ಸಮುದ್ರ ಪಾಲಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಗಂಗೊಳ್ಳಿ, ನ.14: ಸಮುದ್ರ ಪಾಲಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹ ಮಲ್ಯಾರಬೆಟ್ಟು ಬಳಿಯ ಸಮುದ್ರದಲ್ಲಿ ನ.13ರಂದು ಸಂಜೆ ವೇಳೆ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ನ.12ರಂದು ಸಂಜೆ ವೇಳೆ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಸಮೀಪದ ಸಮುದ್ರದಲ್ಲಿ ಈಜುತ್ತಿದ್ದ ಸುಮಾರು 35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹವು ಮಲ್ಯಾರಬೆಟ್ಟು ಬಳಿಯ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಮೀನುಗಾರರಿಗೆ ದೊರೆತಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




