Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಿರಂತರ ಕಲಿಕೆ ವೃತ್ತಿಜೀವನದ ಯಶಸ್ವಿಗೆ...

ನಿರಂತರ ಕಲಿಕೆ ವೃತ್ತಿಜೀವನದ ಯಶಸ್ವಿಗೆ ಅಗತ್ಯ: ಶಶಿಶೇಖರ್ ವೆಂಪತಿ

► ನಿಟ್ಟೆ ವಿವಿ ಘಟಿಕೋತ್ಸವದ ಮೂರನೇ ಅಧಿವೇಶನ ► 839 ಮಂದಿಗೆ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ9 Nov 2026 8:15 PM IST
share
ನಿರಂತರ ಕಲಿಕೆ ವೃತ್ತಿಜೀವನದ ಯಶಸ್ವಿಗೆ ಅಗತ್ಯ: ಶಶಿಶೇಖರ್ ವೆಂಪತಿ

ನಿಟ್ಟೆ (ಉಡುಪಿ), ನ.9: ಪದವಿ ಪಡೆದು ವೃತ್ತಿಜೀವನಕ್ಕೆ ಪ್ರವೇಶಿಸುವುದು ಕಲಿಕೆಯ ಅಂತ್ಯವಲ್ಲ, ಬದಲಾಗಿ ಹೊಸ ಸವಾಲುಗಳನ್ನು ಎದುರಿಸುವ ಪಯಣದ ಆರಂಭ. ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ನಿರಂತರ ಕಲಿಕೆ, ವಿಷಯಾಧಾರಿತ ಜ್ಞಾನ, ಉತ್ತಮ ಸಂವಹನ ಹಾಗೂ ಬದಲಾವಣೆಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿ ಕೊಳ್ಳಬೇಕು ಎಂದು ಪ್ರಸಾರ ಭಾರತಿಯ ಮಾಜಿ ಸಿಇಒ ಹಾಗೂ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಅಧ್ಯಕ್ಷ ಶಶಿಶೇಖರ್ ವೆಂಪತಿ ಅಭಿಪ್ರಾಯ ಪಟ್ಟಿದ್ದಾರೆ.

ನಿಟ್ಟೆ ಕ್ಯಾಂಪಸ್‌ನಲ್ಲಿ ಶನಿವಾರ ಅಪರಾಹ್ನ ನಡೆದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಮೂರನೇ ಅಧಿವೇಶನದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ನಂತರವೂ ಕಲಿಯುವ ಮನೋಭಾವವನ್ನು ಉಳಿಸಿಕೊಳ್ಳಬೇಕು. ವೃತ್ತಿಜೀವನದಲ್ಲಿ ಎದುರಾಗುವ ಸವಾಲುಗಳನ್ನು ಆತ್ಮ ವಿಶ್ವಾಸದಿಂದ ಸ್ವೀಕರಿಸಿ, ನಾಯಕತ್ವದ ಜವಾಬ್ದಾರಿಗಳನ್ನು ನಿಭಾಯಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ತಮ್ಮ ವೃತ್ತಿಜೀವನದ ಅನುಭವ ಹಂಚಿಕೊಂಡ ಅವರು, ಪ್ರಸಾರ ಭಾರತಿಯ ಸಿಇಒ ಆಗಿ ಜವಾಬ್ದಾರಿ ವಹಿಸಿ ಕೊಂಡ ಸಂದರ್ಭದಲ್ಲಿ ಎದುರಾದ ಸವಾಲುಗಳನ್ನು ವಿವರಿಸಿದರು. ದೂರದರ್ಶನ ಮತ್ತು ಆಕಾಶವಾಣಿಯಂತಹ ದೊಡ್ಡ ಸಂಸ್ಥೆಗಳನ್ನು ಮುನ್ನಡೆಸುವ ಜವಾಬ್ದಾರಿ, ಅವುಗಳ ಕಾರ್ಯವೈಖರಿಯನ್ನು ಬದಲಾದ ಕಾಲಕ್ಕೆ ತಕ್ಕಂತೆ ರೂಪಿಸುವುದು ಸುಲಭವಾಗಿರಲಿಲ್ಲ. ಆರಂಭದಲ್ಲಿ ತಮ್ಮ ವಯಸ್ಸು ಮತ್ತು ಅನುಭವದ ಬಗ್ಗೆ ತಮಗೇ ಅರಿವಿರಲಿಲ್ಲ. ಆದರೆ ಸವಾಲುಗಳನ್ನು ಸ್ವೀಕರಿಸಿ, ತಂಡದ ವಿಶ್ವಾಸ ದೊಂದಿಗೆ ಮುನ್ನಡೆಯುವುದು ನಾಯಕತ್ವದ ಪ್ರಮುಖ ಗುಣ ಎಂದು ವಿವರಿಸಿದರು.

ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಬದಲಾವಣೆಗಳು ಸಂಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ನಿರಂತರವಾಗಿ ನವೀಕರಿಸಿಕೊಳ್ಳಬೇಕು ಎಂದರು.

ನಿಟ್ಟೆ ವಿವಿಯ ಸಹ ಕುಲಾಧಿಪತಿ ಪ್ರೊ.ಎಂ.ಶಾಂತಾರಾಮ ಶೆಟ್ಟಿ ಮಾತನಾಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಸಮಾಜದ ಒಳಿತಿಗೆ ಬಳಸಿಕೊಳ್ಳುವಂತೆ ಕರೆ ನೀಡಿದರು.

ನಿಟ್ಟೆ ವಿವಿಯ ಕುಲಾಧಿಪತಿ ವಿಶಾಲ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ಸುವರ್ಣ ಪದಕ ವಿಜೇತರನ್ನು ಗೌರವಿಸಲಾಯಿತು. ಒಟ್ಟು 839 ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳಲ್ಲಿ ಪದವಿ ಪ್ರದಾನ ಮಾಡಲಾಯಿತು.

ನಿಟ್ಟೆ ವಿವಿಯ ಬೆಂಗಳೂರು ಕ್ಯಾಂಪಸ್ ಆಡಳಿತಾಧಿಕಾರಿ ರೋಹಿತ್ ಪೂಂಜ, ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಟ್ರಸ್ಟಿ ವಿರೇನ್ ಹೆಗ್ಡೆ, ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯ ಪ್ರೊ. ಡಾ.ಒಮೀದ್ ಅನ್ಸಾರಿ, ಬೆಂಗಳೂರು ಕ್ಯಾಂಪಸ್ ಉಪಾಧ್ಯಕ್ಷ ಪ್ರೊ.ಸಂದೀಪ್ ಶಾಸ್ತ್ರಿ, ಕುಲಸಚಿವ ಡಾ.ಹರ್ಷ ಹಾಲಹಳ್ಳಿ, ಪರೀಕ್ಷಾಂಗ ವಿಭಾಗದ ಮುಖ್ಯಸ್ಥ ಡಾ.ಪ್ರಸಾದ್ ಬಿ. ಶೆಟ್ಟಿ, ವಿವಿಧ ಕಾಲೇಜುಗಳ ಮುಖ್ಯಸ್ಥರು, ವಿಭಾಗಗಳ ನಿರ್ದೇಶಕರು ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಉಪಸ್ಥಿತರಿದ್ದರು.

ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್‌ನ ಪರೀಕ್ಷಾ ನಿಯಂತ್ರಕ ಡಾ. ಸುಬ್ರಹ್ಮಣ್ಯ ಭಟ್ ಕೆ. ಘಟಿಕೋತ್ಸವ ಮೆರವಣಿಗೆ ಮುನ್ನಡೆಸಿ, ಪದವಿ ಪಡೆದ ವಿದ್ಯಾರ್ಥಿ ಗಳ ಪಟ್ಟಿ ವಾಚಿಸಿದರು. ಕುಲಪತಿ ಪ್ರೊ.ಎಂ.ಎಸ್.ಮೂಡಿತ್ತಾಯ ಸ್ವಾಗತಿಸಿ ದರು. ಪ್ರಾಧ್ಯಾಪಕ ಹಾಗೂ ಸೆಂಟರ್ ಫಾರ್ ಇಂಡಿಯನ್ ನಾಲೆಡ್ಜ್ ಸಿಸ್ಟಮ್‌ನ ನಿರ್ದೇಶಕ ಡಾ.ಸುಧೀರ್‌ರಾಜ್ ಮತ್ತು ಸಹಾಯಕ ಪ್ರಾಧ್ಯಾಪಕಿ ಶ್ವೇತಾ ಭರತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X