Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಷನ್...

ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಷನ್ ಅಭಿಯಾನ| 1141 ಎಚ್‌ಐವಿ ಸೋಂಕಿತರ ಪತ್ತೆಗೆ ಕ್ರಮ: ಎಡಿಸಿ ಅಬೀದ್ ಗದ್ಯಾಳ್

ವಾರ್ತಾಭಾರತಿವಾರ್ತಾಭಾರತಿ29 July 2026 8:28 PM IST
share
ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಷನ್ ಅಭಿಯಾನ| 1141 ಎಚ್‌ಐವಿ ಸೋಂಕಿತರ ಪತ್ತೆಗೆ ಕ್ರಮ: ಎಡಿಸಿ ಅಬೀದ್ ಗದ್ಯಾಳ್

ಉಡುಪಿ, ಜು.29: ಉಡುಪಿ ಜಿಲ್ಲೆಯಲ್ಲಿ 5790 ಎಚ್‌ಐವಿ ಸೋಂಕಿತರು ಜೀವನ ನಡೆಸುತ್ತಿದ್ದಾರೆ ಎಂದು ಅಂದಾಜಿ ಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 4691 ಜನರು ಮಾತ್ರ ತಮ್ಮ ಎಚ್‌ಐವಿ ಸ್ಥಿತಿಯನ್ನು ತಿಳಿದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 1141 ಜನರಿಗೆ ಎಚ್‌ಐವಿ ಸೋಂಕು ಇದ್ದರೂ ಅವರು ತಮ್ಮ ಎಚ್‌ಐವಿ ಸ್ಥಿತಿಯನ್ನು ಇನ್ನೂ ತಿಳಿದುಕೊಂಡಿಲ್ಲ ಅವರನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಬೇಕಾಗಿರುತ್ತದೆ. ಇವರನ್ನು ಪತ್ತೆ ಹಚ್ಚಲು ಸರಕಾರ ನಾನಾ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮೊದಲನೇ ಮಹಡಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಫಸ್ಟ್ 95 ಸಮಿತಿ ಹಾಗೂ ಜಿಲ್ಲಾ ಜಂಟಿ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸರಕಾರ ಎಚ್‌ಐವಿ ಸೋಂಕಿನ ಬಗ್ಗೆ ಅರಿವು ಮೂಡಿಸುವುದು ಹಾಗೂ ಎಚ್‌ಐವಿ ಸೋಂಕಿನ ಬಗ್ಗೆ ತಿಳಿದಿಲ್ಲದ ಜನರನ್ನು ಗುರುತಿಸಿ, ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಷನ್ ಅಭಿಯಾನವನ್ನು ಆರಂಭಿಸಿದ್ದು, ಇದು ಸಮರ್ಪಕವಾಗಿ ಅನುಷ್ಠಾನಗೊಳಿಸ ಬೇಕು ಎಂದರು.

ಭಾರತದಲ್ಲಿ ಎಚ್‌ಐವಿ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮೊಬಿಲೈಸೇಷನ್ ಫಾರ್ ಏಡ್ಸ್ ಸುರಕ್ಷಾ(ಎಂಎಎಸ್) ಕಾರ್ಯಕ್ರಮವನ್ನು ಜಾರಿಗೆ ತರಲಾಗಿದ್ದು, 2027ರ ಡಿಸೆಂಬರ್ 1ರ ವಿಶ್ವ ಏಡ್ಸ್ ದಿನದೊಳಗೆ ಜಿಲ್ಲೆಯಲ್ಲಿ ಎಚ್‌ಐವಿ ಸಾಂಕ್ರಾಮಿಕವನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವುದು ಗುರಿ ಹೊಂದಲಾಗಿದೆ. ಈ ಕಾರ್ಯಕ್ರಮವು 95-95-99 ಗುರಿಗಳನ್ನು ಪರಿಣಾಮಕಾರಿಯಾಗಿ ಸಾಧಿಸುವತ್ತ ಕೇಂದ್ರಿ ಕರಿಸಿದ್ದು, ಅಭಿಯಾನವು 2026 ಡಿಸೆಂಬರ್‌ವರೆಗೆ ಚಾಲ್ತಿಯಲ್ಲಿ ಇರುತ್ತದೆ ಎಂದು ಅವರು ತಿಳಿಸಿದರು.

ಜನಸಾಮಾನ್ಯರಲ್ಲಿ ಈ ಕಾರ್ಯಕ್ರಮದ ಬಗ್ಗೆ ಹೆಚ್ಚು ಹೆಚ್ಚು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುವುದರ ಜೊತೆಗೆ ಅವರುಗಳೆ ಸ್ವಯಂ ಪ್ರೇರಿತರಾಗಿ ಎಚ್‌ಐವಿ ಪರೀಕ್ಷೆಗೆ ಸಂಬಂಧಿಸಿದ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಅಲ್ಲಿ ನೀಡುವ ಪ್ರಶ್ನೆಗಳಿಗೆ ಉತ್ತರಿಸಿ, ಸಂಶಯ ಬಂದಲ್ಲಿ ಎಚ್‌ಐವಿ ಪರೀಕ್ಷೆಗಳನ್ನು ಮಾಡಿಸಿಕೊಳ್ಳು ವಂತೆ ಉತ್ತೇಜನ ಮಾಡಬೇಕು ಎಂದು ಅವರು ಹೇಳಿದರು.

ಯುವ ಸಮುದಾಯವು ಹೆಚ್ಚಿರುವ ಶಾಲಾ-ಕಾಲೇಜುಗಳಲ್ಲಿ ಏಡ್ಸ್ ರೋಗದ ನಿಯಂತ್ರಣ, ಹರಡುವಿಕೆ, ಗುರುತಿಸುವಿಕೆ ಹಾಗೂ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದ ಅವರು, ಸಂಘ-ಸಂಸ್ಥೆಗಳು, ಯುವಕ ಸಂಘಗಳು ಹಾಗೂ ಎನ್‌ಜಿಓಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಏಡ್ಸ್ ರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ. ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X