ಮಣಿಪಾಲ ಕೆಎಂಸಿ, ಉಡುಪಿ ಟಿಎಂಎಪೈ ಆಸ್ಪತ್ರೆಗಳಿಗೆ ಆ.15ರಿಂದ 17ರವರೆಗೆ ರಜೆ

ಮಣಿಪಾಲ, ಆ.12: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ.ಟಿ.ಎಂ.ಎ ಪೈ ಆಸ್ಪತ್ರೆ ಮತ್ತು ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಗಳಿಗೆ ಆ.15ರಿಂದ ಆ.17ರವರೆಗೆ ಮೂರು ದಿನಗಳ ಕಾಲ ರಜೆಯನ್ನು ಘೋಷಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಆದರೂ, ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿ ಸುತ್ತವೆ. ತುರ್ತುರಹಿತ ಆಸ್ಪತ್ರೆ ಭೇಟಿಗಳನ್ನು ಅದಕ್ಕೆ ಅನುಗುಣವಾಗಿ ಯೋಜಿಸುವಂತೆ ಮಣಿಪಾಲ ಕೆಎಂಸಿಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





