Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ 129 ಪ್ರಕರಣಗಳು...

ಉಡುಪಿ ಜಿಲ್ಲೆಯ 129 ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ: ಉಪಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ

ವಾರ್ತಾಭಾರತಿವಾರ್ತಾಭಾರತಿ3 Feb 2024 6:54 PM IST
share
ಉಡುಪಿ ಜಿಲ್ಲೆಯ 129 ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ: ಉಪಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ

ಉಡುಪಿ: ಉಡುಪಿ ಜಿಲ್ಲೆಯ 129 ಪ್ರಕರಣಗಳು ಕರ್ನಾಟಕ ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ ಉಳಿದಿವೆ. ಇವುಗಳಲ್ಲಿ 41 ಪ್ರಕರಣಗಳ ವಿಚಾರಣೆಯನ್ನು ತಾನು ಸೋಮವಾರ ಇಲ್ಲಿ ನಡೆಸುತ್ತೇನೆ. ಇದಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯ ವರಿಗೆ 15 ದಿನಗಳ ನೋಟೀಸನ್ನು ಈಗಾಗಲೇ ನೀಡಲಾಗಿದೆ ಎಂದು ಕರ್ನಾಟಕದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಶನಿವಾರ ಆಯೋಜಿಸ ಲಾದ ಲೋಕಾಯುಕ್ತ ದಿಂದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಉಪಲೋಕಾಯುಕ್ತರು ಮಾತನಾಡುತಿದ್ದರು.

ರಾಜ್ಯದ 11 ಜಿಲ್ಲೆಗಳಲ್ಲಿ ಈಗಾಗಲೇ ಇಂಥ ಜಿಲ್ಲಾ ಮಟ್ಟದ ಅಹವಾಲು ಸ್ವೀಕಾರ, ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಗಳನ್ನು ನಡೆಸಲಾಗಿದೆ. ಇದೀಗ 12ನೇ ಜಿಲ್ಲೆಯಾಗಿ ಉಡುಪಿಯಲ್ಲಿ ಮುಂದಿನ ಮೂರು ದಿನಗಳ ಕಾಲ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದರು.

ಸಾರ್ವಜನಿಕ ಆಡಳಿತದಲ್ಲಿ ಗುಣಮಟ್ಟವನ್ನು ಸುಧಾರಿಸುವುದು, ಸಾರ್ವಜನಿಕ, ಸರಕರಿ ನೌಕರರ ದುರ್ನಡತೆಯಿಂದ ಸಂಭವಿಸುವ ಕುಂದು ಕೊರತೆಗಳ ನಿವಾರಣೆ, ತಪ್ಪಿತಸ್ಥರ ವಿರುದ್ಧ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984, ಭ್ರಷ್ಟಾಚಾರ ತಡೆ ಕಾಯ್ದೆ 1988, ಕರ್ನಾಟಕ ನಾಗರಿಕ ಸೇವಾ ನಿಯಮಗಳು ಸೇರಿದಂತೆ ವಿವಿಧ ನಿಯಮಗಳಡಿ ಶಿಸ್ತುಕ್ರಮಕ್ಕೆ ಸರಕಾರಕ್ಕೆ, ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡುವುದು ಲೋಕಾಯುಕ್ತ ಸಂಸ್ಥೆಯ ದೇಯ್ಯೋದ್ದೇಶವಾಗಿದೆ ಎಂದು ನ್ಯಾ.ಫಣೀಂದ್ರ ವಿವರಿಸಿದರು.

ಯಾವುದೇ ವ್ಯಕ್ತಿ ರಾಜ್ಯದ ಆಡಳಿತ ನಿರ್ವಹಣೆಯಲ್ಲಿ ನಡೆದಿದೆ ಎಂದು ಹೇಳುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ದುರ್ನ ಡತೆ, ಅಶಿಸ್ತು ಹಾಗೂ ಕರ್ತವ್ಯ ಲೋಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಸಾರ್ವಜನಿಕ/ಸರಕಾರಿ ನೌಕರರ ವಿರುದ್ಧ ಮಾತ್ರ ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಸಂವಿಧಾನ ನಮಗೆ ನೀಡಿರುವ ಗೌರವಯುತ ಜೀವನದ ಹಕ್ಕನ್ನು ಪ್ರತಿ ಯೊಬ್ಬ ನಾಗರಿಕನಿಗೆ ಖಚಿತ ಪಡಿಸುವುದು, ಎಲ್ಲರಿಗೂ ಸಮಪಾಲು, ಎಲ್ಲರಿಗೂ ಸಮಬಾಳು ದೊರೆಯುವಂತೆ ಮಾಡುವುದು. ಇದಕ್ಕೆ ಬೇಕಾದ ಅವಕಾಶ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ನ್ಯಾ.ಫಣೀಂದ್ರ ಹೇಳಿದರು.

