Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಿವೇಶನ ಪಡೆದು ಕೈಗಾರಿಕಾ ಘಟಕ...

ನಿವೇಶನ ಪಡೆದು ಕೈಗಾರಿಕಾ ಘಟಕ ಸ್ಥಾಪಿಸದಿದ್ದರೆ ನಿವೇಶನ ಮರುಹಂಚಿಕೆ: ಉಡುಪಿ ಡಿಸಿ ಸ್ವರೂಪ ಟಿ.ಕೆ

ವಾರ್ತಾಭಾರತಿವಾರ್ತಾಭಾರತಿ23 Oct 2026 8:54 PM IST
share
ನಿವೇಶನ ಪಡೆದು ಕೈಗಾರಿಕಾ ಘಟಕ ಸ್ಥಾಪಿಸದಿದ್ದರೆ ನಿವೇಶನ ಮರುಹಂಚಿಕೆ: ಉಡುಪಿ ಡಿಸಿ ಸ್ವರೂಪ ಟಿ.ಕೆ

ಉಡುಪಿ, ಅ.23: ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ನಿವೇಶನ ಹಂಚಿಕೆಯನ್ನು ಮಾಡಿದ್ದರೂ, ನಿವೇಶನ ಪಡೆದು ಕೈಗಾರಿಕಾ ಘಟಕ ಸ್ಥಾಪಿಸದೇ ಇರುವ ನಿವೇಶನಗಳ ಮರು ಹಂಚಿಕೆಗೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದ್ದಾರೆ.

ಶುಕ್ರವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕಳೆದ ಸಭೆಯಲ್ಲಿ 17 ನಿವೇಶನಗಳಲ್ಲಿ ಉದ್ದಿಮೆ ಪ್ರಾರಂಭಿಸಲು ಉದ್ದಿಮೆದಾರರಿಗೆ ಸೂಚಿಸಲಾಗಿತ್ತು. ಇವುಗಳಲ್ಲಿ 5 ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿದ್ದರೆ, 9 ನಿವೇಶನಗಳಲ್ಲಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಹಂತದಲ್ಲಿವೆ. ಬಾಕಿ ಉಳಿದ 3 ನಿವೇಶನದಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈಗಾಗಲೇ 15ಕ್ಕೂ ಹೆಚ್ಚು ಮಂದಿ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ನಿವೇಶನಕ್ಕೆ ಕೋರಿಕೆ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುನಲ್ಲಿ 38.75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರಿನ 101.19 ಎಕ್ರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಭೂ ಸ್ವಾಧೀನ ಸೇರಿದಂತೆ ವಿವಿಧ ಪ್ರಕ್ರಿಯೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಎಂದವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಅನೇಕ ಮಂದಿ ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಇವರಿಗೆ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಸೇರಿದಂತೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳು, ಸಲಹೆಗಳನ್ನು ನೀಡಿ, ಉದ್ಯೋಗ ಅವಕಾಶಗಳು ಹೆಚ್ಚಿಸುವಂತೆ ನೋಡಿಕೊಳ್ಳಬೇಕೆಂದು ಅವರು ನಿರ್ದೇಶನ ನೀಡಿದರು.

ಕಳೆದ ಸಭೆಯಲ್ಲಿ ಕೈಗಾರಿಕಾ ಘಟಕಗಳಲ್ಲಿ ವೃತ್ತಿಯನ್ನು ಕೈಗೊಳ್ಳಲು ಅಗತ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿ ಗಳನ್ನು, ಕೈಗಾರಿಕಾ ತರಬೇತಿ ಸಂಸ್ಥೆಗಳು ಯುವಜನರಿಗೆ ನೀಡುವ ಸಲುವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲು ತಿಳಿಸಲಾಗಿದ್ದರೂ ಸಹ, ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ಈ ಬಗ್ಗೆ ಕ್ರಮವಹಿಸುವಂತೆ ಸೂಚಿಸಿದರು.

ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ, ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಒಳಚರಂಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದ ಅವರು, ಜಿಲ್ಲೆಯ ವಿವಿಧ ಕೈಗಾರಿಕಾ ಘಟಕಗಳಲ್ಲಿ ಫಿಟ್ಟರ್, ಎಲೆಕ್ಟ್ರೀಷಿಯನ್, ವೆಲ್ಡರ್, ಮೆಕ್ಯಾನಿಕ್ ಸೇರಿದಂತೆ 484 ಹುದ್ದೆಗಳು ಖಾಲಿ ಇರುವುದು ಕಂಡುಬಂದಿದೆ. ಖಾಲಿ ಹುದ್ದೆಗಳ ನೇಮಕಾತಿಗೆ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲು ಕಾರ್ಯಪ್ರವೃತ್ತರಾಗಬೇಕು ಎಂದು ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ಉಪನಿರ್ದೇಶಕ ಜಿ. ವಾಮನ ನಾಯ್ಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆ ದಾರರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಶೇ.91.42ರಷ್ಟು ಸ್ಥಳೀಯರಿಗೆ ಉದ್ಯೋಗ

ಡಾ. ಸರೋಜಿನಿ ಮಹಿಷಿ ವರದಿಯಂತೆ ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸ ಬೇಕೆಂಬ ಆದೇಶವಿದ್ದು, ಅದರಂತೆ ಜಿಲ್ಲೆಯಲ್ಲಿ 38 ಸಣ್ಣ ಪ್ರಮಾಣದ ಕೈಗಾರಿಕೆಗಳು, 47 ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹಾಗೂ 7 ಬೃಹತ್ ಕೈಗಾರಿಕೆಗಳು ಸೇರಿದಂತೆ ಒಟ್ಟು 92 ಘಟಕಗಳು ಕಾರ್ಯನಿರ್ವಸುತ್ತಿವೆ.

ಇವುಗಳಲ್ಲಿ ಎ-ವರ್ಗದಲ್ಲಿ 292, ಬಿ-ವರ್ಗದಲ್ಲಿ 1,840, ಸಿ-ವರ್ಗದಲ್ಲಿ 5,329 ಹಾಗೂ ಡಿ ವರ್ಗದಲ್ಲಿ 12,111 ಸೇರಿದಂತೆ ಒಟ್ಟು 19,572 ಕನ್ನಡಿಗರನ್ನು ನೇಮಿಸಿಕೊಂಡಿದ್ದು, ಶೇ.91.42ರಷ್ಟು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X