ಮೇ 16ರಂದು ಡಾ. ಕಾರಂತರ ಬರಹಗಳು ಮತ್ತು ಜಾನಪದ: ಅಧ್ಯಯನ ಶಿಬಿರ
ಉಡುಪಿ: ಕರ್ನಾಟಕ ಸರಕಾರದ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಅಜ್ಜರಕಾಡಿನ ಡಾ.ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯ ದಲ್ಲಿ ಡಾ.ಶಿವರಾಮ ಕಾರಂತರ ಬರಹಗಳು ಮತ್ತು ಜಾನಪದ ಅಧ್ಯಯನ ಶಿಬಿರ ಮೇ 16ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ.
ಕಾರಂತರ ಬರಹಗಳನ್ನು ಕೇಂದ್ರವಾಗಿಟ್ಟುಕೊಂಡು ಜಾನಪದ ಪ್ರಕಾರಗಳ ಸ್ವರೂಪವನ್ನು ಅರಿಯುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದು, 25 ಜನರಿಗೆ ಮಾತ್ರ ಭಾಗವಹಿಸುವ ಅವಕಾಶವಿದೆ. ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕ ವಿರುವುದಿಲ್ಲ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮುಕ್ತವಾಗಿ ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.
ಶಿಬಿರದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿಕೊಳ್ಳಲು ಡಾ. ಶಿವರಾಮ ಕಾರಂತ ಟ್ರಸ್ಟಿನ ಮೊ.ನಂ: 6362517472, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ಮೊ.ನಂ: 9164615883ನ್ನು ಸಂಪರ್ಕಿಸಬಹುದು ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.





