ಪಶು ಔಷಧಿ ಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ, ನ.13:ಕೇಂದ್ರ ಸರ್ಕಾರದ ಡಿಎಎಚ್‌ಡಿ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಔಷಧಿ ಒದಗಿಸುವ ನಿಟ್ಟಿನಲ್ಲಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೊಂದರಂತೆ ಬಿ.ಫಾರಂ/ಡಿ.ಫಾರಂ ಪದವೀಧರರ ನೇಮಕಾತಿಯೊಂದಿಗೆ ಪಶು ಔಷಧಿ ವಿಕ್ರಯ ಕೇಂದ್ರಗಳನ್ನು ಪ್ರಾರಂಭಿಸಲು, ಪಿ.ಎಂ ಕಿಸಾನ ನೆಮ್ಮದಿ ಕೇಂದ್ರ, ಹಾಲು ಉತ್ಪಾದಕರ ಸಹಕಾರಿ ಸಂಘ, ರೈತ ಸಂಪರ್ಕ ಕೇಂದ್ರ ಮತ್ತು ಇತರೇ ನೊಂದಾಯಿತ ಸಹಕಾರಿ ಸಂಘಗಳಿಂದ ಇಲಾಖೆಯ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸಂಘಸಂಸ್ಥೆಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನೋಡಲ್ ಅಧಿಕಾರಿಗಳು, ಪಶುವೈದ್ಯಕೀಯ ಪಾಲಿಕ್ಲಿನಿಕ್, ಉಡುಪಿ ಮೊ.ನಂ: 9845259740 ಅಥವಾ ಉಪನಿರ್ದೇಶಕರು (ಆಡಳಿತ), ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಉಡುಪಿ ಮೊ.ನಂ: 9448662556 ಅನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story