ಲೋಕಾಯುಕ್ತದಲ್ಲಿ ಕೆಲಸ ಮಾಡಿದ ಅನುಭವದಲ್ಲಿ ತಾನು ಕಂಡುಕೊಂಡಂತೆ ತೀರಾ ಬಡತನದ, ಯಾವುದೇ ಪ್ರಭಾವವಿ ಲ್ಲದ ವ್ಯಕ್ತಿಗಳು, ಭ್ರಷ್ಟಾಚಾರ, ಲಂಚವನ್ನು ಸಹಿಸದ ಸಿದ್ಧಾಂತದೊಂದಿಗೆ ಬದುಕುತ್ತಿರುವವರು ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸರಕಾರಿ ಉದ್ಯೋಗಿಗೆ ಕಿರುಕುಳ ನೀಡುವ ಉದ್ದೇಶ ಹೊಂದಿರುವ ವ್ಯಕ್ತಿಗಳು ಮಾತ್ರ ಲೋಕಾಯುಕ್ತ ಸಂಸ್ಥೆಗೆ ಬಂದು ದೂರು ನೀಡುತ್ತಾರೆ ಎಂದು ಅವರು ನುಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು, ಕರ್ನಾಟಕ ಲೋಕಾಯುಕ್ತಕ್ಕೆ ಇಡೀ ದೇಶದಲ್ಲೇ ಉತ್ತಮ ಹೆಸರಿದೆ. ಕರ್ನಾಟಕ ಲೋಕಾಯುಕ್ತ ತನ್ನ ಕಾರ್ಯವೈಖರಿ ಮೂಲಕ ದೇಶದಲ್ಲೇ ಸಂಚಲನ ಮೂಡಿಸಿದ ಸಂಸ್ಥೆಯಾಗಿದೆ ಎಂದರು.

ಇಂಥ ಲೋಕಾಯುಕ್ತ ಇದೀಗ ಉಡುಪಿ ಜಿಲ್ಲೆಗೆ ಬಂದು ಜನರ ಅಹವಾಲು ಆಲಿಸಲಿದೆ. ಸಾರ್ವಜನಿಕರ ನೈತಿಕತೆ, ವ್ಯವಸ್ಥೆಯನ್ನು ಬದಲಾಯಿಸಿ ಸರಿದಾರಿಗೆ ಕೊಂಡೊಯ್ಯುವ ಜವಾಬ್ದಾರಿ ಲೋಕಾಯುಕ್ತಕ್ಕಿದೆ. ಇದಕ್ಕೆ ಎಲ್ಲರೂ ಬೆಂಬಲ ನೀಡಬೇಕಾಗಿದೆ. ಯಾವುದೇ ಇಲಾಖೆಯ ವಿರುದ್ಧ ದೂರು ಬಂದಾಗ ಅಧಿಕಾರಿಗಳು ಧನಾತ್ಮಕವಾಗಿ ತೆಗೆದುಕೊಂಡು ಅದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

ಸಭೆಯಲ್ಲಿ ಉಡುಪಿ ಜಿಪಂನ ನೂತನ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಲೋಕಾಯುಕ್ತದ ಉಪನಿಬಂಧಕ (ವಿಚಾರಣೆ1) ಎಂ.ವಿ. ಚೆನ್ನಕೇಶವ ರೆಡ್ಡಿ, ಉಪ ನಿಬಂಧಕ (ವಿಚಾರಣೆ1) ರಂಗೇಗೌಡ, ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ.ಪಾಟೀಲ್, ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ.ಸೈಮನ್, ಕುಂದಾಪುರ ಡಿಸಿಎಫ್ ಗಣಪತಿ, ಕಾರ್ಕಳ ವನ್ಯಜೀವಿ ವಿಭಾಗದ ಡಿಸಿಎಫ್ ಶಿವರಾಮ ಬಾಬು ಉಪಸ್ಥಿತರಿದ್ದರು.

ಉಡುಪಿಯ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಸ್ವಾಗತಿಸಿದರೆ, ಡಾ.ರೋಶನ್‌ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X