ದೀಕ್ಷಾಭೂಮಿ ಯಾತ್ರೆಗೆ ನಿಯೋಜನೆ: ಅರ್ಜಿ ಸಲ್ಲಿಕೆಗೆ ಅವಧಿ ಸೆ.15ಕ್ಕೆ ವಿಸ್ತರಣೆ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ -https://swd.karnataka.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 15ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಎರಡು ದಿನಗಳ ಒಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2574892 ಇಲ್ಲಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





