ಮೇ 16ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಮೇ 13: ಉದ್ಯಾವರದ ಐಒಸಿಲ್ ಪೆಟ್ರೋಲ್ ಬಂಕ್ ಹತ್ತಿರದ ಅರವಿಂದ್ ಮೋಟರ್ಸ್ ಪ್ರೈ.ಲಿ ಇಲ್ಲಿ ಮೇ 16ರಂದು ಬೆಳಗ್ಗೆ 10:30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಪಿಯುಸಿ, ಐಟಿಐ ಮತ್ತು ಇತರೆ ಪವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ, 8105618291, 9945856670, 8105774936 ಹಾಗೂ 9901472710ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





