Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪೊಲೀಸ್ ಸಿಬ್ಬಂದಿಗೆ ಪುನರಾವರ್ತಿತ...

ಪೊಲೀಸ್ ಸಿಬ್ಬಂದಿಗೆ ಪುನರಾವರ್ತಿತ ತರಬೇತಿ ಅಗತ್ಯ: ಡಾ.ತಿಪೇಸ್ವಾಮಿ

ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ ಕುರಿತ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ19 Nov 2026 7:57 PM IST
share
ಪೊಲೀಸ್ ಸಿಬ್ಬಂದಿಗೆ ಪುನರಾವರ್ತಿತ ತರಬೇತಿ ಅಗತ್ಯ: ಡಾ.ತಿಪೇಸ್ವಾಮಿ

ಉಡುಪಿ, ನ.19: ಮಕ್ಕಳಿಂದ ಅಪರಾಧವೊಂದು ಘಟಿಸಿದಾಗ ಮಕ್ಕಳ ಮನಸ್ಥಿತಿಯ ಬಗ್ಗೆ ಮೊದಲು ಆಲೋಚಿಸ ಬೇಕು. ಅಪರಾಧಕ್ಕೆ ಕಾರಣವಾದ ಹಿನ್ನೆಲೆಯ ಬಗ್ಗೆ ತಿಳಿದುಕೊಳ್ಳಬೇಕು. ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪದೇ ಪದೇ ಬದಲಾಗುವುದರಿಂದಾಗಿ ಪುನರಾವರ್ತಿತ ತರಬೇತಿಯ ಅಗತ್ಯತೆಯ ಹಿನ್ನೆಲೆಯಲ್ಲಿ ಕಾರ್ಯಗಾರ ವನ್ನು ನಡೆಸಲಾಗುತ್ತಿದೆ. ಮಕ್ಕಳ ಮೇಲೆ ಅಥವಾ ಮಕ್ಕಳಿಂದ ಅಪರಾಧ ನಡೆದಾಗ ಸಕಾಲದಲ್ಲಿ ಸಕಾರಾತ್ಮಕ ಸ್ಪಂದನೆ ನೀಡಿ ಕಾನೂನಿನ ಸಂಘರ್ಷ ತಪ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲಸ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕ ಉಡುಪಿ ಇವುಗಳ ಸಹಯೋಗದಲ್ಲಿ ಮಣಿಪಾಲದ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಮಕ್ಕಳ ರಕ್ಷಣೆ ಎಂಬುದು ಕೇವಲ ಒಂದು ಇಲಾಖೆಗೆ ಸಂಬಂಧಪಟ್ಟ ವಿಚಾರ ಅಲ್ಲ. ಮಕ್ಕಳ ರಕ್ಷಣೆಯ ವಿಚಾರ ಬಂದಾಗ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಾಗುತ್ತದೆ. ಆದ್ದರಿಂದ ನಿರಂತರ ತರಬೇತಿ ಕಾರ್ಯಕ್ರಮಗಳನ್ನು ನಡೆಸಬೇಕಾಗುತ್ತದೆ ಎಂದು ಹೇಳಿದರು.

ಮಕ್ಕಳ ಘಟಕಗಳ ರಕ್ಷಣಾ ಆಯೋಗದ ಸದಸ್ಯತ್ವದ ಅವಧಿಯಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ತಾನು ಸರಕಾರಕ್ಕೆ ಸಲ್ಲಿಸಿದ ಶಿಫಾರಸುಗಳಲ್ಲಿ ರಾಜ್ಯ ಸರಕಾರವು 106 ಸುತ್ತೋಲೆಗಳನ್ನು ಹೊರಡಿಸಿದೆ ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡರು.

ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರೇಮಮೂರ್ತಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ. ಸುಮಾರು 47 ಇಲಾಖೆಗಳು ನೇರ ಅಥವಾ ಪರೋಕ್ಷವಾಗಿ ಮಕ್ಕಳ ರಕ್ಷಣೆ ಸಂಬಂಧಿಸಿ ಜವಾಬ್ದಾರರಾಗಿರುತ್ತವೆ. ಯಾವುದೇ ಯೋಜನೆಯನ್ನು ಅನುಷ್ಠಾನ ಮಾಡುವಾಗ ಮಕ್ಕಳ ಹಿತರಕ್ಷಣೆಯ ದೃಷ್ಟಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದರು.

ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಎಂದೇ 30 ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಗಳ ಸಮರ್ಪಕ ಜಾರಿಗಾಗಿ ಎಲ್ಲ ಇಲಾಖೆಗಳು ಕೈ ಜೋಡಿಸಬೇಕು. ಮಕ್ಕಳ ಹಿತರಕ್ಷಣೆ ಬಗ್ಗೆ ಮುಕ್ತ ಚರ್ಚೆ ನಡೆಯಲಿ ಎನ್ನುವ ಉದ್ದೇಶದಿಂದ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕುಂದಾಪುರ ಡಿವೈಎಸ್ಪಿ ಹೆಚ್.ಡಿ ಕುಲಕರ್ಣಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಅಶ್ವಿತಾ ಶಾಲೆಟ್, ಪಡಿ ಸಂಸ್ಥೆ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೆನಿ ಪೀಟರ್ ಡಿ’ಸೋಜ ಉಪಸ್ಥಿತ ರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಮಕ್ಕಳ ಸಹಾಯವಾಣಿ ಯೋಜನಾ ಸಂಯೋಜಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X