Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದಿನನಿತ್ಯದ ಬದುಕಿನಲ್ಲೂ ಸಂವಿಧಾನದ...

ದಿನನಿತ್ಯದ ಬದುಕಿನಲ್ಲೂ ಸಂವಿಧಾನದ ಪ್ರಭಾವ: ಸಚಿವ ರಿಝ್ವಾನ್ ಅರ್ಷದ್

ಉಡುಪಿ ಜಿಲ್ಲಾ ಮಟ್ಟದ ಯುವ ಸಂಸತ್ತು ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 Nov 2026 9:04 PM IST
share
ದಿನನಿತ್ಯದ ಬದುಕಿನಲ್ಲೂ ಸಂವಿಧಾನದ ಪ್ರಭಾವ: ಸಚಿವ ರಿಝ್ವಾನ್ ಅರ್ಷದ್

ಉಡುಪಿ : ಪ್ರತಿಯೊಬ್ಬ ಭಾರತೀಯನ ದಿನನಿತ್ಯದ ಬದುಕಿನಲ್ಲೂ ಸಂವಿಧಾನ ಪ್ರಭಾವ ಬೀರುತ್ತಿದೆ. ಸಂವಿಧಾನಕ್ಕೆ ಬದ್ದವಾಗಿ ಸರಕಾರಗಳು ಜನಪರವಾದ ಕಾನೂನುಗಳನ್ನು, ನೀತಿ-ನಿಯಮಾವಳಿಗಳನ್ನು ರೂಪಿಸುತ್ತವೆ. ಶಿಕ್ಷಣ, ಜ್ಞಾನ, ಉದ್ಯೋಗ ಎಲ್ಲಾ ಕ್ಷೇತ್ರಗಳಲ್ಲೂ ತಾರತಮ್ಯವಿಲ್ಲದೆ, ಎಲ್ಲರಿಗೂ ಸಮಾನ ಅವಕಾಶಗಳನ್ನು ಸಂವಿಧಾನ ನಮಗೆ ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದ್ದಾರೆ.

ಮಣಿಪಾಲದ ಗಣಿತ ನಗರದಲ್ಲಿರುವ ಜ್ಞಾನಸುಧಾ ಕಾಲೇಜಿನ ಶಾಂತಿ ರಮೇಶ್ ಪೈ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಅಂತಾ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮೆಲ್ಲರ ಬದುಕು ಭಾರತದ ಸಂವಿಧಾನವನ್ನು ಅವಲಂಬಿಸಿದೆ. ಭಾರತದ ಸಂವಿಧಾನ ಕೇವಲ ರಾಜಕೀಯದ ಬಗ್ಗೆ ಆಸಕ್ತಿ ಇರುವವರಿಗೆ ಮಾತ್ರ ಸೀಮಿತವಾಗಿಲ್ಲ ಎಂದ ಅವರು, ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕ ವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ವರ್ಗಗಳೂ ಸಮಾನ ಅವಕಾಶಗಳನ್ನು ಪಡೆದು ಮುಖ್ಯವಾಹಿನಿಯಲ್ಲಿ ಬೆರೆಯಲು ಸಹಾಯವಾಗುವಂತೆ ಮೀಸಲಾತಿ ನೀಡಲಾಗಿದೆ. ಆಚಾರ-ವಿಚಾರ, ಭಾಷೆ, ಜಾತಿ-ಮತ, ಆಹಾರ ಪದ್ದತಿಗಳಲ್ಲಿ ಭಿನ್ನತೆ ಇದ್ದರೂ, ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ್ದರೆ ಅದಕ್ಕೆ ನಮ್ಮ ಸಂವಿಧಾನವೇ ಕಾರಣ ಎಂದು ಅವರು ಪ್ರತಿಪಾದಿಸಿದರು.

