Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 14ರಿಂದ ಪುತ್ತಿಗೆ ಮಠದಲ್ಲಿ ಮೊಬೈಲ್...

ಮೇ 14ರಿಂದ ಪುತ್ತಿಗೆ ಮಠದಲ್ಲಿ ಮೊಬೈಲ್ ವರ್ಜನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ8 May 2026 9:18 PM IST
share
ಮೇ 14ರಿಂದ ಪುತ್ತಿಗೆ ಮಠದಲ್ಲಿ ಮೊಬೈಲ್ ವರ್ಜನ ಶಿಬಿರ

ಉಡುಪಿ, ಮೇ 8: ಉಡುಪಿ ಶ್ರೀಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯ ಶ್ರೀಸುಶ್ರೀಂದ್ರ ತೀರ್ಥರ ಸಂಕಲ್ಪ ಮತ್ತು ಮಾರ್ಗದರ್ಶನದಂತೆ 8ರಿಂದ 12 ವಯೋಮಾನದ ಬಾಲಕ, ಬಾಲಕಿಯರಿಗಾಗಿ ಇದೇ ಮೇ 14 ರಿಂದ ಮೇ 18ರವರೆಗೆ ಸನಿವಾಸ ಮೊಬೈಲ್ ವರ್ಜನ ಶಿಬಿರ ಹಿರಿಯಡ್ಕದ ಸಮೀಪದಲ್ಲಿರುವ ಪುತ್ತಿಗೆ ಮೂಲ ಮಠದಲ್ಲಿ ನಡೆಯಲಿದೆ ಎಂದು ಉಡುಪಿ ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.

ಈ ಶಿಬಿರದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಹೆಸರು ನೊಂದಣಿ ಮಾಡಿಕೊಳ್ಳಲು ಮೇ 11 ಕೊನೆಯ ದಿನವಾಗಿರುತ್ತದೆ. ಕೇವಲ 50 ಶಿಬಿರಾರ್ಥಿಗಳಿಗೆ ಮಾತ್ರ ಇದರಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ಮೇ 17ರಂದು ಶಿಬಿರಾರ್ಥಿಗಳ ಹೆತ್ತವರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಣಿಪಾಲದ ಕೆಎಂಸಿಯ ಮನೋಚಿಕಿತ್ಸಾ ವಿಭಾಗ ಮತ್ತು ಉಡುಪಿಯ ಪತಂಜಲಿ ಯೋಗ ಸಮಿತಿಗಳ ಸಹ ಯೋಗದೊಂದಿಗೆ ಹಿರಿಯಡ್ಕದಲ್ಲಿರುವ ಶ್ರೀಪುತ್ತಿಗೆ ಮೂಲಮಠದಲ್ಲಿ ನಡೆಯಲಿರುವ ಈ ಶಿಬಿರವು, ಮೊಬೈಲ್ ಬಳಕೆಯ ಪ್ರಮಾಣ ಅತ್ಯವಶ್ಯಕ ಮತ್ತು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಆಗುವಂತೆ ಪ್ರೇರೇಪಣೆ ನೀಡುವತ್ತ ಗಮನ ಹರಿಸಲಿದೆ.

ಶಿಬಿರದಲ್ಲಿ ಆರೋಗ್ಯಪೂರ್ಣ ದಿನಚರಿ, ಒಳಾಂಗಣ- ಹೊರಾಂಗಣ ಕ್ರೀಡೆಗಳು, ಯೋಗ, ಓದು, ಭಜನೆ, ಭಗವದ್ಗೀತೆ, ಚರ್ಚೆ, ಕರಕುಶಲ ಚಟುವಟಿಕೆ, ಪೇಂಟಿಂಗ್, ಮ್ಯಾಜಿಕ್, ಅಡುಗೆ, ಕುಣಿತಭಜನೆ, ನೃತ್ಯ, ಯಕ್ಷಗಾನ ಮುಂತಾದ ಆಯ್ದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೇರಣೆ ನೀಡಲಾಗುವುದು.

ಮೊಬೈಲ್‌ನಿಂದ ಆಗುವ ದುಷ್ಪರಿಣಾಮಗಳು, ಜಂಕ್‌ಫುಡ್‌ನ ಅಪಾಯ, ಕೌನ್ಸೆಲಿಂಗ್, ಕುಟುಂಬ ಬಾಂಧವ್ಯ, ಹೆತ್ತವರ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ತಜ್ಞರಿಂದ ಮಾಹಿತಿ ಒದಗಿಸಲಾಗುವುದು. ಮಣಿಪಾಲ

ಆಸ್ಪತ್ರೆಯ ಡಾ.ಸುಮಾ ಉಡುಪ, ಗಾಂಧೀ ಆಸ್ಪತ್ರೆಯ ಡಾ.ವ್ಯಾಸರಾಜ ತಂತ್ರಿ, ಡಾ .ಸುಧೀರ್‌ರಾಜ್ ನಿಟ್ಟೆ, ಡಾ. ಶ್ರುತಿ ಬಲ್ಲಾಳ್, ರಾಘವೇಂದ್ರ ಭಟ್ ಪಣಿಯಾಡಿ, ವಿದುಷಿ ಉಷಾ ಹೆಬ್ಬಾರ್, ಗೋವರ್ಧನ ಆಚಾರ್ಯ, ವಿದ್ವಾನ್ ಕೆ.ವಿ. ರಮಣಾಚಾರ್ಯ, ವಿದುಷಿ ಅಯನಾ ವಿ. ರಮಣ್ ಮೂಡುಬಿದಿರೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ವಿದ್ವಾನ್ ಕೆ.ವಿ. ರಮಣಾಚಾರ್ಯ ಹಾಗೂ ಉಮಾ ಪ್ರಸಾದ್ ಅವರು ಶಿಬಿರದ ಸಂಚಾಲಕರಾಗಿ ಕಾರ್ಯನಿರ್ವ ಹಿಸುತ್ತಿದ್ದಾರೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ 8792158946/9880605691ನ್ನು ಸಂಪರ್ಕಿಸು ವಂತೆ ಶ್ರೀಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X