Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರ ಸಹಕಾರಿ ಸಕ್ಕರೆ...

ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ.ಹಗರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಫೆ. 22ರಿಂದ ವಿವಿಧ ರೈತ ಸಂಘಟನೆಗಳಿಂದ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ12 Feb 2025 10:44 PM IST
share
ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ.ಹಗರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಬ್ರಹ್ಮಾವರ, ಫೆ.12: ರಾಜ್ಯ ಕರಾವಳಿಯಲ್ಲಿರುವ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿರುವ ಬ್ರಹ್ಮಾವರದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಗುಜರಿ ಮಾರಾಟ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ 14 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ರೈತ ಪರ ಸಂಘಟನೆಗಳು, ಸಹಕಾರಿ ಧುರೀಣರು ಹಾಗೂ ಎಲ್ಲಾ ಕ್ಷೇತ್ರಗಳವರು ಸೇರಿ ಫೆ. 22ರಿಂದ ಕಾರ್ಖಾನೆಯ ಮುಂದೆ ಅನಿರ್ಧಿಷ್ಟಾವಧಿ, ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಹಗರಣದ ವಿರುದ್ಧ ಕಳೆದ ಎರಡು ವರ್ಷಗಳಿಗೂ ಅಧಿಕ ಸಮಯದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕುಂದಾಪುರದ ಮಾಜಿ ಶಾಸಕ, ವಿಧಾನಪರಿಷತ್ ನ ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅಧ್ಯಕ್ಷತೆಯ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಇಂದು ಬ್ರಹ್ಮಾವರ ವ್ಯವ ಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಕರೆಯಲಾದ ಸಭೆಯ ಕೊನೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಹುಕೋಟಿ ಹಗರಣದ ಕುರಿತು ರೈತ ಜಾಗೃತಿಗಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಕ್ಕರೆ ಕಾರ್ಖಾನೆಯ ಸದಸ್ಯರು, ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು, ಸಹಕಾರಿ ಕ್ಷೇತ್ರದ ಪ್ರಮು ಖರು, ಪಂಚಾಯತ್‌ರಾಜ್ ಒಕ್ಕೂಟದ ಪ್ರತಿನಿಧಿಗಳು ಮಾತ್ರವಲ್ಲದೇ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿ ದಂತೆ 200ಕ್ಕೂ ಅಧಿಕ ಮಂದಿ ಭಾಗವಹಿಸಿ, ಭ್ರಷ್ಟಾಚಾರದ ವಿರುದ್ಧ ಸಂಘಟಿತ, ಗೆಲುವಿನ ತನಕ ಹೋರಾಟದ ನಿರ್ಣಯಕೈಗೊಂಡರು.

ರೈತರು, ಸಹಕಾರಿ ಕ್ಷೇತ್ರದ ಆಶಾಕಿರಣವಾಗಿದ್ದ ಈ ಕಾರ್ಖಾನೆಯಲ್ಲಿ ನಡೆದ ಭಾರೀ ಹಗರಣದ ತನಿಖೆಗೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕಳೆದ ಎರಡು ವರ್ಷಗಳಿಂದ ರೈತ ಸಂಘ ವಿವಿಧ ಬಗೆಯ ಹೋರಾಟ ನಡೆಸಿದೆ. ಆದರೆ ಈವರೆಗೆ ಯಾವುದೇ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ನಿರ್ಣಾಯಕ, ಕಠಿಣ ನಿರ್ಧಾರ ತೆಗೆದು ಕೊಳ್ಳುವ ಸಮಯ ಈಗ ಬಂದಿದೆ ಎಂದು ಪ್ರತಾಪ್‌ಚಂದ್ರ ಶೆಟ್ಟಿ ನುಡಿದರು.

ಫೆ.22ರಂದು ಬೈಕಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ-66ರ ಪಕ್ಕದಲ್ಲೇ ಇರುವ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ಧರಣಿಯನ್ನು ಪ್ರಾರಂಭಿಸಲಾ ಗುವುದು. ಈ ಧರಣಿ ದಿನದ 24 ಗಂಟೆಗಳ ಕಾಲ ಸರದಿ ಪ್ರಕಾರ ಅನಿರ್ಧಿಷ್ಟಾವಧಿಯ ವರೆಗೆ, ರೈತರಿಗೆ ನ್ಯಾಯಸಿಗುವವರೆಗೂ ಮುಂದುವರಿಯಲಿದೆ. ಪಕ್ಷಾತೀತವಾಗಿ ಭ್ರಷ್ಟತೆಯ ವಿರುದ್ಧ ನಡೆಯುವ ಈ ಹೋರಾಟದಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳು ಪಾಲ್ಗೊಳ್ಳುವ, ಬೆಂಬಲ ನೀಡುವ ಭರವಸೆ ನೀಡಿವೆ ಎಂದರು.

