ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಕೋಟ, ಅ.24: ವೈಯಕ್ತಿಕ ಕಾರಣದಿಂದ ಮನನೊಂದ ಅವರ್ಸೆ ಗ್ರಾಮದ ಬಿ.ಆನಂದ(65) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.24ರಂದು ಬೆಳಗ್ಗೆ ಮನೆ ಸಮೀಪದ ಗದ್ದೆಯ ಬಳಿಯ ಮರಕ್ಕೆ ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅ.23ರಂದು ಸಂಜೆ ವೇಳೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಂಜೂರು ಗ್ರಾಮದ ಬಲ್ಲೆಬೈಲು ನಿವಾಸಿ ಗಿರಿಜಾ(72) ಎಂಬವರು ಅ.24ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story




