ಉಡುಪಿ, ಸೆ.11: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಸೆ.13ರ ಶನಿವಾರ ಎಲ್ಲಾ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.
ಹೀಗಾಗಿ ಸೆ.13ರ ಶನಿವಾರ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಉಡುಪಿ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.