ಜೂ. 11: ಮಿನಿ ಉದ್ಯೋಗ ಮೇಳ

ಉಡುಪಿ, ಜೂ.9: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11ರಂದು ಬೆಳಗ್ಗೆ 10:30ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story