Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಜಯನಗರ ಅರಸರ ಆಡಳಿತದಲ್ಲಿ ಸಾಮಾಜಿಕ...

ವಿಜಯನಗರ ಅರಸರ ಆಡಳಿತದಲ್ಲಿ ಸಾಮಾಜಿಕ ವ್ಯವಸ್ಥೆ ಮಾನವೀಯ ಮುಖ ಹೊಂದಿತ್ತು: ಪ್ರೊ.ಹರೀಶ್ ಟಿ.ಜಿ.

ಕನಕ ಚಿಂತನ ವಿಶೇಷ ಉಪನ್ಯಾಸ ಮಾಲಿಕೆ

ವಾರ್ತಾಭಾರತಿವಾರ್ತಾಭಾರತಿ23 Oct 2026 8:02 PM IST
share
ವಿಜಯನಗರ ಅರಸರ ಆಡಳಿತದಲ್ಲಿ ಸಾಮಾಜಿಕ ವ್ಯವಸ್ಥೆ ಮಾನವೀಯ ಮುಖ ಹೊಂದಿತ್ತು: ಪ್ರೊ.ಹರೀಶ್ ಟಿ.ಜಿ.

ಬ್ರಹ್ಮಾವರ: ವ್ಯಕ್ತಿಯ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯದ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಂಡುಕೊಳ್ಳ ಬಹುದು. ಮಾತು ಸ್ಪಷ್ಟವಾಗಿದ್ದರೆ ಅದು ಅವರ ಆರೋಗ್ಯವನ್ನು ಪ್ರತಿಫಲಿಸುತ್ತದೆ. ಸಾಮಾನ್ಯ ವಾಗಿ ವಿಜಯನಗರ ಅರಸರ ಆಡಳಿತದ ಕಾಲವನ್ನು ‘ಸುವರ್ಣ ಯುಗ’ ಎಂದು ಕರೆಯುತ್ತಿದ್ದರು. ಅಂದರೆ ಆ ಕಾಲದ ಸಾಮಾಜಿಕ ವ್ಯವಸ್ಥೆ ಹಾಗೂ ಸಂಬಂಧಗಳು ಮಾನವೀಯ ಮುಖವನ್ನು ಹೊಂದಿದ್ದುವು ಎಂದು ಅರ್ಥ ಮೂಡಬಿದರೆಯ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಹರೀಶ್ ಟಿ.ಜಿ. ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಇಲ್ಲಿನ ಎಸ್.ಎಂ.ಎಸ್. ಕಾಲೇಜಿನ ಸಭಾಂಗಣದಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಯ ಕನಕದಾಸ ಅಧ್ಯಯನ ಸಂಶೋಧನ ಪೀಠ ಹಾಗೂ ಎಸ್.ಎಂ.ಎಸ್. ಕಾಲೇಜು ಬ್ರಹ್ಮಾವರ ಇವರ ಸಹಯೋಗದಲ್ಲಿ ನಡೆದ ಕನಕ ಚಿಂತನ-ವಿಶೇಷ ಉಪನ್ಯಾಸ ಮಾಲಿಕೆಯಲ್ಲಿ ‘ಕನಕ ಸಾಹಿತ್ಯದಲ್ಲಿ ಸಾಮಾಜಿಕ ಸ್ವಾಸ್ಥ್ಯಚಿಂತನೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಿದ್ದರು.

ದೇಹವೆಂಬುದು ಆತ್ಮದ ವಾಹನ. ದೇಹ ಶಾಶ್ವತವಲ್ಲ. ಕುಲ, ಭಾಷೆ, ಆಚಾರ-ವಿಚಾರಗಳು ನಮ್ಮನ್ನು ಬೆಂಬಿಡದೆ ಬರುತ್ತವೆ. ಅವನ್ನೆಲ್ಲಾ ನಿವಾರಿಸಿ ಕೊಂಡು ಮುನ್ನಡೆದು ಆತ್ಮಸಾಕ್ಷಾತ್ಕಾರ ಮಾಡಿಕೊಳ್ಳುವ ಪರಿಯನ್ನು ಕನಕದಾ ಸರು ತಮ್ಮ ಕೀರ್ತನೆಗಳಲ್ಲಿ ಭಿನ್ನವಿಸಿಕೊಂಡರು. ಅವರ ‘ಕುಲಕುಲವೆನ್ನುತಿಹರು’ ಎಂಬ ಕೀರ್ತನೆಯಲ್ಲಿ ಇತರರ ಹಿತವನ್ನು ಬಯಸುವವನೇ ನಿಜವಾದ ಮನುಷ್ಯ ಎಂಬುದಾಗಿ ಪ್ರತಿಪಾದಿಸುತ್ತಾರೆ. ಮಾತು ನಿರ್ಮಲವಾಗಿರಬೇಕು, ಇಲ್ಲವಾದರೆ ಅದೊಂದು ಕಡ್ಡಿ ತಿನಿಸು ಎಂಬ ಅವರ ಚಿಂತನೆಗಳು ಸಾರ್ವಕಾಲಿಕ ಯೋಗ್ಯ ಎಂದು ಅವರು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್.ಎಂ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರಾಡ್ರಿಗಸ್ ಮಾತನಾಡಿ, ಸಮಾಜದ ಸ್ವಾಸ್ಥ್ಯವಿರುವುದು ಸಹಬಾಳ್ವೆ, ಸಹಕಾರ ಹಾಗೂ ಪರಸ್ಪರ ಅರ್ಥ ಮಾಡಿಕೊಳ್ಳುಕೆಯಲ್ಲಿ. ಹಿರಿಯರನ್ನು ಅನುಸರಿಸುವ ಜಾಯಮಾನವಿದ್ದರೆ ಸಮಾಜ ಎಂದೂ ವಿಘಟಿತಗೊಳ್ಳದು. ನಮ್ಮ ಆಲೋಚನೆಗಳು ಹಣ ಮತ್ತು ಅಧಿಕಾರಕ್ಕೆ ಸೀಮಿತವಾಗಬಾರದು. ಸಂಪತ್ತಿನ ಕ್ರೋಢೀಕರಣ ಮುಖ್ಯವಲ್ಲ. ಅದರ ಸದ್ಭಳಕೆ ಬಹುಮುಖ್ಯ. ಕನಕದಾಸರು ಈ ಬಗೆಯ ಸಾಮಾಜಿಕ ಸ್ವಾಸ್ಥ್ಯದ ಕನಸು ಕಂಡವರು ಎಂದರು.

ಕನಕದಾಸ ಅಧ್ಯಯನ ಸಂಶೋಧನ ಪೀಠದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಕನಕದಾಸ ಅಧ್ಯಯನ ಸಂಶೋಧನ ಪೀಠದ ಸಲಹಾ ಸಮಿತಿಯ ಸದಸ್ಯರಾದ ಡಾ.ಅರುಣ್‌ಕುಮಾರ್ ಎಸ್. ಆರ್. ಉಪಸ್ಥಿತರಿದ್ದರು. ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಶಾಂತ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳಾದ ಅಮೃತಾ ಹಾಗೂ ನಮೃತಾ ಕನಕಗಾಯನ ಹಾಡಿದರು. ಬಿ.ಎ ಪದವಿ ವಿದ್ಯಾರ್ಥಿ ಆದರ್ಶ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X