ಶಿರ್ವದಲ್ಲಿ ರಕ್ತದಾನ ಶಿಬಿರ: 135 ಯುನಿಟ್ ರಕ್ತ ಸಂಗ್ರಹ

ಶಿರ್ವ, ಅ.5: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದೊಂದಿಗೆ ಮಣಿಪಾಲ ಕೆಎಂಸಿ ರಕ್ತನಿಧಿ ಸಹಕಾರದಲ್ಲಿ ರಕ್ತದಾನ ಶಿಬಿರವನ್ನು ಶಿರ್ವ ಮೋನಿಸ್ ಕಾಂಪ್ಲೆಕ್ಷ್‌ನಲ್ಲಿ ಏರ್ಪಡಿಸಲಾಗಿತ್ತು.
ಶಿಬಿರವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಿರ್ವ ಸಹಕಾರಿ ವ್ಯವಸಾ ಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಶಿರ್ವ ಗ್ರಾಪಂ ಅಧ್ಯಕ್ಷೆ ಸವಿತಾ ರಾಜೇಶ್, ಉಡುಪಿ ಸಹಕಾರಿ ಭಾರತಿ ಅಧ್ಯಕ್ಷ ದಿನೇಶ್ ಹೆಗ್ಡೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್‌ನ ಸತೀಶ್ ಸಾಲಿಯಾನ್, ಪರಿಸರದ ವಿವಿಧ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರುಗಳಾದ ಸಚ್ಚಿದಾನಂದ ಹೆಗ್ಡೆ ಸೊರ್ಕಳ, ವಿಶ್ವನಾಥ ಪೂಜಾರಿ, ಪದ್ಮಾವತಿ ಪೂಜಾರಿ, ಪ್ರಕಾಶ್ ಶೆಟ್ಟಿ, ಸಂತೋಷ್ ಶೆಟ್ಟಿ ಕೋಡು, ದಯಾನಂದ ಪಾಟ್ಕರ್, ಶಿಬಿರದ ಸಂಘಟಕ ದೇವದಾಸ್ ಪಾಟ್ಕರ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ವೀರೇಂದ್ರ ಪಾಟ್ಕರ್ ಮೊದಲಾದವರು ಉಪಸ್ಥಿತರಿದ್ದರು.
ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ದರು. ಶಿರ್ವ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಪ್ರಸನ್ನಕುಮಾರ್ ವಂದಿಸಿದರು. ಶಿಬಿರದಲ್ಲಿ 135 ಯುನಿಟ್ ರಕ್ತ ಸಂಗ್ರಹಿಸಲಾಯಿತು.







