Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 1274 ಮಂದಿಗೆ 1,75,89,500 ರೂ....

ಉಡುಪಿ: 1274 ಮಂದಿಗೆ 1,75,89,500 ರೂ. ವಿದ್ಯಾರ್ಥಿವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ27 Sept 2026 8:06 PM IST
share
ಉಡುಪಿ: 1274 ಮಂದಿಗೆ 1,75,89,500 ರೂ. ವಿದ್ಯಾರ್ಥಿವೇತನ ವಿತರಣೆ

ಉಡುಪಿ, ಸೆ.27: ಯಕ್ಷಗಾನ ಕಲಾರಂಗ ಉಡುಪಿ ಇದರ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಈ ಬಾರಿ 1274 ವಿದ್ಯಾರ್ಥಿಗಳಿಗೆ 1,75,89,500ರೂ. ವಿದ್ಯಾರ್ಥಿವೇತನ ವನ್ನು ರವಿವಾರ ಉಡುಪಿ ಶ್ರೀಕೃಷ್ಣಮಠದ ರಾಜಾಂಗಣ ದಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.

ಪರ್ಯಾಯ ಶೀರೂರು ಮಠಾಧೀಶ ಶ್ರೀವೇದವರ್ಧನತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶದಲ್ಲಿ ‘ವಿದ್ಯಾದಾನ ಕ್ಕಿಂತಲೂ ಮಿಗಿಲಾದ ದಾನಲ್ಲ’ ’ನೀರಿದ್ದರೆ ನದಿ’, ’ಜ್ಞಾನ ಇದ್ದರೆ ಮನುಷ್ಯ’, ’ಪರೋಪಕಾರಕ್ಕಿಂತ ಮಿಗಿಲಾದ ಪುಣ್ಯಲ್ಲ. ಯಕ್ಷಗಾನ ಕಲಾರಂಗವೂ ಮಧ್ವಾಚಾರ್ಯರು ಹೇಳಿದ ’ನಾನಾ ಜನರ ಸೇವೆಯೆ ಭಗವಂತನಿಗೆ ನಾವು ಕೊಡುವ ತೆರಿಗೆ’ ಎಂಬ ಮಾತನ್ನು ಅನುಷ್ಠಾನಕ್ಕೆ ತಂದ ಸಂಸ್ಥೆಯಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಗೀತಾನಂದ ಫೌಂಡೇಶನ್‌ನ ಅಧ್ಯಕ್ಷ ಆನಂದ ಸಿ. ಕುಂದರ್ ಮಾತನಾಡಿ, ಸಮಾಜಪರ ಕೆಲಸ ವನ್ನು ಪ್ರಾಮಾಣಿಕವಾಗಿ ಮಾಡಿದರೆ ಅದಕ್ಕೆ ಹಣದ ಕೊರತೆಯಾಗುವುದಿಲ್ಲ ಎಂಬುವುದಕ್ಕೆ ಯಕ್ಷಗಾನ ಕಲಾರಂಗ ಉತ್ತಮ ಉದಾಹರಣೆಯಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ 25 ವಿದ್ಯಾರ್ಥಿಗಳಿಗೆ ಚೆಕ್ ಮತ್ತು 15 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪನ್ನು ವಿತರಿಸಲಾಯಿತು. ಯಕ್ಷಗಾನ ಕಲಾರಂಗದ ವಾರ್ಷಿಕ ಸಂಚಿಕೆ’ ಕಲಾಂತರಂಗ- 2025-2026’ನ್ನು ಬಿಡುಗಡೆ ಗೊಳಿಸಲಾಯಿತು. ಕರ್ಣಾಟಕ ಬ್ಯಾಂಕಿನ ಜಿ.ಎಂ. ಬಿ.ಜಿ. ಸಾಮಗ ಶುಭಾಶಂಸನೆಯ ಮಾತುಗಳನ್ನಾಡಿದರು.

ಇನ್‌ಫೋಸಿಸ್ ಮಂಗಳೂರಿನ ’ಪ್ರೇರಣ’ದ ವಿಶ್ವಸ್ಥ ರವಿರಾಜ ಬೆಳ್ಮ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ, ಬೆಂಗಳೂರಿನ ಇಂಜಿನೀಯರ್ ಪಾರಂಪಳ್ಳಿ ನಟರಾಜ ಉಪಾಧ್ಯ, ಸಿಎ ಗಣೇಶ್ ಕಾಂಚನ್, ಪಣಂಬೂರು ವಾಸುದೇವ ಐತಾಳ್, ಉದ್ಯಮಿ ಉದಯ ಹೆಗ್ಡೆೆ ಮಾತನಾಡಿದರು. ಈ ಸಂದರ್ಭದಲ್ಲಿ 10 ವಿದ್ಯಾರ್ಥಿಗಳಿಗೆ 5ಲಕ್ಷ ರೂ. ವೆಚ್ಚದಲ್ಲಿ ವ್ಯಾಪ್‌ಟಾಪ್ ವಿತರಿಸಲಾಯಿತು.

ವೇದಿಕೆಯಲ್ಲಿ ಉದ್ಯಮಿ ಪಿ.ಪುರುಷೋತ್ತಮ ಶೆಟ್ಟಿ, ತೆಕ್ಕಟ್ಟೆ ಸಿದ್ಧಿ ವಿನಾಯಕ ಕ್ಯಾಶ್ಯೂ ಇಂಡಸ್ಟ್ರೀಸ್‌ನ ಅರುಣ್‌ ಕುಮರ್ ಶೆಟ್ಟಿ, ಭವಾನಿ ಎಂಟರ್‌ಪ್ರೈಸಸ್‌ನ ಮಾಲಕ ಪುರುಷೋತ್ತಮ ಪಟೇಲ್, ದಾನಿ ಯು.ವಿಶ್ವನಾಥ ಶೆಣೈ, ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಉಪಸ್ಥಿತರಿದ್ದರು.

ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ಹಿರಿಯ ಕಾರ್ಯಕರ್ತ ಯು.ಎಸ್.ರಾಜಗೋಪಾಲ ಆಚಾರ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ಹಿರಿಯ ಸದಸ್ಯರುಗಳಾದ ಭುವನಪ್ರಸಾದ ಹೆಗ್ಡೆ, ಜಯ ಕುಮಾರ್ ಮುದ್ರಾಡಿ ಸಹಕರಿಸಿದರು. ನಾರಾಯಣ ಎಂ.ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತು ಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X