Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಡಲು ಸೇರಿದ 115ಕ್ಕೂ ಅಧಿಕ ಕಡಲಾಮೆ...

ಕಡಲು ಸೇರಿದ 115ಕ್ಕೂ ಅಧಿಕ ಕಡಲಾಮೆ ಮರಿಗಳು

ಮರವಂತೆ, ತಾರಾಪತಿಯಲ್ಲಿ ಹ್ಯಾಚರಿ ನಿರ್ಮಾಣ: 40 ದಿನ ಮೊಟ್ಟೆಗಳ ಸಂರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ14 March 2025 6:14 PM IST
share
ಕಡಲು ಸೇರಿದ 115ಕ್ಕೂ ಅಧಿಕ ಕಡಲಾಮೆ ಮರಿಗಳು

ಬೈಂದೂರು, ಮಾ.14: ಕಳೆದ 40 ದಿನಗಳ ಹಿಂದೆ ಮರವಂತೆ ಸಮುದ್ರ ತೀರ ಹಾಗೂ ಬೈಂದೂರಿನ ತಾರಾಪತಿ ಕಡಲ ಕಿನಾರೆಯಲ್ಲಿ ಕಡಲಾಮೆಗಳ ಮೊಟ್ಟೆಗಳನ್ನು ಸಂರಕ್ಷಣೆ ಮಾಡಿದ್ದು ಅದರಲ್ಲಿ ಮರವಂತೆ ’ಹ್ಯಾಚರಿ’ಯಲ್ಲಿ ಗುರುವಾರ ರಾತ್ರಿ ಮೊಟ್ಟೆಗಳು ಒಡೆದು ಸುಮಾರು 115 ಮರಿಗಳು ಹೊರಬಂದು ಕಡಲು ಸೇರಿವೆ.

ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ ಹಾಗೂ ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಸಹಿತ ಈ ಬಗ್ಗೆ ಮುತುವರ್ಜಿ ವಹಿಸಲು ಆಸಕ್ತ ಸಂಘ- ಸಂಸ್ಥೆಗಳಿಗೆ ಮಾಹಿತಿ ನೀಡಿದ್ದರು. ಅದರಂತೆ ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸುವ ಮೂಲಕ ಸಂರಕ್ಷಿಸಲಾಗಿತ್ತು.

ಮರವಂತೆ ಹಾಗೂ ತಾರಾಪತಿಯಲ್ಲಿ ಪ್ರತ್ಯೇಕ 2 ಹ್ಯಾಚರಿ ನಿರ್ಮಿಸ ಲಾಗಿತ್ತು. ಗುರುವಾರ ರಾತ್ರಿ ಮರವಂತೆ ಹ್ಯಾಚರಿಗಳಿಂದ ಒಟ್ಟು 115 ಕಡಲಾಮೆ ಮರಿಗಳು ಹೊರಕ್ಕೆ ಬಂದಿದ್ದು ಹೊರಕ್ಕೆ ಬಂದ ಕಡಲಾಮೆ ಮರಿಗಳು ನೈಸರ್ಗಿಕವಾಗಿ ಕಡಲು ಸೇರಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮೀನುಗಾರರು ಒಗ್ಗೂಡಿ ಅನುವು ಮಾಡಿಕೊಟ್ಟರು. ತಾರಾಪತಿಯ ಹ್ಯಾಚರಿಯಿಂದ ಮುಂದಿನ ವಾರದಲ್ಲಿ ಮರಿಗಳು ಬರುವ ನಿರೀಕ್ಷೆಯಿದೆ.

ಸಮುದ್ರದಿಂದ ಹೊರಬಂದು ದಡದಲ್ಲಿ ಕಡಲಾಮೆಗಳು ಮೊಟ್ಟೆಯಿಟ್ಟ 48-60 ದಿನದಲ್ಲಿ ಮರಿಗಳು ಹೊರಬರುತ್ತವೆ. ಮೊಟ್ಟೆಗಳ ಸಂರಕ್ಷಣೆ, ವೀಕ್ಷಣೆ ಹಾಗೂ ಅಂತಿಮ ಫಲಿತಾಂಶದ ನಿಟ್ಟಿನಲ್ಲಿ 40ಕ್ಕೂ ಅಧಿಕ ದಿನಗಳಿಂದ ಮುತುವರ್ಜಿ ವಹಿಸಿದ್ದು ಮಾತ್ರವಲ್ಲದೇ ಮರಿಯೊಡೆಯುವ ರಾತ್ರಿ ತನಕವೂ ನಿಗಾವಹಿಸಿದ್ದ ಅರಣ್ಯ ಇಲಾಖೆ, ಸ್ಥಳೀಯರ ಕಾರ್ಯ ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿದೆ.

ಕುಂದಾಪುರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ ಮಾರ್ಗದರ್ಶನಲ್ಲಿ ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್ ಹಾಗೂ ಸಿಬ್ಬಂದಿಗಳು, ಸ್ಥಳೀಯ ಮೀನುಗಾರ ಕೊರಗು ಖಾರ್ವಿ ಹಾಗೂ ಇತರ ಮೀನುಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ಮೊಟ್ಟೆ ಇಡಲು ಬೀಚ್ ಸ್ವಚ್ಚತೆ ಅಗತ್ಯ

ಇದೇ ಮೊದಲ ಬಾರಿಗೆ ಬೈಂದೂರು ವಲಯದಲ್ಲಿ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿ ಹ್ಯಾಚರಿ ನಿರ್ಮಿಸಲಾಗಿದೆ.

ಸಾಮಾನ್ಯವಾಗಿ ಕಡಲಾಮೆಗಳು ಮೊಟ್ಟೆ ಇಡಲು ಸ್ವಚ್ಚ ತೀರವನ್ನು ಹಾಗೂ ಅಡೆತಡೆಯಿಲ್ಲದ ಪ್ರದೇಶವನ್ನು ಅರಸಿಬರುತ್ತದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದ ಕ್ಲೀನ್ ಕಿನಾರ ತಂಡದ ಸದಸ್ಯರಿಂದ ವರ್ಷಗಳಿಂದ ನಡೆಯುತ್ತಿರುವ ಬೀಚ್ ಸ್ವಚ್ಚತಾ ಕಾರ್ಯವೂ ಕೂಡ ಮರವಂತೆ, ತಾರಾಪತಿಯಲ್ಲಿ ಕಡಲಾಮೆ ಮೊಟ್ಟೆ ಇಡಲು ಪೂರಕ ಕಾರಣ ವಾಗಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X