ಪಿಕ್ಅಪ್ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

ಬ್ರಹ್ಮಾವರ, ನ.20: ಪಿಕ್ಅಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.19ರಂದು ರಾತ್ರಿ 7.30ರ ಸುಮಾರಿಗೆ ಯಡ್ತಾಡಿ ಗ್ರಾಮದ ದ್ವಾರಕ ಬಾರ್ ಬಳಿ ನಡೆದಿದೆ.
ಮೃತರನ್ನು ಹರೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬಾರ್ಕೂರು ಕಡೆಯಿಂದ ಯಡ್ತಾಡಿ ಕಡೆಗೆ ಹೋಗುತ್ತಿದ್ದ ಪಿಕ್ಅಪ್ ವಾಹನ, ರಸ್ತೆ ದಾಟಿ ರಸ್ತೆಯ ಅಂಚಿಗೆ ಬಂದಿದ್ದ ಹರೀಶ್ ಶೆಟ್ಟಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಹರೀಶ್ ಶೆಟ್ಟಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