ಸರಕಾರಕ್ಕೆ ಎಲ್ಲಾ ವೇದಿಕೆಗಳ ಮೂಲಕ ಮಾಹಿತಿಯನ್ನು ನೀಡಿದ್ದೇವೆ. ಸರಕಾರ ಫೆ.22ರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ, ಧರಣಿಯನ್ನು ನಡೆಸುವ ಉದ್ದೇಶವನ್ನು ಹೊಂದಿಲ್ಲ. ಆದರೆ ಕಳೆದ ಎರಡೂವರೆ ವರ್ಷಗಳ ಹೋರಾಟದ ಬಳಿಕವೂ ಈ ಪರಿಸ್ಥಿತಿ ಬಂದಾಗ ನಾವು ಇಂಥ ನಿರ್ಣಯ ಕೈಗೊಳ್ಳಲೇಬೇಕಾಗಿದೆ. ಮಾಧ್ಯಮಗಳು ಮಾಡಬೇಕಾದ ಕೆಲಸವನ್ನು ನಾವು ರೈತ ಸಂಘದ ಮೂಲಕ ಮಾಡುತಿದ್ದೇವೆ ಎಂದು ಪ್ರತಾಪ್ ಚಂದ್ರ ಶೆಟ್ಟಿ ನುಡಿದರು.

ಈ ಹಗರಣದಲ್ಲಿ ಅಧಿಕಾರಿಗಳೂ ಸಂಪೂರ್ಣವಾಗಿ ಶಾಮೀಲಾಗಿದ್ದಾರೆ. ಹೀಗಾಗಿ ಅವರೇ ಯಾವುದೇ ತನಿಖೆಗೆ ಅಡ್ಡಗಾಲು ಹಾಕುತಿದ್ದಾರೆ ಎಂದು ಆರೋಪಿಸಿದ ಪ್ರತಾಪ್‌ಚಂದ್ರ ಶೆಟ್ಟಿ, ಹಿಂದಿನ ಸರಕಾರದ (ಬಿಜೆಪಿ) ಅವಧಿಯಲ್ಲಿ ಈ ಹಗರಣ ನಡೆದಿದ್ದರೂ ಈಗಿನ ಸರಕಾರವೂ ಅದರ ತನಿಖೆ ನಡೆಸಲು ಮುಂದಾಗಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಜಿಲ್ಲಾ ರೈತ ಸಂಘ ಹಾಕಿದ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಉಡುಪಿ ನ್ಯಾಯಾಲಯ ತನಿಖೆಗೆ ನೀಡಿದ ಆದೇಶದಂತೆ ಪೊಲೀಸರು ದೂರು ದಾಖಿಲಿಸಿಕೊಂಡು ತನಿಖೆ ನಡೆಸಿದ್ದು ವರದಿ ಸಲ್ಲಿಸಿ ವರ್ಷ ಕಳೆದರೂ ಯಾವುದೇ ಪ್ರಗತಿಯಾಗಿಲ್ಲ. ವರದಿ ಸರಕಾರಕ್ಕೆ ಹೋಗಿ ಆರು ತಿಂಗಳಾದರೂ ಇನ್ನೂ ಬಾರದಿರುವುದರಿಂದ ನಾವು ಈಗ ಅನಿವಾರ್ಯವಾಗಿ ಹಗರಣದ ಬಗ್ಗೆ ಜಿಲ್ಲಾಧಿಕಾರಿ ತನಿಖೆ ಮಾಡಿದ್ದಾರೆ, ಪೊಲೀಸರು ತನಿಖೆ ಮಾಡಿದ್ದಾರೆ, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಹೊಳ್ಳ ತನಿಖೆ ಮಾಡುತಿದ್ದಾರೆ. ಇಷ್ಟೆಲ್ಲಾ ಆಗಿ, ಯಾರೂ ನಿರಾಕರಿಸಲಾಗದ ಭ್ರಷ್ಟಾಚಾರದ ಸಂಪೂರ್ಣ ಸಾಕ್ಷಾಧಾರಗಳು ಇದ್ದೂ, ಎರಡೂವರೆ ವರ್ಷಗಳಾದರೂ ಚಾರ್ಜ್‌ಶೀಟ್ ಆಗದಿರುವುದರಿಂದ ನಾವು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.

ಕಾರ್ಖಾನೆಯ ಮಾಜಿ ನಿರ್ದೇಶಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬಿ.ಭುಜಂಗ ಶೆಟ್ಟಿ, ಭಾಕಿಸಂನ ಸೀತಾರಾಮ ಗಾಣಿಗ ಅವರು ಮಾತನಾಡಿ, ರೈತರ ಸಂಘದ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿರುವುದಾಗಿ ಸಾರಿದರು. ಮಾಜಿ ತಾಪಂ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ವಿಠಲ ಶೆಟ್ಟಿ, ಕೃಷ್ಣದೇವ ಕಾರಂತ, ಕೃಷ್ಣರಾಜ ಶೆಟ್ಟಿ, ಬೆಳ್ವೆ ಸತೀಶ್ ಶೆಣೈ, ಪ್ರದೀಪ್ ಬಲ್ಲಾಳ್, ಪ್ರಕಾಶ್ ಶೆಟ್ಟಿ ಕಾಡೂರು, ಉದಯಕುಮಾರ್ ಶೆಟ್ಟಿ ಮುಂತಾದವರು ಮಾತನಾಡಿದರು.

