Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉದ್ಯಾವರ: ಮೃತ ಮೀನುಗಾರ ಕುಟುಂಬಕ್ಕೆ...

ಉದ್ಯಾವರ: ಮೃತ ಮೀನುಗಾರ ಕುಟುಂಬಕ್ಕೆ ಸಚಿವರಿಂದ 10 ಲಕ್ಷ ಪರಿಹಾರ ಧನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ15 July 2025 8:24 PM IST
share
ಉದ್ಯಾವರ: ಮೃತ ಮೀನುಗಾರ ಕುಟುಂಬಕ್ಕೆ ಸಚಿವರಿಂದ 10 ಲಕ್ಷ ಪರಿಹಾರ ಧನ ವಿತರಣೆ

ಉಡುಪಿ, ಜು.15: ಕಳೆದ ಶುಕ್ರವಾರ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸೈಂಟ್ ಮೇರೀಸ್ ದ್ವೀಪದ ಬಳಿ ಬೃಹತ್ ತೆರೆ ಬಡಿದು ದೋಣಿ ಮಗುಚಿ ನಡೆದ ದುರಂತದಲ್ಲಿ ಮೃತಪಟ್ಟ ಉದ್ಯಾವರ ಸಮೀಪದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ.ತಿಂಗಳಾಯರ ಮನೆಗೆ ಇಂದು ಅಪರಾಹ್ನ ಭೇಟಿ ನೀಡಿದ ರಾಜ್ಯ ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ಅವರು ಮೃತರ ಕುಟುಂಬಕ್ಕೆ ಸರಕಾರದ ವತಿಯಂದ 10 ಲಕ್ಷ ರೂ.ಗಳ ಪರಿಹಾರದ ಚೆಕ್‌ನ್ನು ವಿತರಿಸಿದರು.

ಮುರ್ಡೇಶ್ವರದಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಅಪರಾಹ್ನ ಉಡುಪಿಗೆ ಆಗಮಿಸಿದ ಸಚಿವ ವೈದ್ಯ ನೇರವಾಗಿ ಪಿತ್ರೋಡಿಯಲ್ಲಿರುವ ಮೃತ ಮೀನುಗಾರರ ಪುಟ್ಟ ಮನೆಗೆ ಬಂದು ಹೆಂಡತಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ಸಾಂತ್ವನ ಹೇಳಿ, ದೈರ್ಯ ತುಂಬಿ ಪರಿಹಾರದ ಚೆಕ್‌ನ್ನು ವಿತರಿಸಿದರು.

ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಮೃತ ಮೀನುಗಾರರ ಕುಟುಂಬಕ್ಕೆ ಇದುವರೆಗೆ ಸಿಗುತಿದ್ದ 6 ಲಕ್ಷ ರೂ. ಪರಿಹಾರದ ಮೊತ್ತವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ವಿಶ್ವ ಮೀನುಗಾರಿಕಾ ದಿನದಂದು 10 ಲಕ್ಷ ರೂ.ಗಳಿಗೆ ಏರಿಸುವ ಘೋಷಣೆ ಮಾಡಿದ್ದಾರೆ. ಇದೀಗ ಪ್ರಥಮ ವಾಗಿ ನೀಲಾಧರ ತಿಂಗಳಾಯರ ಕುಟುಂಬಕ್ಕೆ ಈ ಮೊತ್ತದ ಚೆಕ್‌ನ್ನು ನೀಡಲಾಗಿದೆ ಎಂದರು.

ಇದರೊಂದಿಗೆ ಇದೇ ಪ್ರಥಮ ಬಾರಿಗೆ ದುರಂತದಲ್ಲಿ ಮೀನುಗಾರಿಕಾ ದೋಣಿ ಹಾಗೂ ಬಲೆ ಸೇರಿದಂತೆ ವಿವಿಧ ಮೀನುಗಾರಿಕಾ ಪರಿಕರಗಳಿಗೆ ಉಂಟಾಗುವ ನಷ್ಟವನ್ನೂ ಭರಿಸುವ ನಿರ್ಧಾರ ಮಾಡಲಾಗಿದೆ. ಅದರಂತೆ ಈ ದೋಣಿಯ ಎಂಜಿನ್ ಹಾಗೂ ಬಲೆಗಳಿಗೆ ಆಗಿರುವ ನಷ್ಟಕ್ಕೆ ಐದು ಲಕ್ಷ ರೂ.ಗಳ ಪರಿಹಾರದ ಚೆಕ್‌ನ್ನು ಮೀನುಗಾರ ಮುಖಂಡರಿಗೆ ನೀಡಲಾಗಿದೆ. ಇದರಲ್ಲಿ ಉಳಿಯುವ ಹಣವನ್ನು ತಿಂಗಳಾಯರ ಕುಟುಂಬಕ್ಕೆ ನೀಡುವಂತೆ ತಿಳಿಸಲಾಗಿದೆ ಎಂದರು.

ಕೆಲಸಮಯದಿಂದ ಅನಾರೋಗ್ಯದ ಕಾರಣದಿಂದ ಮೀನುಗಾರಿಕಾ ವೃತ್ತಿಗೆ ಹೋಗಲು ಅಸಾಧ್ಯವಾಗಿರುವ ನೀಲಾಧರರ ಪತ್ನಿ ವಸಂತಿ, ಮಕ್ಕಳಾದ ಫ್ಯಾಶನ್ ಡಿಸೈನಿಂಗ್ ಕೋರ್ಸ್ ಮಾಡುತ್ತಿರುವ ಪುತ್ರಿ ಲಿಶಾ ಹಾಗೂ ಪಿಯುಸಿಯಲ್ಲಿ ಓದುತ್ತಿರುವ ತ್ರಿಶಾರನ್ನು ಸಂತೈಸಿದ ಸಚಿವರು, ಮುಂದೆ ಅಗತ್ಯದ ಎಲ್ಲಾ ಸಹಾಯ ಮಾಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ವಿವಿಧ ಪಕ್ಷಗಳ ನಾಯಕರು ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X