ಸ್ವಾತಂತ್ರ್ಯಪೂರ್ವದಲ್ಲಿ ರಾಜರ ಆಡಳಿತದ ಬಳಿಕ ಬ್ರಿಟಿಷರ ಆಡಳಿತ ವಿತ್ತು. ಆದರೆ ಸ್ವಾತಂತ್ರ್ಯಾ ನಂತರ ಜನರೇ ಜನರಿಂದ ಆಳಿಸಿಕೊಳ್ಳುವ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂತು. ಇಂದು ಜನರೇ ತಮ್ಮ ಪ್ರತಿನಿಧಿ ಗಳನ್ನು ಹಾಗೂ ಸರಕಾರಗಳನ್ನು ಆರಿಸುತ್ತಾರೆ. ಜನಪ್ರತಿನಿಧಿಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೇ ಇದ್ದಲ್ಲಿ ಅವರನ್ನು ಮನೆಗೆ ಕಳುಹಿಸುವ ಅಧಿಕಾರವನ್ನೂ ಸಂವಿಧಾನ ದೇಶದ ಜನತೆಗೆ ನೀಡಿದೆ ಎಂದರು.

ಸರಕಾರಗಳು ಬರುತ್ತವೆ, ಹೋಗುತ್ತವೆ. ಸರಕಾರ ಮತ್ತು ನಾಯಕರು ರಾಷ್ಟ್ರ ಎನಿಸಿಕೊಳ್ಳುವುದಿಲ್ಲ. ರಾಷ್ಟ್ರ ಯಾವತ್ತಿಗೂ ಶ್ರೇಷ್ಠ. ಸಂವಿಧಾನವು ರಾಷ್ಟ್ರವನ್ನು ರಕ್ಷಿಸುತ್ತದೆ. ಜನರಿಗೆ ಸರಕಾರಗಳ ಮೌಲ್ಯಮಾಪನ ಮಾಡಲು ಮತ್ತು ಸರಕಾರಗಳನ್ನು ಬದಲಾಯಿಸಲು ಪ್ರತಿ ಐದು ವರ್ಷಗಳಿಗೊಮ್ಮೆ ಮತದಾನ ನಡೆಸುವ ಹಕ್ಕನ್ನು ಸಂವಿಧಾನ ನೀಡಿದೆ. ಇದರಿಂದಾಗಿ ಜನಪ್ರತಿನಿಧಿಗಳೂ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಿದೆ ಎಂದರು.

ನಮ್ಮ ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಅರಿಯಬೇಕು. ಜನರ ಸಮಸ್ಯೆಗಳನ್ನು ಆಲಿಸಲು ಅವರ ಆಸೆ-ಆಕಾಂಕ್ಷೆಗಳನ್ನು ಪೂರೈಸಲು ಸಂವಿಧಾನ ನಮಗೆ ಅವಕಾಶ ನೀಡಿದ್ದು, ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಅರ್ಥ ಮಾಡಿ ಕೊಳ್ಳಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ಬಹಳಷ್ಟು ಯುವಕರು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಬಹುದು, ಯುವ ಸಂಸತ್ ಕಾರ್ಯಕ್ರಮ ಅದಕ್ಕೆ ವೇದಿಕೆಯಾಗಲಿ ಎಂದು ಹಾರೈಸಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಳೆದ ಮೂರು ವರ್ಷಗಳಿಂದ ಸತತವಾಗಿ ಮಾನವ ಸರಪಳಿ, ಸಂವಿಧಾನ ಪೀಠಿಕೆ ಓದುವುದು, ಬೈಕ್ ಮತ್ತು ಸೈಕಲ್ ರ್ಯಾಲಿಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸರಕಾರದ ನಿರ್ದೇಶನ ದಂತೆ ಯುವ ಸಂಸತ್ತು ಸಭೆಗಳನ್ನು ಈಗಾಗಲೇ ತಾಲೂಕು ಮಟ್ಟದಲ್ಲಿ ಆಯೋಜಿಸಿದ್ದು, ಇದೀಗ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಉತ್ತಮ ವಾಗ್ಮಿಗಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಿ ಕಳುಹಿಸಲಾಗುವುದು ಎಂದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸಂವಿಧಾನದ ಪೀಠಿಕೆ ಬೋಧಿಸಿದರು.

