Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಕ್ಷಣದಿಂದ ಜೀವನ, ಸಮಾಜದಲ್ಲಿ...

ಶಿಕ್ಷಣದಿಂದ ಜೀವನ, ಸಮಾಜದಲ್ಲಿ ಪರಿವರ್ತನೆ ಸಾಧ್ಯ: ವೆರೋನಿಕಾ ಕರ್ನೆಲಿಯೋ

ವಾರ್ತಾಭಾರತಿವಾರ್ತಾಭಾರತಿ31 Oct 2026 5:56 PM IST
share
ಶಿಕ್ಷಣದಿಂದ ಜೀವನ, ಸಮಾಜದಲ್ಲಿ ಪರಿವರ್ತನೆ ಸಾಧ್ಯ: ವೆರೋನಿಕಾ ಕರ್ನೆಲಿಯೋ

ಉಡುಪಿ, ಅ.31: ಶಿಕ್ಷಣವು ಕೇವಲ ಅಕ್ಷರಾಭ್ಯಾಸ ಅಥವಾ ಪದವಿ ಪಡೆಯುವುದಲ್ಲ, ಅದು ಮನುಷ್ಯನ ವ್ಯಕ್ತಿತ್ವ ಮತ್ತು ಬದುಕನ್ನು ರೂಪಿಸುವ ಪ್ರಮುಖ ಅಸ್ತ್ರವಾಗಿದೆ ಎಂದು ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯಪಟ್ಟಿದ್ದಾರೆ.

ಕಥೊಲಿಕ್ ಸಭಾ ಉಡುಪಿ ಪ್ರದೇಶ, ದಿ.ತೆರೆಸಾ ಕರ್ನೆಲಿಯೋ ಕುಟುಂಬ ಕೆಮ್ಮಣ್ಣು, ಎಂಸಿಸಿ ಬ್ಯಾಂಕ್ ಹಾಗೂ ಕ್ಯಾಪ್ ಸೆಲ್ ಕಲ್ಯಾಣಪುರ ವಲಯ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನ ಕೇಂದ್ರದಲ್ಲಿ ಶನಿವಾರ ಆಯೋಜಿಸ ಲಾದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತಿದ್ದರು.

ಉತ್ತಮ ಶಿಕ್ಷಣದಿಂದ ಉದ್ಯೋಗಾವಕಾಶಗಳು ದೊರೆತು, ವ್ಯಕ್ತಿ ಹಾಗೂ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇಂದು ವಿದ್ಯಾರ್ಥಿಗಳಿಗೆ ಹಲವಾರು ಅವಕಾಶಗಳಿದ್ದು ಅದರ ಸದುಪಯೋಗವನ್ನು ಪಡೆದು ಜೀವನದಲ್ಲಿ ಯಶಸ್ಸು ಹೊಂದುವತ್ತ ಕಾರ್ಯಪ್ರವೃತ್ತರಾಗಬೇಕು. ಶಿಕ್ಷಣ ಪಡೆದ ವ್ಯಕ್ತಿಗಳು ಸಮಾಜದ ಆಸ್ತಿಯಾಗಿ ಬದಲಾಗುತ್ತಾರೆ ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗುತ್ತವೆ ಎಂದರು.

ಕಥೊಲಿಕ್ ಉಡುಪಿ ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕ ವಂ.ಅನಿಲ್ ಡಿಸೋಜ ಮಾತನಾಡಿ, ನಾವು ಸಮಾಜದಿಂದ ಏನನ್ನು ಪಡೆದುಕೊಳ್ಳುತ್ತೇವೆ ಎನ್ನುವುದಕ್ಕಿಂತ, ಸಮಾಜಕ್ಕೆ ಏನನ್ನು ಮರಳಿ ನೀಡುತ್ತೇವೆ ಎನ್ನುವುದರಲ್ಲೇ ನಮ್ಮ ಜೀವನದ ನಿಜವಾದ ಯಶಸ್ಸು ಅಡಗಿದೆ. ಸ್ವಾರ್ಥಕ್ಕಾಗಿ ಬದುಕುವುದಕ್ಕಿಂತ, ಇತರರ ಮುಖದಲ್ಲಿ ನಗು ತರಿಸುವು ದರಲ್ಲಿ ಅಥವಾ ಯಾರಿಗಾದರೂ ಸಹಾಯ ಮಾಡುವುದರಲ್ಲಿ ಸಿಗುವ ನೆಮ್ಮದಿ ಮತ್ತು ತೃಪ್ತಿ ಅಪಾರವಾದುದು ಎಂದು ತಿಳಿಸಿದರು.

ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಮುದಾಯದ 100 ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಮ್ಯಾಕ್ಷಿಮ್ ಆರಾನ್ಹ ವಹಿಸಿದ್ದರು.

ಎಐಸಿಯು ರಾಜ್ಯಾಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಕ್ಯಾಪ್ ಸೆಲ್ ಕಲ್ಯಾಣಪುರ ವಲಯದ ಸಂಚಾಲಕ ವಾಲ್ಟರ್ ಸಿರಿಲ್ ಪಿಂಟೊ, ಕಥೊಲಿಕ್ ಸಭಾ ಉಡುಪಿ ಪ್ರದೇಶದ ನಿಯೋಜಿತ ಅಧ್ಯಕ್ಷ ಲೂವಿಸ್ ಡಿಸೋಜ, ಕೋಶಾಧಿಕಾರಿ ಗ್ಯಾರಿಫಿಲ್ಡ್ ಉರ್ಬಾನ್ ಲೂವಿಸ್ ಉಪಸ್ಥಿತರಿದ್ದರು.

ಕಥೊಲಿಕ್ ಸಭಾ ಉಡುಪಿ ಪ್ರದೇಶ ಕಾರ್ಯದರ್ಶಿ ಜುಲಿಯೆಟ್ ಗಿಲ್ಬರ್ಟ್ ಡಿಸೋಜ ವಂದಿಸಿದರು. ಕಾರ್ಯಕ್ರಮದ ಸಂಚಾಲಕ ಡಾ. ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X