ಉಡುಪಿ ಜಿಲ್ಲೆಯ 1058 ರೈತರಿಗೆ 475 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ: ಜಂಟಿ ಕೃಷಿ ನಿರ್ದೆಶಕರು

ಉಡುಪಿ, ಮೇ 17: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 35,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಬಿತ್ತನೆಗೆ ಪೂರ್ವಸಿದ್ಧತಾ ಕ್ಷೇತ್ರ ಮಟ್ಟದಲ್ಲಿ ಪ್ರಗತಿಯಲ್ಲಿದೆ. ಪ್ರಸ್ತುತ 1058 ಮಂದಿ ರೈತರಿಗೆ 475 ಕ್ವಿಂಟಾಲ್ ಬಿತ್ತನೆ ಬೀಜವನ್ನು ವಿತರಿಸಲಾಗಿದ್ದು, ಅವಶ್ಯಕತೆಗೆ ಅನುಗುಣವಾಗಿ ಹಂತ ಹಂತವಾಗಿ ಬಿತ್ತನೆ ಬೀಜವನ್ನು ದಾಸ್ತಾನೀಕರಿಸಿ ಪೂರೈಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.
ಕೃಷಿ ಇಲಾಖೆಯಿಂದ ರೈತರಿಗೆ ಅವಶ್ಯವಿರುವ ಎಂ.ಓ-4 ತಳಿಯ ಬಿತ್ತನೆೆ ಬೀಜವನ್ನು ಜಿಲ್ಲೆಯ 9 ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಲಾಗಿದ್ದು, ಸಹಾಯಧನದಲ್ಲಿ ರೈತರು ಪಡೆದುಕೊಳ್ಳ ಬಹುದಾ ಗಿದೆ. ಜಿಲ್ಲೆಗೆ ಮುಂಗಾರು ಹಂಗಾಮಿಗೆ ಅಂದಾಜು 2,500 ಕ್ವಿಂಟಾಲ್‌ನಷ್ಟು ಬಿತ್ತನೆ ಬೀಜದ ಅವಶ್ಯಕತೆ ಇದೆ. ಈಗಾಗಲೇ 2,800 ಕ್ವಿಂಟಾಲ್ ಎಂ.ಓ-4 ಬಿತ್ತನೆ ಬೀಜ ಸರಬರಾಜಿಗೆ ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
1,696 ಕ್ವಿಂಟಾಲ್ ಎಂ.ಓ-4 ಬಿತ್ತನೆ ಬೀಜವನ್ನು ರೈತ ಸಂರ್ಪಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಲಾಗಿದೆ. ಬಿತ್ತನೆ ಬೀಜವನ್ನು ಸಾಮಾನ್ಯ ವರ್ಗದ ರೈತರಿಗೆ ಪ್ರತಿ ಕೆ.ಜಿಗೆ 8ರೂ. ಹಾಗೂ ಪರಿಶಿಷ್ಟ ಜಾತಿ ಮತುತಿ ಪರಿಶಿಷ್ಟ ಪಂಗಡದ ರೈತರಿಗೆ ಪ್ರತಿ ಕೆ.ಜಿಗೆ ರೂ. 12ರ ಸಹಾಯಧನದಲ್ಲಿ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಬೀಜ ನಿಗಮದಲ್ಲಿ 5750 ಕ್ವಿಂಟಾಲ್‌ನಷ್ಟು ಎಂ.ಓ-4 ಬಿತ್ತನೆ ಬೀಜ ದಾಸ್ತಾ ನಿದ್ದು, ಯಾವುದೇ ರೀತಿಯ ಕೊರತೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರು ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರತಿ ಎಕರೆಗೆ 25 ಕೆ.ಜಿಯಂತೆ ಗರಿಷ್ಟ 5 ಎಕರೆಗೆ ಅಥವಾ ವಾಸ್ತವಿಕ ಹಿಡುವಳಿಗೆ ಅನುಗುಣವಾಗಿ ಸಹಾಯಧನದಲ್ಲಿ ಬಿತ್ತನೆ ಬೀಜವನ್ನು ಪಡೆದು ಕೊಳ್ಳಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.







