ಬೋಟಿನಿಂದ ಬಿದ್ದು ಮೀನುಗಾರ ಮೃತ್ಯು

ಮಲ್ಪೆ, ಅ.29: ಮಲ್ಪೆ ಬಂದರಿನ ದಕ್ಕೆಯಲ್ಲಿ ನಿಲ್ಲಿಸಿದ್ದ ಬೋಟಿನಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಅ.28ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಸರೋಜ್ ದಂಡಸಾನ(27) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಮಲಗಿದ್ದವರು ಮೂತ್ರ ವಿಸರ್ಜನೆಗೆ ಬೋಟ್ನ ದಂಡೆಯ ಬಳಿ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇವರ ಮೃತದೇಹವು ಅ.29ರಂದು ಬೆಳಗ್ಗೆ ದಕ್ಕೆಯ ನೀರಿನಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




