Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಲ್ಯಾಣಪುರ: ಅಪರೂಪದ ಸಂರಕ್ಷಿತ...

ಕಲ್ಯಾಣಪುರ: ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ15 Nov 2026 8:57 PM IST
share
ಕಲ್ಯಾಣಪುರ: ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಉಡುಪಿ, ನ.15: ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್ ಮುಲ್ಕಿ ಹಾಗೂ ರಾಣಿ ಚಿಕ್ಕಾಯಿ ತಾಯಿ ಚಾರಿಟೇಬಲ್ ಟ್ರಸ್ಟ್ ಗುಳ್ಳಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಲ್ಯಾಣಪುರ ಕೆಂಚಮ್ಮದೇವಿ ದೇವಸ್ಥಾನದ ಆವರಣದಲ್ಲಿ ಸಂರಕ್ಷಿತ ವೀರ ಮಾಸ್ತಿ ಕಲ್ಲಿನ ಲೋಕಾರ್ಪಣೆ ಸಮಾರಂಭ ಇಂದು ನಡೆಯಿತು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಸಂರಕ್ಷಿತ ವೀರ ಮಾಸ್ತಿ ಕಲ್ಲಿನ ಲೋಕಾರ್ಪಣೆ ಮಾಡಿದರು. ಬಳಿಕ ದೇವಸ್ಥಾನದ ವಠಾರದಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಮಾರಂಭದಲ್ಲಿ ಮಾತನಾಡಿದ ಆದಿಮ ಕಲಾ ಟ್ರಸ್ಟ್ ಸ್ಥಾಪಕ ಸಂಚಾಲಕ ಪ್ರೊ.ಟಿ.ಮುರುಗೇಶಿ, ಕಲ್ಯಾಣ ಪುರದ ಕೆಂಚಮ್ಮ ದೇವಿ ದೇವಸ್ಥಾನ ಕೆಳದಿ ಕಾಲದಲ್ಲಿ ನಿರ್ಮಾಣವಾದ ದೇವಸ್ಥಾನ ಎಂಬುದು ತಿಳಿದುಬರುತ್ತದೆ. ಹಾಗಾಗಿ ಈ ಮಾಸ್ತಿ ಕಲ್ಲು ಕೆಳದಿ ಕಾಲದ್ದೇ ಆಗಿರಬೇಕು. ಅದನ್ನು ಹೊರತೆಗೆದು ಅಧ್ಯಯನ ಮಾಡಲಾಗಿದೆ ಎಂದರು.

ಸಾಮಾನ್ಯವಾಗಿ ವೀರಗಲ್ಲಿನಲ್ಲಿ ಯುದ್ದದ ಚಿತ್ರಣ ಇರುತ್ತದೆ. ಇದರಲ್ಲಿ ಯುದ್ದದ ಚಿತ್ರಣ ಇಲ್ಲ. ವಾದ್ಯದವರು ಇದ್ದಾರೆ. ಇದು ವಿಶೇಷ ಭಂಗಿ. ವೇಳೆ ವಾಳಿ ಪದ್ಧತಿಯಲ್ಲಿ ಇದು ಕಂಡುಬರುತ್ತದೆ. ದಕ್ಷಿಣ ಭಾರತದಲ್ಲಿ 9 ರಿಂದ 13 ನೇ ಶತಮಾನದವರೆಗೆ ಈ ಪದ್ದತಿ ಅಸ್ತಿತ್ವದಲ್ಲಿತ್ತು. ವೇಳೆ ವಾಳಿ ಪದ್ದತಿಯ ಕಾಲದಲ್ಲಿ ರಾಜ ಸತ್ತಾಗ ಅವನ ಪತ್ನಿಯರು ಪ್ರಾಣ ತ್ಯಾಗ ಮಾಡಿದಾಗಿನ ಸನ್ನಿವೇಶ ಇದರಲ್ಲಿ ಕಾಣಸಿಗುತ್ತದೆ. ಆ ಘಟನೆಯ ಪ್ರತೀಕವಾಗಿ ಈ ಮಾಸ್ತಿಕಲ್ಲು ರಚಿಸಿ ಇಲ್ಲಿ ಇಡಲಾಗಿದೆ. ಈ ಅಪರೂಪದ ಮಾಸ್ತಿ ಕಲ್ಲನ್ನು ಮುಂದಿನ ಜನಾಂಗಕ್ಕೆ ಸಂರಕ್ಷಣೆ ಮಾಡಿ ಇಡಬೇಕಾಗಿದೆ ಎಂದು ಅವರು ಹೇಳಿದರು.

ಗಜನಿ ಫೌಂಡೇಶನ್ ಮುಲ್ಕಿ ಹಾಗೂ ಪಡುನಾಡು ಕೂಟದ ಅಧ್ಯಕ್ಷ ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಜಿಯೋಸಿಸ್ ಟೆಕ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ರಾಜಶೇಖರ ಕೋಟ್ಯಾನ್, ಹಂಪಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕ ಡಾ.ಆರ್.ಶೇಜೇಶ್ವರ ಮುಖ್ಯ ಅತಿಥಿಗಳಾಗಿದ್ದರು. ಉಪನ್ಯಾಸಕಿ ಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X