Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಎಸ್‌ಐಆರ್‌ನ ಡಿಜಿಟಲೀಕರಣ ಕಾರ್ಯ...

ಉಡುಪಿ: ಎಸ್‌ಐಆರ್‌ನ ಡಿಜಿಟಲೀಕರಣ ಕಾರ್ಯ ಶೇ.100 ಮುಕ್ತಾಯ

ವಾರ್ತಾಭಾರತಿವಾರ್ತಾಭಾರತಿ6 Aug 2026 9:49 PM IST
share
ಉಡುಪಿ: ಎಸ್‌ಐಆರ್‌ನ ಡಿಜಿಟಲೀಕರಣ ಕಾರ್ಯ ಶೇ.100 ಮುಕ್ತಾಯ
ಒಟ್ಟು 64,201 ಮಂದಿಯ ಹೆಸರು ಪಟ್ಟಿಯಿಂದ ಹೊರಗೆ

ಉಡುಪಿ, ಆ.6: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಮುಕ್ತಾಯಗೊಂಡಿದೆ. ಬಾಕಿ ಉಳಿದಿದ್ದ 14 ಗಣತಿ ನಮೂನೆಗಳ ಡಿಜಟಲೀಕರಣ ಇಂದು ನಡೆಯುವ ಮೂಲಕ ಜಿಲ್ಲೆಯಲ್ಲಿ ಒಟ್ಟು 9,99,675 ಎನ್ಯೂಮರೇಷನ್ ಫಾರಂಗಳ ಡಿಜಿಟಲೀಕರಣ ಕಾರ್ಯ ಮುಕ್ತಾಯಗೊಂಡಿದೆ.

ಜಿಲ್ಲೆಯಲ್ಲಿ ಒಟ್ಟು 10,63,876 ಮತದಾರರಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಎಲ್ಲರಿಗೂ ಗಣತಿ ಫಾರಂನ್ನು ವಿತರಿಸಿದ್ದರು. ಇವರಲ್ಲಿ 9,99,675 ಮಂದಿಯ ಗಣತಿ ನಮೂನೆ ಇದೀಗ ಡಿಜಿಟಲೀಕರಣ ಗೊಳ್ಳುವ ಮೂಲಕ ಶೇ.100 ಸಾಧನೆ ಮಾಡಲಾಗಿದೆ. ಉಳಿದ ಒಟ್ಟು 64,201 ಮಂದಿಯ ಹೆಸರನ್ನು ವಿವಿಧ ಕಾರಣಗಳಿ ಗಾಗಿ (ಎಎಸ್‌ಡಿಡಿಒ) ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತದೆ. ಇವರಲ್ಲಿ ಮೃತರು, ಸ್ಥಳಾಂತರಗೊಂಡವರು, ದ್ವಿಪ್ರತಿ ಸಲ್ಲಿಸಿದವರು ಹಾಗೂ ಗೈರಾದವರು ಸೇರಿದ್ದಾರೆ.

ಜಿಲ್ಲೆಯ ಒಟ್ಟು 10,63,876 ಮತದಾರರ ಪೈಕಿ ಶೇ. 93.97 ಮಂದಿಯ ಅಂದರೆ 9,99,675 ಮಂದಿಯ ಗಣತಿ ನಮೂನೆ ಡಿಜಿಟಲೀಕರಣ ವಾಗಿದ್ದರೆ, ಶೇ.6.03 ಮಂದಿಯ ಅಂದರೆ 64,201ಯ ಹೆಸರು ಪಟ್ಟಿಯಿಂದ ಹೊರ ಬೀಳಲಿದೆ. ಈ ಮೂಲಕ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಸಂಪೂರ್ಣಗೊಂಡಂತಾಗಿದೆ.

ಉಡುಪಿ ಜಿಲ್ಲೆಯಲ್ಲಿ 35,044 (ಶೇ.3.29) ಮಂದಿಯ ಮ್ಯಾಪಿಂಗ್ ಆಗಿಲ್ಲ. ಇವರೆಲ್ಲರ ಹೆಸರನ್ನು ಶೀಘ್ರವೇ ಪ್ರಕಟಗೊಳ್ಳುವ ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತದೆ. ಇನ್ನು 4,68,625(ಶೇ.44.05) ಮಂದಿ ಸ್ವಯಂ ಮ್ಯಾಪಿಂಗ್ ಆಗಿದ್ದರೆ, 4,95,892 (ಶೇ.46.61) ಮಂದಿಯ ಮ್ಯಾಪಿಂಗ್ ವಂಶಸ್ಥರ ಮೂಲಕ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X