Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಮಾ.11ರಿಂದ ವೈದ್ಯರು ಸೇರಿದಂತೆ...

ಉಡುಪಿ| ಮಾ.11ರಿಂದ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳಿಂದ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ10 March 2026 10:09 PM IST
share
ಉಡುಪಿ| ಮಾ.11ರಿಂದ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳಿಂದ ಮುಷ್ಕರ
ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ

ಉಡುಪಿ, ಮಾ‌.10: ಅರೋಗ್ಯ ಇಲಾಖೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಜಿಲ್ಲಾ ಅರೋಗ್ಯ ಅಧಿಕಾರಿಗಳು ಹಾಗು ಖಾಸಗಿ ಆಸ್ಪತ್ರೆಯ ವೈದ್ಯರು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಅರೋಗ್ಯ ಇಲಾಖೆಯ ನೌಕರರ ಮುಷ್ಕರದಿಂದ ಜನ ಸಾಮಾನ್ಯರಿಗೆ ಸರಕಾರಿ ಆಸ್ಪತ್ರೆಯಲ್ಲಿ ಅರೋಗ್ಯ ಸೇವೆ ಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಸಾರ್ವಜನಿಕರಿಗೆ ಅರೋಗ್ಯ ಸೇವೆಯನ್ನು ಪಡೆಯಲು ತೊಂದರೆ ಯಾಗದಂತೆ ಹಾಗೂ ತುರ್ತು ಸೇವೆಗಳನ್ನು ಪಡೆಯಲು ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.

ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳಿಗೆ ಬಡ ಜನರು ಅರೋಗ್ಯ ಸೇವೆಗಳನ್ನು ಪಡೆಯಲು ಆಗಮಿಸುತ್ತಾರೆ. ಅವರುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದರೊಂದಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ಗೆ ಕೂಡಲೇ ಸ್ಪಂದಿಸಬೇಕು ಎಂದರು.

ಸಭೆಯಲ್ಲಿ ಡಿಎಚ್ ಓ ಡಾ. ಬಸವರಾಜ್ ಹುಬ್ಬಳ್ಳಿ, ಕೆ.ಎಂ.ಸಿ ಆಸ್ಪತ್ರೆಯ ಮುಖ್ಯಸ್ಥರು, ನರ್ಸಿಂಗ್ ಕಾಲೇಜುಗಳ ಮುಖ್ಯಸ್ಥರು, ಸರಕಾರಿ ಹಾಗು ಖಾಸಗಿ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X