Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೃಷಿ ಭೂಮಿ 11-ಇ ನಕ್ಷೆ ವಿಂಗಡನೆ, ಮಳೆ...

ಕೃಷಿ ಭೂಮಿ 11-ಇ ನಕ್ಷೆ ವಿಂಗಡನೆ, ಮಳೆ ಪರಿಹಾರಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ವಾರ್ತಾಭಾರತಿವಾರ್ತಾಭಾರತಿ31 July 2025 10:15 PM IST
share
ಕೃಷಿ ಭೂಮಿ 11-ಇ ನಕ್ಷೆ ವಿಂಗಡನೆ, ಮಳೆ ಪರಿಹಾರಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ, ಜು.31: ಕೃಷಿ ಭೂಮಿಯನ್ನು 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ, ಮಳೆಹಾನಿ ಪರಿಹಾರ ಹಾಗೂ ವಸತಿ ಯೋಜನೆಯಡಿ ಮಂಜೂರಾದ ಬಾಕಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಬುಧವಾರ ಜಿಲ್ಲೆಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆ ಭೌಗೋಳಿಕವಾಗಿ ಇತರ ಜಿಲ್ಲೆಗಳಿಗಿಂತ ವಿಭಿನ್ನವಾಗಿದ್ದು, ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿದಾರರಿಂದ ಕೂಡಿದ ಭೂ ಪ್ರದೇಶವಾಗಿದೆ. ಹಿಂದಿನಿಂದಲೂ ಕಂದಾಯ ನಿಯಮಗಳನ್ನು ರೂಪಿ ಸುವಾಗ ಉಡುಪಿ ಜಿಲ್ಲೆಯೂ ಸೇರಿದಂತೆ ಅವಿಭಜಿತ ದ.ಕ ಜಿಲ್ಲೆಗೆ ರಿಯಾಯಿತಿ ನೀಡಿಕೊಂಡು ಬರಲಾ ಗುತ್ತಿದೆ ಎಂದವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಸರಕಾರದ ಆದೇಶದಂತೆ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆ ಪೂರ್ವದಲ್ಲಿ ಕೃಷಿ ಭೂಮಿ ಯನ್ನು ವಿಂಗಡಿಸಲು ಕನಿಷ್ಠ 50 ಸೆನ್ಸ್ ಮಿತಿ ನಿಗದಿ ಪಡಿಸಲಾಗಿತ್ತು. ಜಿಲ್ಲೆಯಲ್ಲಿ 50 ಸೆನ್ಸ್‌ಗಿಂತ ಕಡಿಮೆ ಜಾಗ ಹೊಂದಿರುವ ಸಾವಿರಾರು ರೈತರಿದ್ದು, ಹಲವು ಕಾರಣಗಳಿಗಾಗಿ 11-ಇ ನಕ್ಷೆ ಆಧಾರದಲ್ಲಿ ಜಾಗ ವಿಂಗಡನೆಯು ಅನಿವಾರ್ಯವಾಗಿರುತ್ತದೆ ಎಂದವರು ಮನವಿಯಲ್ಲಿ ವಿವರಿಸಿದ್ದಾರೆ.

ನಗರ ವ್ಯಾಪ್ತಿಯೂ ಸೇರಿದಂತೆ ಗ್ರಾಮೀಣ ಭಾಗದ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂರಾರು ಕುಟುಂಬಗಳು ನಿವೇಶನಕ್ಕಾಗಿ ಗ್ರಾಮ ಪಂಚಾಯತ್‌ಗೆ ಅರ್ಜಿ ಸಲ್ಲಿಸಿದ್ದು, ಸರಕಾರಿ ಜಾಗದ ಲಭ್ಯತೆ ಯಿಲ್ಲದೆ ಹಲವಾರು ವರ್ಷಗಳಿಂದ ಸ್ವಂತ ನಿವೇಶನದ ನಿರೀಕ್ಷೆಯಲ್ಲಿದ್ದಾರೆ. ಈಗಿನ ಆದೇಶದಿಂದ ಕಡಿಮೆ ದರದಲ್ಲಿ ಸಣ್ಣ ಜಾಗ ಖರೀದಿಸಿ ಮನೆ ನಿರ್ಮಿಸುವ ಉದ್ದೇಶ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಆದ್ದರಿಂದ ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸಿ ಆದೇಶಿಸಲಾಗಿರುವ ಸದ್ರಿ ನಿಯಮವನ್ನು ಹಿಂಪಡೆದು ಹಿಂದಿ ನಂತೆ 50 ಸೆನ್ಸ್ ಮಿತಿಗೆ ಬದಲಾಗಿ 7.5 ಸೆಂಟ್ಸ್ ಮಿತಿಗೆ ಮರು ಆದೇಶ ಹೊರಡಿಸುವಂತೆ ಶಾಸಕರು ಸಚಿವರಿಗೆ ಮನವಿ ಮಾಡಿದ್ದಾರೆ.

