ಟ್ರೈಬಲ್ ಹೆಲ್ತ್ ನ್ಯಾವಿಗೇಶನ್ ಯೋಜನೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ, ನ.5: ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಟ್ರೈಬಲ್ ಹೆಲ್ತ್ ನ್ಯಾವಿಗೇಶನ್ ಯೋಜನೆಯಡಿ ಜಿಲ್ಲಾ ಆದಿವಾಸಿ ಸಂಯೋಜಕಿ-1 ಹುದ್ದೆ ಹಾಗೂ ತಾಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆ -3 ಹುದ್ದೆಗಳ ನೇಮಕಾತಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ/ ಅಥವಾ ಜಿ.ಎನ್.ಎಂ ಅಥವಾ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐಟಿಡಿಪಿ ಕಛೇರಿ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದು ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