ವೇದಿಕೆಯಲ್ಲಿ ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್, ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ ರಾವ್, ವಕೀಲರ ಸಂಘದ ಅಧ್ಯಕ್ಷ ರೋನಾಲ್ಡ್ ಪ್ರವೀಣ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್‌ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಯುವ ಸಂಸತ್‌ನಲ್ಲಿ ಆಡಳಿತ- ಪ್ರತಿಪಕ್ಷ ನಡುವೆ ಮಾತಿನ ಚಕಮಕಿ

ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಗಂಭೀರವಾದ ಚರ್ಚೆ ನಡೆಯಿತು. ರಾಜ್ಯ ವಿಧಾನಸಭೆಯ ಕಲಾಪಗಳ ಮಾದರಿಯಲ್ಲಿಯೇ ನಡೆದ ಈ ಅಣಕು ಸಂಸತ್ ಕಲಾಪದಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ಯುವ ನಾಯಕರು ಗಂಭೀರವಾದ ವಿಷಯಗಳನ್ನು ಮಂಡಿಸಿದರು.

ಸದನದಲ್ಲಿ ಸರಕಾರಿ ಶಾಲೆಗಳ ದುರವಸ್ಥೆ ಕುರಿತು ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆುತು. ರಾಜ್ಯದಲ್ಲಿರುವ ಸರಕಾರಿ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು ವಿದ್ಯಾರ್ಥಿಗಳು ಪ್ರತಿದಿನ ಪ್ರಾಣಭಯದಿಂದ ಪಾಠ ಕೇಳುವಂತಾಗಿದೆ. ಪಾಠ ಮಾಡಲು ಶಿಕ್ಷಕರೇ ಇಲ್ಲ. ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ. ಕುಡಿಯುವ ನೀರಿಗೂ ತಾತ್ವಾರವಿದ್ದು, ಕೇಂದ್ರದಿಂದ ಬಂದ ಅನುದಾನ ಬಳಕೆಯಾಗದೆ ಶೇ.40ರಷ್ಟು ಅನುದಾನ ವಾಪಸ್ ಆಗಿದೆ ಎಂದು ಪ್ರತಿಪಕ್ಷ ನಾಯಕರು ಸರಕಾರದ ವೈಫಲ್ಯಕ್ಕೆ ಕನ್ನಡಿಹಿಡಿದರು.

ಇದಕ್ಕೆ ಶಿಕ್ಷಣ ಸಚಿವರ ಪರವಾಗಿ ಉತ್ತರಿಸಿದ ಮುಖ್ಯಮಂತ್ರಿಗಳು ಇದಕ್ಕೆ ಹಿಂದಿನ ಸರಕಾರದ ಅಧ್ವಾನಗಳೇ ಕಾರಣ ಎಂದು ನೇರವಾಗಿ ಆರೋಪಿ ಸಿದರು. ಕೇವಲ ಕಡತಗಳಲ್ಲಿ ಮಾತ್ರ ಶಾಲೆಗಳಿವೆ. ಸ್ಥಳ ಪರಿಶೀಲನೆ ನಡೆಸಿದರೆ ಅಲ್ಲಿ ಶಾಲೆಗಳು ಅಸ್ತಿತ್ವದಲ್ಲೇ ಇಲ್ಲ. ತಾವು ಸರ್ಕಾರದಲ್ಲಿರುವಾಗ ಕೈಗೊಂಡ ಅಧ್ವಾನಗಳಿಂದಾಗಿ ಅನುದಾನ ವಾಪಸಾಗಿದೆ. ಶಿಥಿಲಾವಸ್ಥೆಯಲ್ಲಿರುವ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ದಾಖಲೆ ಒದಗಿಸಿ ಪ್ರತಿಪಕ್ಷ ನಾಯಕರಿಗೆ ಮಾತಿನ ತಿರುಗೇಟು ನೀಡಿದರು.