‘ಪುನಶ್ಚೇತನದ ಉದ್ದೇಶವೂ ಇದೆ’

ಫೆ.22ರಂದು ನಡೆಯುವ ಧರಣಿ ಸತ್ಯಾಗ್ರಹ ಕೇವಲ ಹಗರಣದ, ಭ್ರಷ್ಟಾಚಾರದ ತನಿಖೆಗೆ ಮಾತ್ರ ಸೀಮಿತವಾಗಿಲ್ಲ. ಅದು ಜಿಲ್ಲೆಯ ರೈತರಿಗೆ ಪರ್ಯಾಯ ವ್ಯವಸ್ಥೆಯಾಗಿ ಕಾರ್ಖಾನೆಯ ಪುನಶ್ಚೇತನದ ಉದ್ದೇಶವನ್ನೂ ಹೊಂದಿದೆ ಎಂದು ಸಹಕಾರಿ ಧುರೀಣ ಕೆ.ಪ್ರಕಾಶ್ಚಂದ್ರ ಶೆಟ್ಟಿ ನುಡಿದರು.

ಜಿಲ್ಲೆಯಲ್ಲಿ ವಾರಾಹಿ ಯೋಜನೆ ಹಾಗೂ ಸಕ್ಕರೆ ಕಾರ್ಖಾನೆಗಳನ್ನು ಕರಾವಳಿ ರೈತರನ್ನು ದೃಷ್ಟಿಯಲ್ಲಿಟ್ಟು ಪ್ರಾರಂಭಿಸಲಾ ಗಿತ್ತು. ವಿವಿಧ ಕಾರಣಗಳಿಂದ ಮುಚ್ಚಿದ ಕಾರ್ಖಾನೆಯಲ್ಲೀಗ 14 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ.ಇದರ ಕುರಿತು ತನಿಖೆಯಾಗಿ ತಪ್ಪಿತಸ್ಥರ ಕ್ರಮವಾಗಬೇಕು. ಜೊತೆಗೆ ರೈತರ ಹಿತಾಸಕ್ತಿ ರಕ್ಷಿಸಲು ಕಾರ್ಖಾನೆಯ ಪುನಶ್ಚೇತನಕ್ಕೂ ಪರ್ಯಾಯ ವ್ಯವಸ್ಥೆಯಾಗಬೇಕು ಎಂದು ಅವರು ಹೇಳಿದರು.

ರೈತರಿಗೆ ಭರವಸೆಯೇ ಬದುಕು. ಆದರೆ ಕೇವಲ ಹಣಮಾಡುವ ಉದ್ದೇಶದಿಂದ, ಕಬಳಿಸುವ ಉದ್ದೇಶದಿಂದಲೇ ಕೆಲವರು ಆಡಳಿತ ಮಂಡಳಿಯೊಳಗೆ ಬಂದು ಈ ಹಗರಣ ಮಾಡಿದ್ದಾರೆ ಎಂದವರು ಆರೋಪಿಸಿದರು.

ಭ್ರಷ್ಚಾಚಾರಿಗಳಿಗೆ ಪಾಠವಾಗಲಿ

ಸರಕಾರ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ಮಾಡಿರುವವರ ವಿರುದ್ಧ ಕ್ರಮಕೈಗೊಂಡು ಶಿಕ್ಷಿಸುವ ಮೂಲಕ ಇಂಥ ಹಗರಣ ಮಾಡುವ ವರಿಗೆ ಪಾಠ ಕಲಿಸಬೇಕು. ಪ್ರತಾಪ್‌ಚಂದ್ರ ಶೆಟ್ಟಿ ನೇತೃತ್ವದಲ್ಲಿ ನಡೆಯುವ ಹೋರಾಟ ಈ ದಿಸೆಯಲ್ಲಿ ಮಾದರಿ ಹೋರಾಟವಾಗಬೇಕು ಎಂದು ಜಿಪಂನ ಮಾಜಿ ಅಧ್ಯಕ್ಷ ಬಿ.ಭುಜಂಗ ಶೆಟ್ಟಿ ನುಡಿದರು.

ರಾಜ್ಯದಲ್ಲಿ ನಮ್ಮದೇ ಸರಕಾರ ಇದ್ದರೂ, ಎರಡೂವರೆಗೆ ವರ್ಷಗಳಿಂದ ಹೋರಾಟ ನಡೆಸಬೇಕಾಗಿರುವುದು ದುರದೃಷ್ಟಕರ. ಇದಕ್ಕೆ ಭ್ರಷ್ಟ ಅಧಿಕಾರಿಗಳು ಹಗರಣದಲ್ಲಿ ಶಾಮೀಲಾಗಿರುವುದೇ ಕಾರಣ ಎಂದು ಅವರು ಹೇಳಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X