ಪ್ರದೀಪ್ ಪೂಜಾರಿ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕರವೇ ಮನವಿ

ಉಡುಪಿ, ನ.7: ಪೆರ್ಡೂರು ಪ್ರದೀಪ್ ಪೂಜಾರಿ ಸಾವಿನ ಪ್ರಕರಣದ ಕುರಿತು ನ್ಯಾಯಸಮ್ಮತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಪ್ರಕರಣದ ಕುರಿತು ಸಮಗ್ರ, ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಿ ತನಿಖೆ ನಡೆಸಬೇಕು ಎಂದು ಕರವೇ ಆಗ್ರಹಿಸಿದೆ.
ಕರವೇ ಉಡುಪಿ ಜಿಲ್ಲಾಧ್ಯಕ್ಷ ಅ.ರಾ.ಪ್ರಭಾಕರ ಪೂಜಾರಿ, ಮುಖಂಡರಾದ ಕುಶಾಲ್ ಅಮೀನ್, ಅಯ್ಯಣ್ಣ ಸಾಬುದ್ದೀನ್, ಮಹಿಳಾ ಜಿಲ್ಲಾಧ್ಯಕ್ಷೆ ಅಶ್ವಿನಿ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ಯ ಪಳ್ಳಿ, ಪ್ರಧಾನ ಸಂಚಾಲಕಿ ಜಯಶ್ರೀ ಸುವರ್ಣ, ಸುನಂದಾ ಕೋಟ್ಯಾನ್, ಪವಿತ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Next Story




