‘ನವೋನ್ಮೇಶ’ ರಾಜ್ಯ ಮಟ್ಟದ ಫೆಸ್ಟ್: ಮಂಗಳೂರಿನ ಕೆನರಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸ ಲಾದ ’ನವೋನ್ಮೇಶ’ ರಾಜ್ಯ ಮಟ್ಟದ ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ’ನವೋನ್ಮೇಶ’ ಫೆಸ್ಟ್‌ನಲ್ಲಿ ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿನ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡಿತು.
ಉಡುಪಿಯ ಎಂಜೆಎಂ ಪಿಯು ಕಾಲೇಜಿನ ತಂಡವು ಪ್ರಥಮ ರನ್ನರ್ ಅಪ್ ಹಾಗೂ ಕುಂದಾಪುರದ ಶ್ರೀವೆಂಕಟರ ಮಣ ಪಿಯು ಕಾಲೇಜ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.
ಶುಕ್ರವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಚಲನಚಿತ್ರ ನಟ ವಜ್ರಂಗ್ ಶೆಟ್ಟಿ ಸ್ಪರ್ಧೆ ಗಳಲ್ಲಿ ವಿಜೇತರಾದ ತಂಡಗಳಿಗೆ ಹಾಗೂ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಿದರು. ಅಧ್ಯಕ್ಷತೆಯನ್ನು ಐಎಂಜೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ.ಎಸ್. ಎನ್.ಭಟ್ ವಹಿಸಿದ್ದರು. ಎಂಐಟಿಕೆ ಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗ್ಡೆ, ಎಂಸಿಎನ್ ಪ್ರಾಂಶುಪಾಲೆ ಪ್ರೊ.ಜೆನ್ನಿಫರ್ ಫ್ರೀಡಾ ಮೆನೆಜಸ್ ಉಪಸ್ಥಿತರಿದ್ದರು.
ಐಎಂಜೆಐಎಸ್ಸಿ ಪ್ರಾಂಶುಪಾಲೆ ಡಾ.ಪ್ರತಿಭಾ ಎಂ.ಪಟೇಲ್ ನವೋನ್ಮೇಶ್ 2026ರ ವರದಿ ವಾಚಿಸಿ ವಂದಿಸಿದರು. ಐಎಂಜೆಸಿಎಎಚ್‌ಎಸ್ ಪ್ರಾಂಶುಪಾಲೆ ಪ್ರೊ.ಹೇಮಲತಾ ಸ್ವಾಗತಿಸಿದರು. ಎಂಸಿಎನ್ ಉಪಪ್ರಾಂಶುಪಾಲೆ ರೂಪಶ್ರೀಅತಿಥಿ ಪರಿಚಯ ನೀಡಿದರು. ವಿದ್ಯಾರ್ಥಿನಿ ಅಲಿಶಾ ಬಿಷಪ್ ಕಾರ್ಯಕ್ರಮ ನಿರೂಪಿಸಿದರು.