ಅನುದಾನ ಮಂಜೂರಿಗೆ ಮನವಿ: ಉಡುಪಿ ತಾಲೂಕಿನಲ್ಲಿ ನೆರೆ ಸಂತ್ರಸ್ತರ ಪುರ್ನವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ರಾಜೀವ ಗಾಂಧಿ ವಸತಿ ನಿಗಮದಿಂದ ಅನುದಾನ ಮಂಜೂರಾಗಿ ವರ್ಷಗಳೇ ಕಳೆದರು, ಈವರೆಗೆ ಮಂಜೂರಾದ ಸಂಪೂರ್ಣ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದ ಮನೆ ನಿರ್ಮಾಣ ಪೂರ್ಣಗೊಳಿಸಲಾಗದೆ ಅನಾನುಕೂಲವಾಗಿದೆ. ಆದ್ದರಿಂದ ತಾಲೂಕಿನ ನೆರೆ ಸಂತ್ರಸ್ಥರ ಪುರ್ನ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ರಾಜೀವ ಗಾಂಧಿ ವಸತಿ ನಿಗಮದಿಂದ ಮಂಜೂರಾಗಿರುವ ಅನುದಾನವನ್ನು ತುರ್ತಾಗಿ ಬಿಡುಗಡೆಗೊಳಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಳೆಗಾಲದಲ್ಲಿ ಸಮುದ್ರ ತೀರದಲ್ಲಿ ಕಡಲು ಕೊರೆತದ ಸಮಸ್ಯೆ ಹಲವೆಡೆ ಕಾಣಿಸಿಕೊಂಡಿದೆ. ಸುಂಟರ ಗಾಳಿ ಮತ್ತು ವಿಪರೀತ ಮಳೆಯಿಂದ ನೂರಾರು ಮರಗಳು ಬಿದ್ದು, ವಿದ್ಯುತ್ ಕಂಬಗಳಿಗೆ, ಮನೆಗಳಿಗೆ ಹಾನಿಯಾಗಿದೆ. ರಸ್ತೆ, ಮೋರಿ, ಶಾಲಾ ಕಟ್ಟಡಗಳು, ಕಾಲುಸಂಕಗಳು ಹಾಗೂ ಸೇತುವೆಗಳು ಅಪಾಯ ದಲ್ಲಿವೆ. ಪ್ರಾಕೃತಿಕ ವಿಕೋಪದಡಿ ಅನುದಾನ ಬಿಡುಗಡೆಯಾಗದೆ, ಗ್ರಾಮೀಣ ರಸ್ತೆಗಳ ನಿರ್ವಹಣೆಯಿಲ್ಲದೆ ಸಂಚಾರ ದುಸ್ತರವಾಗಿದೆ. ಹೀಗಾಗಿ ಸಂತ್ರಸ್ತರಿಗೆ ಪರಿಹಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ರಕ್ಷಣೆಗೆ, ದುರಸ್ತಿಗೆ ಸಾಕಷ್ಟು ಅನುದಾನದ ಅಗತ್ಯವಿದ್ದು, ಈ ಬಗ್ಗೆ ವಿಶೇಷ ಅನುದಾನವನ್ನು ಪ್ರಾಕೃತಿಕ ವಿಕೋಪ ದಡಿ ಉಡುಪಿ ಜಿಲ್ಲೆಗೆ ಸರಕಾರದಿಂದ ಮಂಜೂರು ಮಾಡುವಂತೆ ಕಂದಾಯ ಸಚಿವರಿಗೆ ಶಾಸಕ ಯಶಪಾಲ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X