Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಮಳೆಗೆ ಮನೆ ಸಂಪೂರ್ಣ ಹಾನಿ;...

ಕುಂದಾಪುರ: ಮಳೆಗೆ ಮನೆ ಸಂಪೂರ್ಣ ಹಾನಿ; 10 ಲಕ್ಷ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ21 July 2025 7:12 PM IST
share
ಕುಂದಾಪುರ: ಮಳೆಗೆ ಮನೆ ಸಂಪೂರ್ಣ ಹಾನಿ; 10 ಲಕ್ಷ ರೂ. ನಷ್ಟ

ಉಡುಪಿ, ಜು.21: ಕುಂದಾಪುರ ತಾಲೂಕು ಕುಂದಬಾರಂದಾಡಿಯ ರಾಘವೇಂದ್ರ ಜೋಗಿ ಎಂಬವರ ಮನೆ ಗಾಳಿ-ಮಳೆಗೆ ಕುಸಿದು ಸಂಪೂರ್ಣ ಹಾನಿಗೊಂಡಿದ್ದು, 10 ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಅಲ್ಲದೇ ದಿನದಲ್ಲಿ ಹಾರ್ದಳ್ಳಿ-ಮಂಡಳ್ಳಿಯ ಭುಜಂಗ ಶೆಟ್ಟಿ ಎಂಬವರ ಮನೆಯೂ ಭಾಗಶ: ಹಾನಿಗೊಂಡಿದ್ದು 25,000ರೂ. ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇಂದೂ ಮುಂದು ವರಿದಿದೆ. ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 34ಮಿ.ಮೀ. ಮಳೆಯಾಗಿದೆ. ಕುಂದಾಪುರ ದಲ್ಲಿ 42.1ಮಿ.ಮೀ, ಬೈಂದೂರಿನಲ್ಲಿ 39.2ಮಿ.ಮೀ., ಕಾಪುವಿನಲ್ಲಿ 33.1 ಮಿ.ಮೀ., ಕಾರ್ಕಳದಲ್ಲಿ 31.1ಮಿ.ಮೀ., ಉಡುಪಿಯಲ್ಲಿ 30.7ಮಿ.ಮೀ., ಬ್ರಹ್ಮಾವರದಲ್ಲಿ 29.7 ಹಾಗೂ ಹೆಬ್ರಿಯಲ್ಲಿ 23.1ಮಿ.ಮೀ. ಮಳೆಯಾದ ವರದಿ ಬಂದಿದೆ.

ಭಾರೀ ಗಾಳಿ-ಮಳೆ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯ ಕರಾವಳಿಯ ಭಾಗದಲ್ಲಿ ಇಂದಿನಿಂದ (ಜು.21) ಜುಲೈ 27ರವರೆಗೆ ಹೆಚ್ಚಿನ ಗಾಳಿಯಿಂದ (ಗಂಟೆಗೆ ಸುಮಾರು 50 ಕಿ.ಮೀ.) ಕೂಡಿದ ಮಳೆಯ ‘ಯೆಲ್ಲೋ ಅಲರ್ಟ್’ ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಇದರಿಂದ ಸಮುದ್ರದಲ್ಲಿ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ.

ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಮತ್ತು ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ/ಸಿಡಿಲಿನ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು.

ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಇದ್ದಿರಬಾ ರದು. ಅಲ್ಲದೇ ತುಂಡಾಗಿ ಬಿದ್ದ ವಿದ್ಯುತ್ ತಂತಿಗಳನ್ನು ಕೈಯಿಂದ ಮುಟ್ಟಬಾರದು. ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಬಳಿ ಮರದ ಅಪಾಯಕಾರಿ ಗೆಲ್ಲು/ರೆಂಬೆ-ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ, ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.

ಹೆಚ್ಚು ಮಳೆಯಾಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಭೂಕುಸಿತ ವಾಗುವ ಸಂಭವ ಹೆಚ್ಚಾಗಿರು ತ್ತದೆ. ಇಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಛೇರಿ ಅಥವಾ ಗ್ರಾಪಂ ಸಿಬ್ಬಂದಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಮುಂಚಿತವಾಗಿ ಆಶ್ರಯ ಪಡೆಯಬಹುದು.

ಮುಂದಿನ 7 ದಿನಗಳಲ್ಲಿ, ಹೆಚ್ಚು ಗಾಳಿಯೊಂದಿಗೆ ಮಳೆ ಬರುವುದರಿಂದ ಸಾರ್ವಜನಿಕರು ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿರಬೇಕು. ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಅಥವಾ ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.

ಹೆಚ್ಚಿನ ಮಾಹಿತಿಗಾಗಿ ತುರ್ತು ಸೇವೆಗೆ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂನ ಶುಲ್ಕ ರಹಿತ 1077 ಹಾಗೂ ದೂರವಾಣಿ ಸಂಖ್ಯೆ: 0820- 2574802, ಉಡುಪಿ ನಗರಸಭೆಯ ಸಹಾಯವಾಣಿ ಸಂಖ್ಯೆ: 0820- 2593366 ಹಾಗೂ 0820-2520306 ಅಥವಾ ತಾಲೂಕು ತಹಶೀಲ್ದಾರರ ಕಛೇರಿಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾಪು ದೂ.ಸಂಖ್ಯೆ: 0820-2551444, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಬೈಂದೂರು ದೂ.ಸಂಖ್ಯೆ: 08254-251657, ಕಾರ್ಕಳ ದೂ.ಸಂಖ್ಯೆ: 08258-230201 ಹಾಗೂ ಹೆಬ್ರಿ ದೂ.ಸಂಖ್ಯೆ: 08253-250201ನ್ನು ಸಂಪರ್ಕಿಸಬಹುದು.

ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X