ಸೆ. 12ರಂದು ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

ಉಡುಪಿ, ಸೆ.10: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳ ನೇತೃತ್ವದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ಸೆಪ್ಟಂಬರ್ 12ರಂದು ಬೆಳಗ್ಗೆ 10:30ಕ್ಕೆ ನಡೆಯಲಿವೆ.
ಕೋಟ ಹೋಬಳಿಗೆ ಸಂಬಂಧಿಸಿದಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ, ಬೈಂದೂರು ಹೋಬಳಿಗೆ ಸಂಬಂಧಿಸಿದಂತೆ ನಾಗೂರು ಕಿರಿಮಂಜೇಶ್ವರ ಗ್ರಾಮದ ಶ್ರೀಕೃಷ್ಣ ಲಲಿತಾಕಲಾ ಮಂದಿರ ಒಡೆಯರ ಮಠದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಅಜೆಕಾರು ಹೋಬಳಿಗೆ ಸಂಬಂಧಿಸಿದಂತೆ ಮರ್ಣೆ ಗ್ರಾಮದ ಜ್ಯೋತಿ ಪ್ರೌಢಶಾಲೆ (ಅನುದಾನಿತ)ಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ, ಮಜೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.