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ದಿನಕ್ಕೆ 2.6 ಕೋಟಿ ರೂ ಸೈಬರ್ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದರೂ ಸರಕಾರ ಎಚ್ಚೆತ್ತುಕೊಂಡಿಲ್ಲ. ವಂಚನೆ ಪ್ರಕರಣಗಳಲ್ಲಿ ದುಡ್ಡು ಕಳೆದು ಕೊಂಡವರಿಗೆ ಹಣ ವಾಪಸು ಮಾಡುವ ಪ್ರಕ್ರಿಯೆ ನಿಧಾನವಾಗಿದೆ. ಸೆನ್ ಠಾಣೆಗಳಲ್ಲಿ 320 ಹುದ್ದೆ ಖಾಲಿ ಇದ್ದರೂ ಹುದ್ದೆ ಭರ್ತಿಗೆ ಸರಕಾರ ಮುಂದಾಗುತ್ತಿಲ್ಲ ಎಂದು ಪ್ರತಿಪಕ್ಷ ನಾಯಕರು ಸರಕಾರವನ್ನು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಸೆನ್ ಠಾಣೆಗಳಲ್ಲಿ ಪರಿಣತಿ ಹೊಂದಿದ ಎಥಿಕಲ್ ಹ್ಯಾಕರ್‌ಗಳ ನೇಮಕಾ ತಿಗೆ ಪ್ರಕಿಯೆ ನಡೆಯುತ್ತಿದೆ. ಸೈಬರ್ ಪ್ರಕರಣಗಳನ್ನು ದಾಖಲಿಸಲು 1093 ಕಾರ್ಯನಿರ್ವಹಿಸುತ್ತಿದೆ. ಮೂರು ವರ್ಷಗಳಲ್ಲಿ 5476 ಪ್ರಕರಣಗಳಲ್ಲಿ 678 ರೂ.ಕೋಟಿ ಸಂತ್ರಸ್ತರಿಗೆ ವಾಪಾಸಾಗಿದೆ. ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿದ್ದು ವಿಳಂಬವಾಗುತ್ತಿದೆ ಎಂದು ಉತ್ತರಿಸಿದಾಗ ಪ್ರತಿಪಕ್ಷ ಸದಸ್ಯರು ಗದ್ದಲ ನಡೆಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು ಸದನದಲ್ಲಿ ಗದ್ದಲ ಎಬ್ಬಿಸಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ. ಎಲ್ಲರೂ ಒಟ್ಟಾಗಿ ಮಾತನಾಡದೆ ಒಬ್ಬೊಬ್ಬರಾಗಿ ಮಾತನಾಡಿ, ಸದನದ ಗೌರವ ಕಾಪಾಡಿ ಎಂದು ಕಿವಿಮಾತು ಹೇಳಿದರು.

ಪ್ರಶ್ನೋತ್ತರ ವೇಳೆಯಲ್ಲಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಶುಚಿ ಯೋಜನೆಯಡಿ ಕಳಪೆ ಗುಣಮಟ್ಟದ ಸ್ಯಾನಿಟರಿ ಪ್ಯಾಡ್ ವಿತರಣೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಅಲೆಯವುದನ್ನು ತಪ್ಪಿಸಲು ಕಾರವಾರ ಮತ್ತು ಶಿರಸಿ ಜಿಲ್ಲೆಯನ್ನು ವಿಭಜಿಸುವ ಕುರಿತು, ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಕುರಿತು ಪ್ರತಿಪಕ್ಷದ ಸದಸ್ಯರು ಆಡಳಿದ ಪಕ್ಷದ ಸದಸ್ಯರ ಮೇಲೆ ಆರೋಪ ಹೊರಿಸಿದರೆ, ಅತ್ತ ಆಡಳಿತ ಪಕ್ಷದ ಸದಸ್ಯರೂ ದಿಟ್ಟತನ ದಿಂದ ಅಂಕಿ-ಅಂಶಗಳ ಆಧಾರ ಸಹಿತ ಆರೋಪಗಳಿಗೆ ಪ್ರತ್ಯುತ್ತರ ನೀಡಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X