೂ ಸಹಬಾಳ್ವೆ ಉಡುಪಿ ಹಾಗೂ ಸಹಭಾಗಿ ಸಂಘಟನೆಗಳಿಂದ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಹಬಾಳ್ವೆಯ ಸಂಚಾಲಕ ಕೆ.ಫಣಿರಾಜ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ಊರು ಜಂತರ್‌ಮಂತರ್... ಪ್ರತಿ ಗಲ್ಲಿಯೂ ಜಂತರ್‌ಮಂತರ್’ ಘೋಷವಾಕ್ಯದೊಂದಿಗೆ ಅ.23ರ ಬೃಹತ್ ಪ್ರತಿಭಟನೆಯನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.

ಅಕ್ರಮ ಎಸ್‌ಐಆರ್ ರದ್ಧತಿ, ಅದರ ರುವಾರಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಪದಚ್ಯುತಿ ಮತ್ತು ಅವರ ವಿರುದ್ಧ ಕಾನೂನು ಕ್ರಮಗಳಿಗೆ ಆಗ್ರಹಿಸಿ 23ರಂದು ದೇಶವ್ಯಾಪಿ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಸಲು ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು, ವಿವಿಧ ನಾಗರಿಕ ವೇದಿಕೆಗಳು ಹಾಗು ರಾಜಕೀಯ ಪಕ್ಷಗಳು ಒಗ್ಗೂಡಿ ಕರೆ ನೀಡಿವೆ. ಈ ಪ್ರಯುಕ್ತ ಸಹಬಾಳ್ವೆ ಉಡುಪಿ ಹಾಗು ಸಹಭಾಗಿ ಸಂಘಟನೆ-ಪಕ್ಷಗಳ ಐಕ್ಯ ವೇದಿಕೆಯ ವತಿಯಿಂದ ಉಡುಪಿಯಲ್ಲಿ ಕಾಲ್ನಡಿಗೆ ಜಾಥ ಮತ್ತು ಸಾರ್ವಜನಿಕ ಸಭೆ ನಡೆಸುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಬೇಡಿಕೆಗಳು: *ಅಕ್ರಮ ಎಸ್‌ಐಆರ್ ರದ್ದುಗೊಳಿಸಬೇಕು. *ಎಸ್‌ಐಆರ್‌ನ್ನು ಸಂವಿಧಾನಕ್ಕೆ ವಿರುದ್ಧವಾಗಿ ಆಯೋ ಜಿಸಿ 13 ಕೋಟಿ ಮತದಾರರ ಮತದಾನದ ಹಕ್ಕನ್ನು ಕಿತ್ತುಕೊಂಡಿರುವ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. *ತಾನು ನಡೆಸಿದ ಅಕ್ರಮಗಳಿಗೆ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನುಕ್ರಮ ಜರಗಿಸಬೇಕು. *2023ರ ಚುನಾವಣಾ ಆಯುಕ್ತರ ನೇಮಕಾತಿ ನಿಯಮವು ಸಂವಿಧಾನದ ಆಶಯಕ್ಕೆ ಮಾರಕವಾಗಿದ್ದು ಈ ನಿಯಮವನ್ನು ರದ್ದುಪಡಿಸಬೇಕು.*ನಿಷ್ಪಕ್ಷಪಾತವಾದ ಚುನಾವಣಾ ಆಯುಕ್ತರ ನೇಮಕಕ್ಕೆ ನಿಯಮವನ್ನು ರಚಿಸಬೇಕು.

ಎರಡನೇ ಸ್ವಾತಂತ್ರ್ಯ ಹೋರಾಟ: ಭಾರತದ ಪ್ರಜಾಪ್ರಭುತ್ವಕ್ಕೆ ಇಂದು ಎದುರಾಗಿರುವ ಭಯಾನಕ ಅಪಾಯವನ್ನು ತಪ್ಪಿಸಲು ಎರಡನೇ ಸ್ವಾತಂತ್ರ್ಯ ಹೋರಾಟವನ್ನು ನಡೆಸಬೇಕಾಗಿದೆ. ಈ ಚಳವಳಿಯ ಒಂದು ಭಾಗವಾಗಿ 23ರ ಪ್ರತಿಭಟನೆಯನ್ನು ಆಯೋಜಿಸಲಾಗುತ್ತಿದೆ ಎಂದು ಫಣಿರಾಜ್ ತಿಳಿಸಿದರು.

ಪ್ರಜಾಪ್ರಭುತ್ವ ಮಾರ್ಗದಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು ದಮನಿಸಲು ಹೊಸದಿಲ್ಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಸಭೆಗೆ ನಿಷೇಧ ಹೇರಿರುವ ಒಕ್ಕೂಟ ಸರಕಾರದ ಕ್ರಮವನ್ನು ಧಿಕ್ಕರಿಸುವ ಸಲುವಾಗಿ ‘ಪ್ರತಿ ಊರು ಜಂತರ್‌ಮಂತರ್’ ಘೋಷ ವಾಕ್ಯದಡಿ ಪ್ರತಿಭಟನೆ ನಡೆಯುತ್ತಿದೆ ಎಂದವರು ನುಡಿದರು.

