ಕೋಟ: ರಸ್ತೆ ಅಪಘಾತ; ಗಾಯಾಳು ಯುವಕ ಮೃತ್ಯು

ಕೋಟ: ಕೋಟ ಜಂಕ್ಷನ್ ಬಳಿ ಅ. 26ರಂದು ನಡೆದ ಸೈಕಲ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಗಂಭೀರ ವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ (27) ಮೃತಪಟ್ಟವರು.
ಅ. 26ರಂದು ಮುಂಜಾನೆ ಕೋಟ ಜಂಕ್ಷನ್ನಲ್ಲಿ ರಸ್ತೆ ದಾಟುತ್ತಿದ್ದ ಗುರುದಾಸ್ ಶೆಣೈ ಎಂಬವರಿಗೆ ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಸೈಕಲ್ ಸವಾರ ಗುರುದಾಸ್ ಶೆಣೈ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಈ ಅಪಘಾತದಲ್ಲಿ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಪ್ರದೀಪ್ ಉತ್ತಮ ಕ್ರಿಕೆಟ್ ಆಟಗಾರರಾಗಿದ್ದರು.
ಕೋಟ ಜಂಕ್ಷನ್ನಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಸೈಕಲ್ ಸವಾರ ಹಾಗೂ ಕಾರು ಚಾಲಕ ಇಬ್ಬರೂ ಮೃತಪಟ್ಟಿದ್ದಾರೆ.
Next Story




