Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಮ ಮಂದಿರ ಅವರದ್ದು ಅಲ್ಲ, ನಮ್ಮದು...

ರಾಮ ಮಂದಿರ ಅವರದ್ದು ಅಲ್ಲ, ನಮ್ಮದು ಅಲ್ಲ, 140 ಕೋಟಿ ಜನರದ್ದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ17 Jan 2024 11:51 AM IST
share
ರಾಮ ಮಂದಿರ ಅವರದ್ದು ಅಲ್ಲ, ನಮ್ಮದು ಅಲ್ಲ, 140 ಕೋಟಿ ಜನರದ್ದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ, ಜ.17: 'ರಾಮ ಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗುತ್ತೇನೆ. ರಾಮ ಮಂದಿರ ಅವರದ್ದೂ, ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ ದೇಶದ 140 ಕೋಟಿ ಜನರಿಗೆ ಸೇರಿದ್ದು' ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿಯನ್ನು ಆಚರಿಸುತ್ತೇನೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀಭಕ್ತಳು ಎಂದು ಪದೇ ಪದೇ ಹೇಳುತ್ತೇನೆ ಎಂದರು.

ಸಿಎಂ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವೆ, ಅನಂತ್ ಕುಮಾರ್ ಚುನಾವಣೆ ಬಂದಾಗಷ್ಟೇ ಮುಖ ತೋರಿಸುತ್ತಾರೆ. ಅವರು ಹಿಂದಿನಿಂದಲೂ ಇದನ್ನೇ ಮಾಡಿಕೊಂಡು ಬರುತ್ತಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೀಗೆ ಮಾತನಾಡಿದ್ದನ್ನು ಯಾರು ಸಹಿಸಲು ಹಾಗೂ ಕ್ಷಮಿಸಲು ಸಾಧ್ಯವಿಲ್ಲ. ರಾಜಕೀಯವಾಗಿ ಇದು ಉಪಯೋಗವಾಗುತ್ತದೆ ಎಂದು ಅವರು ಭಾವಿಸಿದ್ದರೆ ಅದು ಅವರ ಬಾಲಿಶತನ ಎಂದು ಅವರು ಟೀಕಿಸಿದರು.

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತೀಂದ್ರ ಸಿದ್ದರಾಮಯ್ಯ ಯಾವ ಕಾರಣಕ್ಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸೀಟು ಗಳಿಸುವುದು ನಮ್ಮ ಗುರಿ. ಯತೀಂದ್ರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

130 ಸೀಟು ಗೆದ್ದ ಮೇಲೆ ಐದು ಗ್ಯಾರಂಟಿ ಅನುಷ್ಠಾನವಾಗಿದೆ. ನಮ್ಮ ನಮ್ಮ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮತದಾರರು ಅತ್ಯಂತ ಹೆಚ್ಚು ಸೀಟುಗಳನ್ನು ಗೆಲ್ಲಿಸಿ ಕೊಡುತ್ತಾರೆ ಎಂಬ ನಂಬಿಕೆ ಇದೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉತ್ತರ ಹೈಕಮಾಂಡ್ ಕೊಡುತ್ತದೆ. ಈ ಬಗ್ಗೆ ನಾನು ಪ್ರತಿಕ್ರಿಯಿಸಿ ಗೊಂದಲ ಸೃಷ್ಠಿ ಮಾಡಿಕೊಳ್ಳುವುದಿಲ್ಲ ಎಂದರು.

ಬರ, ನೆರೆ, ಜಿಎಸ್ ಟಿ ವಿಚಾರದಲ್ಲಿ ರಾಜ್ಯದ ಜನತೆಯ ಸಹಾಯಕ್ಕೆ ಯಾವ ಸಂಸದರು ಬರುತ್ತಿಲ್ಲ. ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಇಲ್ಲ. ರಾಜ್ಯದ ಜನ ಮುಂದೆ ಏನು ಮಾಡಬೇಕು ಎಂದು ಈಗಾಗಲೇ ನಿರ್ಧಾರ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ರೋಡ್ ಶೋಗಳು ರಾಜಕೀಯದಲ್ಲಿ ಸಹಜ. ಅವರೂ ಮಾಡುತ್ತಾರೆ, ನಾವು ಕೂಡ ಮಾಡುತ್ತೇವೆ ಎಂದು ಹೇಳಿದರು.

ಪರ್ಯಾಯ: ಉಡುಪಿ ನಗರಾಭಿವೃದ್ಧಿಗೆ 10 ಕೋಟಿ ರೂ. ಬಿಡುಗಡೆ

ಉಡುಪಿ ಶ್ರೀ ಕೃಷ್ಣಮಠದ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿಗೆ ಭಾಗಿಯಾಗುತ್ತಿದ್ದೇನೆ. ಕೃಷ್ಣ ಮಠದ ಸಂಸ್ಕೃತಿ ಪದ್ಧತಿಯಲ್ಲಿ ಕುಟುಂಬ ಸಮೇತ ಭಾಗಿಯಾಗಲು ಬಂದಿದ್ದೇನೆ. ಸಿಎಂ ಸಿದ್ದರಾಮಯ್ಯರಿಗೂ ಆಹ್ವಾನ ಮಾಡಲಾಗಿದೆ. ಬೇರೆ ಕಾರ್ಯಕ್ರಮ ಇರುವುದರಿಂದ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಗೃಹ ಸಚಿವ ಪರಮೇಶ್ವರ್ ಉಡುಪಿ ಜಿಲ್ಲೆಯ ಪ್ರವಾಸ ಮಾಡುತ್ತಿದ್ದಾರೆ ಎಂದರು.

ನಗರ ಸುಂದರಿಕರಣಕ್ಕೆ ಸರಕಾರ ಸಹಕಾರ ನೀಡಿದೆ. ಪರ್ಯಾಯ ಕಾರ್ಯಕ್ರಮದ ಸಾಂಸ್ಕೃತಿಕ ತಂಡಗಳು ಟ್ಯಾಬ್ಲೋಗಳನ್ನು ವ್ಯವಸ್ಥೆ ಮಾಡಿದ್ದೇವೆ. ಮಠದವರು ಕೇಳಿದ ಎಲ್ಲಾ ಬೇಡಿಕೆಗಳಿಗೆ ನಾವು ಸ್ಪಂದಿಸುತ್ತಿದ್ದೇವೆ. ನಗರೋತ್ಥಾನದಲ್ಲಿ 30 ಕೋಟಿ ರೂ. ಅನುದಾನವನ್ನು ನಗರ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ 10 ಕೋಟಿ ರೂ. ಅನುದಾನದ ಬೇಡಿಕೆ ಇಡಲಾಗಿದ್ದು, ಅದು ಶೀಘ್ರವೇ ತಲುಪಲಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X