ಛಲವಾದಿ ನಾರಾಯಣಸ್ವಾಮಿ ಹೇಳಿಕೆ ಅವರ ಸಂಸ್ಕೃತಿ ತೋರಿಸುತ್ತದೆ: ಪ್ರಶಾಂತ್ ಜತ್ತನ್ನ

ಪ್ರಶಾಂತ್ ಜತ್ತನ್ನ
ಉಡುಪಿ, ನ.4: ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬೀ ಸಮುದ್ರಕ್ಕೆ ಎಸೆಯುತ್ತೇವೆ ಎನ್ನುವ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸು ತ್ತದೆ ಎಂದು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಇಂತಹ ಗೊಡ್ಡು ಬೆದರಿಕೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ ಎನ್ನುವ ವಿಚಾರ ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು. ಅಧಿಕಾರವಿಲ್ಲದ ವಿಲವಿಲ ಒದ್ದಾಟ ನಡೆಸುತ್ತಿರುವ ಬಿಜೆಪಿಗರು ರಾಜ್ಯದಲ್ಲಿ ಜಾತಿ ಧರ್ಮದ ಅರಾಜಕತೆ ಸೃಷ್ಟಿಸುವ ಪ್ರಯತ್ನದಲ್ಲಿದ್ದಾರೆ ಎನ್ನುವುದಕ್ಕೆ ಛಲವಾದಿ ಅವರ ಹೇಳಿಕೆ ಪುಷ್ಟಿ ನೀಡುತ್ತದೆ.
ರಾಜ್ಯ ಸರಕಾರದ ಉತ್ತಮ ಆಡಳಿತವನ್ನು ಸಹಿಸಲು ಸಾಧ್ಯವಾಗದ ಬಿಜೆಪಿ ಜನರನ್ನು ಒಲೈಸಲು ವಾಮಮಾರ್ಗ ಗಳನ್ನು ಹಿಡಿಯುತ್ತಿದೆ. ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ರಾಜ್ಯದ ಜನರೇ ಸೂಕ್ತ ಉತ್ತರವನ್ನು ಮುಂದಿನ ದಿನಗಳಲ್ಲಿ ನೀಡಲಿದ್ದಾರೆ. ಕೂಡಲೇ ಅವರು ಅವರ ಹೇಳಿಕೆಗೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಪ್ರಶಾಂತ್ ಜತ್ತನ್ನ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.




