Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಎಫ್‌ಎಂ ಪ್ರೇಷಕ ಕೇಂದ್ರ...

ಉಡುಪಿ: ಎಫ್‌ಎಂ ಪ್ರೇಷಕ ಕೇಂದ್ರ ಉದ್ಘಾಟಿಸಿದ ಸಚಿವ ಅಶ್ವಿನಿ ವೈಷ್ಣವ್

ವಾರ್ತಾಭಾರತಿವಾರ್ತಾಭಾರತಿ13 Nov 2026 9:00 PM IST
share
ಉಡುಪಿ: ಎಫ್‌ಎಂ ಪ್ರೇಷಕ ಕೇಂದ್ರ ಉದ್ಘಾಟಿಸಿದ ಸಚಿವ ಅಶ್ವಿನಿ ವೈಷ್ಣವ್

ಉಡುಪಿ, ನ.13: ಮಂಗಳೂರು ಆಕಾಶವಾಣಿಯ ಕಾರ್ಯಕ್ರಮಗಳನ್ನು ಉಡುಪಿ ಸುತ್ತಮುತ್ತಲಿನ ಪ್ರದೇಶಗಳಿಗೆ ಗುಣಮಟ್ಟದ ಸೇವೆಯೊಂದಿಗೆ ಬಿತ್ತರಿಸಲು ಸಾಧ್ಯವಾಗುವಂತೆ ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾ ಗಿರುವ ಉಡುಪಿ ಎಫ್‌ಎಂ ಟ್ರಾನ್ಸ್‌ಮಿಷನ್ (ಪ್ರೇಷಕ) ಕೇಂದ್ರವನ್ನು ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್ ಇಂದು ಉದ್ಘಾಟಿಸಿದರು.

ಸುಮಾರು ಮೂರು ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಕೇಂದ್ರವು ಒಂದು ಕಿಲೋವ್ಯಾಟ್ ಸಾಮರ್ಥ್ಯವನ್ನು ಹೊಂದಿದ್ದು, 101.9 ಮೆಗಾಹರ್ಟ್ಸ್ ತರಂಗಾಂತರದಲ್ಲಿ ಉಡುಪಿ ಸುತ್ತಮುತ್ತ ಸುಮಾರು 30ಕಿ.ಮೀ. ವ್ಯಾಪ್ತಿಯಲ್ಲಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಗಳನ್ನು ಮರುಪ್ರಸಾರ ಮಾಡಲಿದೆ.

ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭವು ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯ ಬಲಪಡಿಸಲು ಒಂದು ಪ್ರಮುಖ ಹೆಜ್ಜೆಯಾಗಿದೆ. ನೂತನ ಎಫ್‌ಎಂ ಟ್ರಾನ್ಸ್‌ಮೀಟರ್ ಆಕಾಶವಾಣಿ ಮಂಗಳೂರಿನ ಕಾರ್ಯಕ್ರಮಗಳನ್ನು ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಕೇಳುಗರಿಗೆ ಗುಣಮಟ್ಟದ ರೇಡಿಯೋ ಪ್ರಸಾರ ವನ್ನು ತಲುಪಿಸುವ ಕಾರ್ಯ ಮಾಡಲಿದೆ ಎಂದು ಸಚಿವರು ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಈ ಸೇವೆಯ ಆರಂಭದೊಂದಿಗೆ ಮಾಹಿತಿ, ಶಿಕ್ಷಣ ಮತ್ತು ಮನರಂಜನೆಗೆ ವೇದಿಕೆಯನ್ನು ಒದಗಿಸುವುದರೊಂದಿಗೆ ಸ್ಥಳೀಯ ಸಂಸ್ಕೃತಿ, ಸಾಹಿತ್ಯ, ಸಂಗೀತ, ಕಲೆ ಮತ್ತು ಪ್ರಾದೇಶಿಕ ಸಂಪ್ರದಾಯಗಳನ್ನು ಉತ್ತೇಜನ ನೀಡುವ ಕೆಲಸ ಮಾಡಲಿದೆ. ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಮಹತ್ವದ ವಿಷಯಗಳ ಕುರಿತು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರು ಇದರಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಡಲಿದೆ. ಅಲ್ಲದೇ ಪ್ರಾಕೃತಿಕ ವಿಕೋಪ ದಂತಹ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ತಲುಪಿಸುವ ಸಂವಹನ ವ್ಯವಸ್ಥೆಯಾಗಿಯೂ ಕೇಂದ್ರ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕದ ಬೆಂಗಳೂರು ಹಾಗೂ ಕರಾವಳಿ ಯನ್ನು ಜೋಡಿಸುವ ವಂದೇಭಾರತ್ ರೈಲನ್ನು ಉಡುಪಿ ಜಿಲ್ಲೆಗೆ ಕೊಡುಗೆಯಾಗಿ ನೀಡಲು ಸಚಿವರು ಬಂದಿದ್ದಾರೆ. ಮಂಗಳೂರಿನಲ್ಲಿ ಇದಕ್ಕೆ ಸಚಿವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದ ಕೋಟ, ಜಿಲ್ಲೆಯ ಜನರಿಂದ ಎಫ್‌ಎಂ ರೇಡಿಯೊಗೆ ಬೇಡಿಕೆ ಇದ್ದು, ಇಂದು ಸಚಿವರಿಂದ ಉದ್ಘಾಟನೆ ಗೊಂಡಿರುವುದು ಚಾರಿತ್ರಿಕ ಕ್ಷಣವಾಗಿದೆ ಎಂದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಬೆಂಗಳೂರು ಹಾಗೂ ಮಡಗಾಂವ್‌ನ್ನು ಕರಾವಳಿ ಮೂಲಕ ಸಂಪರ್ಕಿಸುವ ವಂದೇ ಭಾರತ್ ರೈಲಿಗೆ ಇಂದು ಚಾಲನೆ ನೀಡುತಿರುವುದು ಸಂತಸದ ಸಂಗತಿ. ಮುಂದಿನ ದಿನ ಗಳಲ್ಲಿ ರೈಲ್ವೆ ಪ್ರಯಾಣಿಕರ ಬೇಡಿಕೆಯಂತೆ ನಿಲ್ದಾಣದ ಪರಿಸರದಲ್ಲಿ ಹೊಸತನ ತರಲು ಹಾಗೂ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಕಿರಣ್‌ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಆಕಾಶವಾಣಿ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಲ್ಲಿಕಾ ಅಜಿತ್ ಶೆಟ್ಟಿ ಹಾಗೂ ಡಾ. ಅನುಷಾ ಲೂವಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X