Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು...

ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಹುನ್ನಾರ: ವಿನಯ್ ಕುಮಾರ್ ಸೊರಕೆ

ಕಾಂಗ್ರೆಸ್‌ನಿಂದ ‘ವೋಟ್ ಚೋರಿ-ದೇಶ್ ಬಚಾವೋ’ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Nov 2026 6:33 PM IST
share
ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಹುನ್ನಾರ: ವಿನಯ್ ಕುಮಾರ್ ಸೊರಕೆ

ಉಡುಪಿ, ನ.5: ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು, ಮತದಾನದ ಪಾವಿತ್ರ್ಯತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ವೋಟ್ ಚೋರಿ-ದೇಶ್ ಬಚಾವೋ ಅಭಿಯಾನದ ಪ್ರಯುಕ್ತ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ಮತ್ತು ಜಾಥವನ್ನು ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿತ್ತು.

ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣಾ ಆಯೋಗ ಮತ್ತು ಕೇಂದ್ರ ಬಿಜೆಪಿ ಸರಕಾರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ, ಸಂವಿಧಾನವನ್ನು ನಾಶ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಹುನ್ನಾರ ಇಂದು ನಡೆಯುತ್ತಿದೆ. ಇದಕ್ಕಾಗಿ ಎಲ್ಲರಿಗೂ ಸಮಾನವಾಗಿರುವ ಮತದಾನದ ಹಕ್ಕನ್ನೇ ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಅನಿವಾರ್ಯ ವಾಗಿದೆ ಎಂದು ಆರೋಪಿಸಿದರು.

ವಿರೋಧ ಪಕ್ಷಗಳ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಗಳು ಸರಕಾರದಿಂದ ನಡೆಯುತ್ತಿದೆ. ಈ ಮೂಲಕ ದೇಶದ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ನಡೆಯುತ್ತಿರುವ ಯುವಜನತೆಯ ಹೋರಾಟದಿಂದ ಅಮಿತಾ ಶಾ ಅಡಗಿ ಕುಳಿತಿದ್ದಾರೆ. ಸದ್ಯ ಮೋದಿ ಮತ್ತು ಅಮಿತ್ ಶಾ ಅವರ ಅವಸಾನ ಕಾಲ ಬರುತ್ತದೆ ಎಂದು ಅವರು ಹೇಳಿದರು.

ಧಾರ್ಮಿಕ ಚಿಂತಕ ಲಕ್ಷ್ಮೀಶ ಗಬ್ಬಲಡ್ಕ ಮಾತನಾಡಿ, ಸರ್ವಾಧಿಕಾರಕ್ಕೆ ಅಂತ್ಯ ಎಂಬುದು ಇದೆ. ಜ್ಞಾನೇಶ್ ಪ್ರಭಾವದಿಂದ ಗೆದ್ದು ಅಧಿಕಾರಕ್ಕೆ ಬಂದ ಮೋದಿ ಅಮಿತ್ ಶಾ ಸರಕಾರವನ್ನು ಕಿತ್ತು ಹಾಕಲು ನಮಗೆ ಸಮಯ ಬೇಕಿಲ್ಲ. ಇದಕ್ಕೆಲ್ಲ ಅಂತ್ಯ ಸಮೀಪಿಸುತ್ತಿದೆ. ಇವರು ಅಧಿಕಾರ ದೊರೆತ ನಂತರ ಮಾಡಿದ ಪಾಪ ಕರ್ಮಗಳ ಪರಿಣಾಮ ಇಂದು ಪ್ರಜೆಗಳು ಅನುಭಿಸುತ್ತಿದ್ದಾರೆ. ಪ್ರಜೆಗಳ ಪಾಪಾದ ವಿಮೋಚನೆಗಾಗಿ ಪ್ರಜಾಪ್ರಭುತ್ವದ ಜನಶಕ್ತಿ ಒಂದಾಗಿ ಹೋರಾಟ ಮಾಡಬೇಕು ಎಂದರು.

ಸಾಹಿತಿ ಡಾ.ಗಣನಾಥ ಎಕ್ಕಾರು ಮಾತನಾಡಿ, ಚುನಾವಣಾ ಆಯೋಗ ಸ್ವಾತಂತ್ರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಸಾಧ್ಯ. ಈ ದೇಶದ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರ್ಗದವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವುದೇ ಈ ಎಸ್‌ಐಆರ್‌ನ ಪ್ರಮುಖ ಉದ್ದೇಶವಾಗಿದೆ. ಈ ಮೂಲಕ ಪ್ರಜಾ ಪ್ರಭುತ್ವವನ್ನೇ ನಾಶ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕರಾವಳಿ ಅಬಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಸದಾಶಿವ ಉಳ್ಳಾಲ್, ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಮೇಶ್ ಕಾಂಚನ್, ಹರೀಶ್ ಕಿಣಿ, ಗಣೇಶ್ ನೆರ್ಗಿ, ಶಬ್ಬೀರ್ ಅಹ್ಮದ್, ದಿನಕರ ಹೇರೂರು, ಪ್ರಶಾಂತ ಜತ್ತನ್ನ, ರಾಜು ಪೂಜಾರಿ, ವೆರೋನಿಕಾ ಕರ್ನೆಲಿಯೋ, ದಿನೆಶ್ ಕುಲಾಲ್, ಗೋಪಿನಾಥ್ ಭಟ್, ಸದಾನಂದ ಶೆಟ್ಟಿ, ತಿಮ್ಮ ಪೂಜಾರಿ, ಗೀತಾ ವಾಗ್ಳೆ, ಹಬೀಬ್ ಅಲಿ, ಉದ್ಯಾವರ ನಾಗೇಶ್ ಕುಮಾರ್, ಶರ್ಫುದ್ದೀನ್ ಶೇಖ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು.

ʼಒಬ್ಬ ಜ್ಞಾನೇಶ್, ಒಬ್ಬ ಮೋದಿ, ಒಬ್ಬ ಅಮಿತ್ ಶಾನ ಹಿಂದೆ ಇರುವುದು ಕಳೆದ 100 ವರ್ಷಗಳಲ್ಲಿ ನಮ್ಮ ದೇಶವನ್ನು ವ್ಯವಸ್ಥಿತವಾಗಿ ರೂಪಾಂತರ ಮಾಡುವ ಭಯಾನಕ ವೈಚಾರಿಕ ವೈರಸ್ ಎಂಬ ಆರ್‌ಎಸ್‌ಎಸ್. ಇದು ಆಳವಾಗಿ ಬೇರೂರಿದೆ. ಇದನ್ನು ಕೇವಲ ತಾತ್ಕಾಲಿಕ ಪ್ರತಿಭಟನೆಯಿಂದ ಸಾಧ್ಯ ಇಲ್ಲ. ಇಡೀ ಜನಾಕ್ರೋಶದಿಂದ ಮಾತ್ರ ಬೇರು ಸಮೇತ ಕಿತ್ತು ಹಾಕ ಬಹುದು’

-ಲಕ್ಷ್ಮೀಶ ಗಬ್ಬಲಡ್ಕ, ಧಾರ್ಮಿಕ ಚಿಂತಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X