Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಿಳಾ ಮೀನುಗಾರರ ಸ್ವಸಹಾಯ ಗುಂಪುಗಳಿಗೆ...

ಮಹಿಳಾ ಮೀನುಗಾರರ ಸ್ವಸಹಾಯ ಗುಂಪುಗಳಿಗೆ ಸಾಲ ವಿತರಣೆ

ವಾರ್ತಾಭಾರತಿವಾರ್ತಾಭಾರತಿ20 Nov 2026 9:07 PM IST
share
ಮಹಿಳಾ ಮೀನುಗಾರರ ಸ್ವಸಹಾಯ ಗುಂಪುಗಳಿಗೆ ಸಾಲ ವಿತರಣೆ

ಕುಂದಾಪುರ, ನ.20: ಯಾವ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೂ ಕಡಿಮೆ ಇಲ್ಲದೇ ಸಹಕಾರಿ ಸಂಘಗಳು ಸಾಲ ಸೌಲಭ್ಯ ನೀಡುವ ಮೂಲಕ ಅಭಿವೃದ್ಧಿಗೊಂಡು ಜನರಿಂದ ಜನರಿಗಾಗಿ ಜನರಿಗೋಸ್ಕರ ಸೇವೆ ನೀಡಿ ಬೆಳೆಯುತ್ತಿದೆ. ಮೀನು ಗಾರರಿಗೆ ಸರಕಾರ ನೀಡುವ ಸವಲತ್ತುಗಳನ್ನು ಮತ್ತು ವಿಮಾ ಯೋಜನೆ ಮಾಹಿತಿಗಳನ್ನು ಇಲಾಖೆಯು ಸಂಘದ ಗ್ರಾಹಕರಿಗೆ ಮತ್ತು ಮೀನುಗಾರರಿಗೆ ಸಮರ್ಪಕವಾಗಿ ನೀಡುವ ಕೆಲಸವನ್ನು ಸರಿಯಾಗಿ ಮಾಡಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘ ಬೀಜಾಡಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಜರಗಿದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಾಗೂ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ವತಿಯಿಂದ ಮಹಿಳಾ ಮೀನುಗಾರರ ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಹಿಳಾ ಮೀನುಗಾರರ ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಂಪನ್ಮೂಲ ವ್ಯಕ್ತಿ ಶ್ರೀಧರ್ ಪಿ.ಎಸ್. ಮಹಿಳೆಯರು, ಯುವ ಜನರು ಮತ್ತು ಸಮಾಜದ ಅಂಚಿನ ವರ್ಗಗಳು ಸಹಕಾರ ಕ್ಷೇತ್ರದಲ್ಲಿ ಪಾಲ್ಗೊಳ್ಳುವಿಕೆಯ ಕುರಿತು ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಮೀನುಗಾರಿಕಾ ಜಂಟಿ ನಿರ್ದೇಶಕ ಬಿ.ವಿ.ಕುಮಾರ ಸ್ವಾಮಿ, ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್, ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಂ.ಎಂ. ಆನಂದ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್, ಮೀನುಗಾರಿಕಾ ಸಹಾಯಕ ನಿರ್ದೇಶಕಿ ಆಶಾ, ಸಹಕಾರಿ ಧುರೀಣರಾದ ಅರುಣ್ ಕುಮಾರ್ ಶೆಟ್ಟಿ, ವೈ.ಸುಧೀರ್ ಕುಮಾರ್ ಶೆಟ್ಟಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ನಾಗೇಶ್ ಉಪಸ್ಥಿತರಿದ್ದರು.

ಈ ಸಂದರ್ಭ ಮೀನುಗಾರಿಕೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ವಿಮಾ ನಿಧಿ ವಿತರಣೆ, ಮಹಿಳಾ ಮೀನುಗಾರ ಸ್ವಸಹಾಯ ಸಂಘಗಗಳಿಗೆ ಸಾಲ ವಿತರಣೆ, ಮಹಿಳಾ ಮೀನುಗಾರರಿಕೆ ಮೀನು ಸಂರಕ್ಷಣೆಯ ಪ್ರೀಜರ್ ಕೊಡುಗೆ, ಮೀನುಗಾರರಿಗೆ ಲೈಫ್ ಜಾಕೇಟ್ ವಿತರಣೆ, ಶೈಕ್ಷಣಿಕ ಮತ್ತು ಸಹಾಯ ಹಸ್ತದ ನೆರವನ್ನು ವಿತರಿಸಲಾಯಿತು. ಸಹಕಾರಿ ರತ್ನ ಇಂದ್ರಾಳಿ ಜಯಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕಾಂಚನ್ ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X