ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ

ಉಡುಪಿ, ಅ.23: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಕೊಡವೂರು ಗ್ರಾಮದ ಡಾಸ್ ಶಂಕರ್ (46) ಎಂಬವರು ಅ.5ರಂದು ರಾಮಚರಣ ಮೀನುಗಾರಿಕಾ ಬೋಟಿನಿಂದ ಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.
5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.
Next Story




