ಮಹಿಳೆ ನಾಪತ್ತೆ

ಉಡುಪಿ, ನ.12: ತಾಲೂಕಿನ 76ಬಡಗಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಇಂದಿರಾನಗರ ನಿವಾಸಿ ಶಾಂತೇರಿ ನಾಯಕ್ (52) ಎಂಬ ಮಹಿಳೆ ನವೆಂಬರ್ 10ರಂದು ಅಪರಾಹ್ನ 3:30ರ ಸುಮಾರಿಗೆ ಮನೆಯಿಂದ ಹೋದವರು ಈವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ಸೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




