ಮೇ 10ರಂದು ಜಿಲ್ಲಾ ಉಸ್ತುವಾರಿ ಸಚಿವರು ಉಡುಪಿಗೆ ಭೇಟಿ

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಮೇ 9 ಮತ್ತು 10ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶುಕ್ರವಾರ ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯಮಾಡಲಿರುವ ಸಚಿವೆ ಮೇ 10ರಂದು ಬೆಳಗ್ಗೆ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪರಾಹ್ನ 3 ಗಂಟೆಗೆ ಕಾಪು ಮಾರಿ ಗುಡಿಗೆ ಭೇಟಿ ನೀಡಲಿದ್ದು ಬಳಿಕ ಸಂಜೆ 4 ಗಂಟೆಗೆ ಉದ್ಯಾವರದ ಎಸ್ಡಿಎಂ ಆಯುರ್ವೇದ ಕಾಲೇಜಿನಲ್ಲಿ ನವೀಕರಿಸಿದ ಡಿಜಿಟಲ್ ಎಕ್ಸ್ರೇ ಹಾಗೂ ಲ್ಯಾಬ್ ಕೊಠಡಿಗಳ ಉದ್ಘಾಟನಾ ಕಾರ್ಯ ಕ್ರಮದಲ್ಲಿ ಭಾಗವಹಿಸುವರು. ರಾತ್ರಿ ಉಡುಪಿಯ ಸರಕಾರಿ ಅತಿಥಿಗೃಹದಲ್ಲಿ ವಾಸ್ತವ್ಯ ವಾಡಲಿದ್ದಾರೆ.
Next Story