ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಶಿರ್ವ, ನ.21: ಕಟ್ಟಿಂಗೇರಿ ಗ್ರಾಮದ ಎಡ್ಮೇರು ಕಟ್ಟದ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ಕರುಣಾಕರ ಶೆಟ್ಟಿ(68) ಎಂಬವರು ಅನಾರೋಗ್ಯ ಮತ್ತು ಮಾನಸಿಕ ಖಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.19ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ವೈಯಕ್ತಿಕ ಕಾರಣದಿಂದ ಮನನೊಂದ ಹಂಗಾರಕಟ್ಟೆಯ ಬಾರ್ನಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದ ಬಾಳ್ಕುದ್ರು ನಿವಾಸಿ ದೇವೇಂದ್ರ (65) ಎಂಬವರು ನ.21ರಂದು ಬೆಳಗ್ಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