ಕಾರ್ಯಕ್ರಮ: ಅ.23ರ ಶುಕ್ರವಾರ ಅಪರಾಹ್ನ 3:30ಕ್ಕೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಕ್ಲಾಕ್‌ ಟವರ್ ಬಳಿಯ ಗಾಂಧಿ ಪ್ರತಿಮೆಗೆ ಗೌರವಾರ್ಪಣೆ ಸಲ್ಲಿಸಿ ಕಾಲ್ನಡಿಗೆ ಮೆರವಣಿಗೆ ಆರಂಭಗೊಳ್ಳಲಿದೆ. ಮೆರವಣಿಗೆ ತ್ರಿವೇಣಿ ವೃತ್ತ, ಕೆ.ಎಂ.ಮಾರ್ಗ, ಹಳೆ ಡಯಾನ ವೃತ್ತ, ಕೋರ್ಟ್ ರಸ್ತೆ ಮಾರ್ಗವಾಗಿ ಜೋಡುಕಟ್ಟೆಗೆ ಬಂದು ಅಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.

ಪ್ರತಿಭಟನಾ ಸಭೆಯಲ್ಲಿ ಯುವ ಕಾಂಗ್ರೆಸ್ ನಾಯಕಿ ಭವ್ಯ ನರಸಿಂಹಮೂರ್ತಿ ಅವರು ಪ್ರಮುಖ ಭಾಷಣಕಾರ ರಾಗಿರುತ್ತಾರೆ. ಪ್ರತಿಭಟನೆಯಲ್ಲಿ ಸಹಬಾಳ್ವೆ ಉಡುಪಿಯೊಂದಿಗೆ ಮುಸ್ಲಿಂ ಒಕ್ಕೂಟ ಉಡುಪಿ, ದಸಂಸ ಅಂಬೇಡ್ಕರ್ ವಾದ ಉಡುಪಿ, ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ್, ಭಾರತೀಯ ಕ್ರೈಸ್ತ ಸಂಘಟನೆಗಳ ಒಕ್ಕೂಟ, ಸಿಐಟಿಯು, ಎಸ್‌ಐಓ ಉಡುಪಿ, ಸೌಹಾರ್ದ ಕರ್ನಾಟಕ ಉಡುಪಿ ಜಿಲ್ಲೆ, ಮಾನವ ಬಂಧುತ್ವ ವೇದಿಕೆ ಉಡುಪಿ, ಡಿವೈಎಫ್‌ಐ, ಎಸ್‌ಎಫ್‌ಐ, ಅಲ್ಪಸಂಖ್ಯಾತರ ವೇದಿಕೆ, ಜನವಾದಿ ಮಹಿಳಾ ಸಂಘಟನೆ, ಅಂಬೇಡ್ಕರ್ ಯುವಸೇನೆ, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಉಡುಪಿ, ಸುನ್ನೀ ಸಂಯುಕ್ತ ಜಮಾಅತ್ ಉಡುಪಿ, ಜಮಾತ್ ಇಸ್ಲಾಮಿ ಹಿಂದ್, ಜಿಲ್ಲಾ ಕಾಂಗ್ರೆಸ್ ಪಕ್ಷ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಸಿಪಿಎಂ, ಎಸ್‌ಡಿಪಿಐ ಕೈಜೋಡಿಸಲಿವೆ.

ಪತ್ರಿಕಾಗೋಷ್ಠಿಯಲ್ಲಿ ವಿವಿಧ ಪಕ್ಷಗಳಿಗೆ ಸೇರಿದ ಸುಂದರ್ ಮಾಸ್ತರ್, ಅಮೃತ್ ಶೆಣೈ, ಅಫ್ಘಾನ್ ಬಿ ಹೂಡೆ, ಲೂಯಿಸ್ ಡಿಸೋಜಾ, ಚಾರ್ಲ್ಸ್ ಅಂಬ್ಲೆರ್, ಇದ್ರಿಸ್ ಹೂಡೆ, ಮುಹಮ್ಮದ್ ಅಶ್ರಫ್, ಸುರೇಶ್ ಕಲ್ಲಾಗರ, ರಮೇಶ್ ಕಾಂಚನ್, ಮುಹಮ್ಮದ್ ಮೌಲ, ಇಸ್ಮಾಯಿಲ್ ಕಟಪಾಡಿ, ಅಝೀಜ್ ಉದ್ಯಾವರ, ಹರಿಪ್ರಸಾದ್ ರೈ, ಗಣೇಶ್ ನೇರ್ಗಿ ಹಾಗೂ ಇತರರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X